ಕೊಪ್ಪಳ | 3,469 ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ; ಪ್ರತೀ ನಿತ್ಯ ಪರದಾಟ

Date:

ಕೊಪ್ಪಳದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಒಟ್ಟು 3,469 ವಿದ್ಯಾರ್ಥಿಗಳು ಪದವಿ ಅಭ್ಯಾಸ ಮಾಡುತ್ತಿದ್ದು, ಅವರಿಗೆ ಕೇವಲ ಎರಡೇ ಶೌಚಾಲಯಗಳಿದ್ದು, ಪ್ರತೀ ನಿತ್ಯ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಕಾಲೇಜಿನಲ್ಲಿ 2,306 ಜನ ಬಾಲಕರು ಮತ್ತು 1,163 ಮಂದಿ ಬಾಲಕಿಯರು ಇದ್ದಾರೆ. ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ ಹಾಗೂ ಪತ್ರಿಕೋದ್ಯಮ ಸೇರಿದಂತೆ ಹಲವು ಕೋರ್ಸ್‌ಗಳಿವೆ. ಇತ್ತೀಚೆಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಅರ್ಹತಾ ಪರಿಷತ್ತಿನ (ನ್ಯಾಕ್) ಉನ್ನತ ಸಮಿತಿ ಸದಸ್ಯರು ಕಾಲೇಜಿನ ಚಟುವಟಿಕೆಗಳನ್ನು ಪರಿಶೀಲಿಸಿ, ‘ಎ’ ಗ್ರೇಡ್ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಈ ಕಾಲೇಜು ನ್ಯಾಕ್ ಸಮಿತಿಯ ವರದಿಯಲ್ಲಿ ಅಗ್ರಸ್ಥಾನದಲ್ಲಿದೆ.

ಆದರೆ, ವಿದ್ಯಾರ್ಥಿಗಳಿಗೆ ಮೂಲಸೌಕರ್ಯದ ಕೊರತೆ ಕಾಡುತ್ತಿದೆ. ನೆಲಮಹಡಿಯಲ್ಲಿ ಎರಡು ಶೌಚಾಲಯಗಳಿದ್ದು. ದುರಸ್ತಿಯಾಗಿಲ್ಲ. ಪುರುಷರ ಶೌಚಾಲಯದಲ್ಲಿ ಕಾಲೇಜಿನ ವ್ಯರ್ಥ ಹಾಗೂ ಹಾಳಾದ ಸಾಮಗ್ರಿಗಳನ್ನು ಸಂಗ್ರಹಿಸಿ ಇರಿಸಲಾಗಿದೆ. ಮೊದಲ ಮಹಡಿಯಲ್ಲಿರುವ ಪುರುಷರ ಮತ್ತು ಮಹಿಳೆಯರ ತಲಾ ಒಂದು ಶೌಚಾಲಯ ಮಾತ್ರ ಬಳಕೆಗೆ ಯೋಗ್ಯವಿದ್ದು, ಇವೇ ವಿದ್ಯಾರ್ಥಿಗಳಿಗೆ ಆಸರೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾಲೇಜು ನಗರದ ಮಧ್ಯಭಾಗದಲ್ಲಿದ್ದು, ಸಮೀಪದಲ್ಲಿ ಸರ್ಕಾರಿ ಶಾಲೆ, ತಾಲ್ಲೂಕು ಕ್ರೀಡಾಂಗಣವಿದೆ. ಸದಾ ಜನನಿಬಿಡ ಪ್ರದೇಶವಾದ ಕಾರಣ ವಿದ್ಯಾರ್ಥಿಗಳಿಗೆ ಬಯಲು ಶೌಚಕ್ಕೆ ಹೋಗಲೂ ಅವಕಾಶವಿಲ್ಲ. ಇಷ್ಟೊಂದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳನ್ನು ನಿರ್ವಹಣೆ ಮಾಡಲು ಸಾಧ್ಯವಾಗದಕ್ಕೆ ಬೆಳಿಗ್ಗೆ 8ರಿಂದ ಮಧ್ಯಾಹ್ನ 12ರ ತನಕ ಮತ್ತು 12ರ ಬಳಿಕ ಸಂಜೆ 4.30ರ ತನಕ ಎರಡು ಹಂತದಲ್ಲಿ ವಿವಿಧ ಕೋರ್ಸ್‌ಗಳಿಗೆ ಪಾಠ ಮಾಡಲಾಗುತ್ತಿದೆ. ಕಾಲೇಜಿಗೆ ನಗರದ ಹೊರವಲಯದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗಿದೆಯಾದರೂ ಇನ್ನೂ ಸ್ಥಳಾಂತರಗೊಂಡಿಲ್ಲ.

ವಿಜ್ಞಾನದ ಪ್ರಯೋಗಗಳಿಗೆ ಲ್ಯಾಬ್ ಸೌಲಭ್ಯ ಉತ್ತಮವಾಗಿರುವ ಕಾರಣ ಕೊಪ್ಪಳದ ಗ್ರಾಮೀಣ ಪ್ರದೇಶ, ಗಂಗಾವತಿ, ಕುಷ್ಟಗಿ ತಾಲೂಕು ಹಾಗೂ ಹಗರಿಬೊಮ್ಮನಳ್ಳಿಯಿಂದಲೂ ಈ ಕಾಲೇಜಿಗೆ ವಿದ್ಯಾರ್ಥಿಗಳು ಬರುತ್ತಾರೆ.

ಸಾವಿರಾರು ಸಂಖ್ಯೆಯಲ್ಲಿ ಓದುವ ವಿದ್ಯಾರ್ಥಿಗಳಿಗೆ ಸಮರ್ಪಕ ಶೌಚಾಲಯವಿಲ್ಲ. ಹಳ್ಳಿಗಳಿಂದ ಬೆಳಿಗ್ಗೆಯೇ ಕಾಲೇಜಿಗೆ ಬಂದರೂ ಸರಿಯಾಗಿ ನೀರು ಕುಡಿಯಲು ಆಗುವುದಿಲ್ಲ. ನೀರು ಕುಡಿದರೆ ಪದೇ ಪದೇ ಶೌಚಕ್ಕೆ ಹೋಗಬೇಕಾಗುತ್ತದೆ ಎಂಬ ಆತಂಕದಲ್ಲಿ, ನೀರು ಕುಡಿಯುಲು ಯೋಚಿಸಬೇಕಾದ ಪರಿಸ್ಥಿತಿ ಇದೆ ಎನ್ನುತ್ತಾರೆ ವಿದ್ಯಾರ್ಥಿನಿಯರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...