ಕೊಪ್ಪಳ | ವಿಎಚ್‌ಪಿ ಸಂಕೀರ್ತನಾ ಯಾತ್ರೆ; ಗಂಗಾವತಿಯಲ್ಲಿ ಬಿಗಿ ಬಂದೋಬಸ್ತ್‌

Date:

ಕೋಮುಸೂಕ್ಷ್ಮ ಪಟ್ಟಣವಾಗಿರುವ ಗಂಗಾವತಿಯಲ್ಲಿ ಇಂದು ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್‌ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ. ಸಾವಿರಾರು ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟದಲ್ಲಿ ಡಿಸೆಂಬರ್ 24ರಂದು ಬೃಹತ್ ಪೂಜೆ ಹಮ್ಮಿಕೊಳ್ಳಲಾಗಿದೆ. ಉತ್ತರ ಕರ್ನಾಟಕದ ಭಾಗದ ಹನುಮ ಮಾಲಾಧಾರಿಗಳು ಅಂದು ಬೆಟ್ಟದಲ್ಲಿ ಮಾಲೆ ವಿಸರ್ಜನೆ ಮಾಡಲಿದ್ದಾರೆ. ಪ್ರತಿ ವರ್ಷ ಅದೇ ದಿನ ಸಂಕೀರ್ತನಾ ಯಾತ್ರೆಯನ್ನು ವಿಎಚ್‌ಪಿ ನಡೆಸುತ್ತಿತ್ತು. ಆದರೆ, ಈ ಬಾರಿ ಎರಡು ದಿನಗಳ ಮೊದಲೇ ಯಾತ್ರೆಯನ್ನು ಹಮ್ಮಿಕೊಂಡಿದೆ.

ಹೀಗಾಗಿ, ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಕೋಮು ದ್ವೇಷದ ಘೋಷಣೆಗಳನ್ನು ಕೂಗದಂತೆ ನೋಡಿಕೊಳ್ಳಲು ಹಾಗೂ ಶಾಂತಿ ಕದಡುವ ಕೆಲಸಗಳಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಪಟ್ಟಣದಲ್ಲಿ99 ಸಿಸಿಟಿವಿ ಅಳವಡಿಸಲಾಗಿದೆ. ಇಬ್ಬರು ಡಿವೈಎಸ್‌ಪಿ, 26 ಸಿಪಿಐ, 62 ಪಿಎಸ್‌ಐ ಸೇರಿ 1,650 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...