ಕೊಪ್ಪಳ | ವಿವಿಧ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

Date:

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಅರೆಕಾಲಿಕ ಉಪನ್ಯಾಸಕರು ಸೇವಾಭದ್ರತೆ, ವೇತನ ಹೆಚ್ಚಳ, ನಿಗದಿತ ಅವಧಿಗೆ ವೇತನ ಸೇರಿ ಇತರೆ ಬೇಡಿಕೆಗಳಿಗಾಗಿ ಆಗ್ರಹಿಸಿ ಕಾಲೇಜು ಎದುರು ಪ್ರತಿಭಟನೆ ನಡೆಸಿ ಸಾಂಕೇತಿಕವಾಗಿ ಹಿಂಪಡೆದರು.

ಬೆಳಗಾವಿ ಅಧಿವೇಶನದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಅತಿಥಿ ಮತ್ತು ಅರೆಕಾಲಿಕ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ತರಗತಿಗಳು ಬಹಿಷ್ಕರಿಸಿ, ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಂತ್ರಿಕ ಶಿಕ್ಷಣ ಇಲಾಖೆಯಡಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹಲವು ವರ್ಷಗಳ ಹಿಂದೆ ಅರೆಕಾಲಿಕ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಸೂಕ್ತ ಸೌಲಭ್ಯ ಒದಗಿಸದೇ ದುಡಿಸಿಕೊಳ್ಳಲಾಗುತ್ತಿದೆ. ಕೇವಲ 15ಸಾವಿರ ರೂ. ವೇತನಕ್ಕೆ ಕಾಲೇಜಿನಲ್ಲಿ ಬೋಧನೆ ಮಾಡುತ್ತಿದ್ದು, ಈ ವೇತನದಿಂದ ಕುಟುಂಬ ನಿರ್ವಹಣೆ ತುಂಬ ಕಷ್ಟಕರವಾಗಿದೆ. ವೇತನಹೆಚ್ಚಳ, ಸೇವಾಭದ್ರತೆ, ಸೇವೆ ಕಾಯಮಾತಿ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಕ್ರಮಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಈ ವೇಳೆ ಚೈತ್ರಾ ಗಬ್ಬೂರು, ಸೈಯದ್ ಫರೀದ್ ಇನ್ನಿತರರು ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಡಿಕೆಗಳು

  1. ಪ್ರಸ್ತುತ ಪಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ಕಾರ್ಯಭಾರ, ವೇತನ, ಕೃಪಾಂಕ, ಸೇವಾ ಪ್ರಮಾಣ ಪತ್ರ ನೀಡುತ್ತಿರುವ ರೀತಿಯಲ್ಲೇ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರುಗಳಿಗೆ ವಿಸ್ತರಿಸುವುದು.
  2. ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಖಾಯಂಗೊಳಿಸಬೇಕು. ಉಪನ್ಯಾಸಕರುಗಳನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಅರಕಾಲಿಕ ಉಪನ್ಯಾಸಕರುಗಳಿಗೆ ಪ್ರತಿ ತಿಂಗಳೂ ವೇತನ ನೀಡುವುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...