ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

Date:

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೊಪ್ಪಳದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಎಐಸಿಸಿ ಮೂಲಗಳು ಸ್ಥಳೀಯ ಕಾಂಗ್ರೆಸ್ ಘಟಕಕ್ಕೆ ಮಾಹಿತಿ ನೀಡದೆ ಎನ್ನಲಾಗಿದೆ. ಪ್ರಿಯಾಂಕಾ ಸ್ಪರ್ಧೆಗೆ ಕೊಪ್ಪಳವನ್ನು ಆಯ್ಕೆಯಾಗಿ ಪರಿಗಣಿಸಲಾಗುತ್ತಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಕೊಪ್ಪಳ ಇಲ್ಲದಿದ್ದಾರೆ ತೆಲಂಗಾಣದ ಯಾವುದಾದರೂ ಕ್ಷೇತ್ರದಲ್ಲಿ ಪ್ರಿಯಾಂಕ ಸ್ಪರ್ಧಿಸಬಹುದು ಎಂಬ ಮಾತುಗಳೂ ಇವೆ. ‘ದಯವಿಟ್ಟು ಕೊಪ್ಪಳಕ್ಕೆ ಬನ್ನಿ’ ಎಂಬ ಹ್ಯಾಷ್‌ಟ್ಯಾಗ್‌ ಜೊತೆ ಕೆಲವರು ಟ್ವಿಟರ್‌ನಲ್ಲಿ ಪ್ರಿಯಾಂಕಾ ಅವರಿಗೆ ಆಹ್ವಾನ ನೀಡುತ್ತಿದ್ದಾರೆ. ಆದರೆ, ಕಾಂಗ್ರೆಸ್‌ನ ಯಾವೊಬ್ಬ ಹಿರಿಯ ನಾಯಕರೂ ಇದನ್ನು ಖಚಿತಪಡಿಸಿಲ್ಲ.

ಕೊಪ್ಪಳದ ಹಾಲಿ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಬಿಜೆಪಿಯಿಂದ ಮತ್ತೆ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯವಾಗಿ ಸಂಸದರ ಮೇಲೆ ಅಸಮಧಾನ ಮತ್ತು ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆಯಲ್ಲಿ ಲಾಭ ನೀಡಲಿವೆ ಎಂದು ಕಾಂಗ್ರೆಸ್ಸಿಗರು ನಂಬಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ನಾಯಕಿ ಪ್ರಿಯಾಂಕಾ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಲು ಕೆಲಸ ಮಾಡುತ್ತೇವೆ ಎಂದು ಸ್ಥಳೀಯ ಕಾರ್ಯಕರ್ತರು ಹೇಳುತ್ತಿದ್ದಾರೆ. ಕೊಪ್ಪಳ ಕಾಂಗ್ರೆಸ್‌ನ ಭದ್ರ ಬುನಾದಿಯಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 8 ಕ್ಷೇತ್ರಗಳ ಪೈಕಿ, ಕಾಂಗ್ರೆಸ್‌ 6 ಕ್ಷೇತ್ರಗಳನ್ನು ಗೆದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಅವರಿಗೆ ಸುರಕ್ಷಿತ ಕ್ಷೇತ್ರವೆಂದು ಹೇಳಲಾಗಿದೆ.

ಈ ಹಿಂದೆ ಇಂದಿರಾ ಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಿ ರಾಜಕೀಯ ಪುನರ್ಜನ್ಮ ಪಡೆದಿದ್ದರು. 1999ರಲ್ಲಿ ಸೋನಿಯಾ ಗಾಂಧಿ ಕೂಡ ಬಳ್ಳಾರಿಯಿಂದ ಸ್ಪರ್ಧಿಸಿದ್ದರು. ಹೀಗಾಗಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ಕೊಪ್ಪಳ ಉತ್ತಮ ಸ್ಥಳವಾಗಿದೆ. ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೂ ಅಭಿಮಾನಿಗಳ ದಂಡೇ ಇದೆ.

ಪ್ರಿಯಾಂಕಾ ಗಾಂಧಿ ಕೊಪ್ಪಳದಿಂದ ಸ್ಪರ್ಧಿಸಿದರೆ ಕರ್ನಾಟಕಕ್ಕೆ ವರದಾನವಾಗಲಿದೆ. ಅವರ ಸ್ಪರ್ಧೆ ರಾಜ್ಯಾದ್ಯಂತ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದು ಕೊಪ್ಪಳ ಕಾಂಗ್ರೆಸ್ ಸದಸ್ಯರು ಹೇಳುತ್ತಾರೆ. .

ಪ್ರಿಯಾಂಕಾ ಗಾಂಧಿ ಸ್ಪರ್ಧೆಯ ಸುದ್ದಿ ನಿಜವಲ್ಲ. ಕೊಪ್ಪಳದಲ್ಲಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...