ಕೊಪ್ಪಳ | ಸರ್ಕಾರದ ವಿರುದ್ಧ ಸಂಸದ ಸಂಗಣ್ಣ ಕರಡಿ ಉಪವಾಸ ಸತ್ಯಾಗ್ರಹ

Date:

ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪರಿವರ್ತಕಗಳೂ ಸೇರಿದಂತೆ ಎಲ್ಲ ಮೂಲ ಸೌಕರ್ಯಗಳನ್ನು ಉಚಿತವಾಗಿ ಒದಗಿಸಬೇಕು ಎಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಒತ್ತಾಯಿಸಿದ್ದಾರೆ. ಅವರು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.

“ಇಂದಿನ ಪರಿಸ್ಥಿತಿಯಲ್ಲಿ ರೈತರು ಬದುಕುವುದೇ ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ರೈತರಿಗೆ ಪಂಪ್​ಸೆಟ್‌ ಸಲಕರಣೆಗಳನ್ನು ಉಚಿತವಾಗಿ ಕೊಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಸೆ.22ರಂದು ಆ ಬಗ್ಗೆ ಆದೇಶ ಹೊರಡಿಸಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಗಮನಕ್ಕೆ ಬಂದಿಲ್ಲವೆಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ. ಆ ಆದೇಶವನ್ನು ರದ್ದುಪಡಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರ ತನ್ನ ಆದೇಶ ರದ್ದುಪಡಿಸುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ. ಆದೇಶ ರದ್ದಾದರೆ ಮಾತ್ರ ಉಪವಾಸ ಸತ್ಯಾಗ್ರಹ ಕೈಬಿಡುತ್ತೇನೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...