ಉಡುಪಿ | ಕೊರಗ ಸಂಘಗಳ ಒಕ್ಕೂಟದಿಂದ ಕಂದಾಯ ಸಚಿವರಿಗೆ ಮನವಿ

Date:

ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ) ಕರ್ನಾಟಕ – ಕೇರಳದ ನಿಯೋಗವು ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ರವರಿಗೆ ಉಡುಪಿ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆಯ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು.

ಸಮುದಾಯದ ಪ್ರಮುಖ ಬೇಡಿಕೆಗಳಾದ ಸಮುದಾಯದ 800 ದರ್ಕಾಸು ಅರ್ಜಿ ಸಲ್ಲಿಸಿದ್ದು ಕೂಡಲೇ ಭೂಮಿ ಗುರುತಿಸಿ ಭೂಮಿ ಹಕ್ಕುಪತ್ರ ನೀಡುವುದು, ಹಿರಿಯರ ಹೆಸರಿನಲ್ಲಿರುವ ಜಮೀನಿನ ಖಾತೆ ಬದಲಾವಣೆ ವಿಶೇಷ ಆಂದೋಲನ ನಡೆಸಿ ಖಾತೆ ಬದಲಾವಣೆಗೆ ಅಧಿಕಾರಿಗಳಿಗೆ ಸೂಚಿಸಬೇಕು, ಜಮೀನು ಹೊಂದಿದ ಹಕ್ಕುದಾರರ ಗಡಿಗುರುತು ನಕ್ಷೆ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕಿಗೆ ವಿಶೇಷ ಸರ್ವೇಯವರು ನೇಮಕ ಮಾಡಬೇಕು.

ಕೊರಗರ ಭೂಮಿ ಸಮಸ್ಯೆಗಳನ್ನು ಬಗೆಹರಿಸಲು ವಿಶೇಷ ಅಧಿಕಾರಿಗಳನ್ನು ಜಿಲ್ಲಾಧಿಕಾರಿಗಳಿಗೆ ನೇಮಕ ಮಾಡಬೇಕು. ಗೇರು ಕೃಷಿ ಅಭಿವೃದ್ಧಿ ನಿಗಮ ಹಾಗೂ ಅರಣ್ಯ ಇಲಾಖೆ ವಾಸದಲ್ಲಿರುವ ಡಿಸಿ ಮನ್ನಾ ಭೂಮಿಯಲ್ಲಿ ಕೊರಗರಿಗೆ ಹಂಚಲು ಕ್ರಮ ವಹಿಸಬೇಕು. ಡಾ. ಮಹಮ್ಮದ್ ಪೀರ್ ವರದಿಯಂತೆ ಕೊರಗ ಸಮುದಾಯದ ಪ್ರತಿಯೊಂದು ಕುಟುಂಬಕ್ಕೂ ಕನಿಷ್ಠ 1 ಎಕ್ರೆ ಕೃಷಿ ಭೂಮಿ ಒದಗಿಸಬೇಕು. ಕೊರಗ ಸಮುದಾಯದ ಅಧ್ಯಯನ ಕೇಂದ್ರ ಸ್ಥಾಪನೆಗೆ 100 ಎಕ್ರೆ ಭೂಮಿ ಕಾದಿರಿಸಬೇಕು. ಮತ್ತು ಈಗಾಗಲೇ ಕೊರಗರಿಗೆ ಹಕ್ಕುಪತ್ರ ನೀಡಲು ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಪರಿಗಣಿಸಿ ಹಕ್ಕುಪತ್ರ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯೋಗದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಶೀಲ ನಾಡ, ಸಂಯೋಜಕರಾದ ಪುತ್ರನ್ ಹೆಬ್ರಿ, ಕೊಕ್ಕರ್ಣೆ ಸಂಘದ ಸದಸ್ಯರಾದ ಶೇಖರ ಕೆಂಜೂರು, ಸುಪ್ರಿಯಾ ಎಸ್ ಕಿನ್ನಿಗೋಳಿ, ನರಸಿಂಹ ಪೆರ್ಡೂರು, ಶುಭ, ಶೋಭಾ, ವಸಂತ, ಮುದ್ದು, ಸುನಂದಾ ಮತ್ತು ಚಂದ್ರವತಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...