ಉಡುಪಿ | 25 ದಿನಗಳಿಂದ ಕೊರಗ ಸಮುದಾಯದ ಧರಣಿ ಸತ್ಯಾಗ್ರಹ , ಅಲ್ಪಸಂಖ್ಯಾತರ ವೇದಿಕೆಯಿಂದ ಬೆಂಬಲ

Date:

ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಕೊರಗ ಸಮುದಾಯದ ಯುವಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಕಲ್ಪಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟು, ಕಳೆದ ಸುಮಾರು 25 ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.

ಈ ಹೋರಾಟಕ್ಕೆ ಬೆಂಬಲ ಸೂಚಿಸುವ ಉದ್ದೇಶದಿಂದ ಇಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಪದಾಧಿಕಾರಿಗಳು ಧರಣಿ ಸ್ಥಳಕ್ಕೆ ಭೇಟಿ ನೀಡಿ, ಕೊರಗ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಈ ವೇಳೆ ಮಾತನಾಡಿದ ಕೊರಗ ಸಮುದಾಯದ ಮುಖಂಡರು, ನಮ್ಮ ಸಮುದಾಯ ದಿನದಿಂದ ದಿನಕ್ಕೆ ನಶಿಸಿ ಹೋಗುತ್ತಿರುವ ಸ್ಥಿತಿಯಲ್ಲಿದೆ. ಪ್ರಸ್ತುತ ನಮ್ಮ ಜನಸಂಖ್ಯೆ ಕೇವಲ 14,000ಕ್ಕೆ ಸೀಮಿತವಾಗಿದೆ. ಇದಕ್ಕೆ ಪ್ರಮುಖ ಕಾರಣ ನಮ್ಮ ಯುವಜನರಿಗೆ ಉತ್ತಮ ದರ್ಜೆಯ ಉದ್ಯೋಗಗಳ ಕೊರತೆ. ಪದವಿ ಪಡೆದ ಯುವಕರು ಸಹ ಪೌರ ಕಾರ್ಮಿಕರಾಗಿ ದುಡಿಯಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದರಿಂದಾಗಿ ಕೆಲವರು ಕುಡಿಯುವ ದುಶ್ಚಟಕ್ಕೆ ಬಲಿಯಾಗಿ, 35–40 ವರ್ಷದಲ್ಲಿಯೇ ಅನಾರೋಗ್ಯಕ್ಕೆ ಒಳಗಾಗಿ ಸಾವನ್ನಪ್ಪುತ್ತಿದ್ದಾರೆ ಎಂದು ತಮ್ಮ ನೋವನ್ನು ಹಂಚಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009049357

ಇದನ್ನು ಅರಿತುಕೊಂಡು, ಕಳೆದ ಹಲವು ವರ್ಷಗಳಿಂದ ಕೊರಗ ಸಮುದಾಯದ ಯುವಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ನೀಡಬೇಕೆಂಬ ನ್ಯಾಯಸಮ್ಮತ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗುತ್ತಿದೆ. ಆದರೆ, ಸರ್ಕಾರದ ಹಿರಿಯ ನಾಯಕರು ಕೇವಲ ಮನವಿ ಸ್ವೀಕರಿಸಿ ಭರವಸೆ ನೀಡುವುದರಲ್ಲಿಯೇ ಸೀಮಿತವಾಗಿದ್ದಾರೆ. ಈ ಕಾರಣದಿಂದಲೇ ಬೇಡಿಕೆ ಈಡೇರಿಸುವವರೆಗೆ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷರಾದ ಚಾರ್ಸ್ ಅಂಬ್ಲರ್ ಮಾತನಾಡಿ, ನಮ್ಮ ವೇದಿಕೆ ಸಂಪೂರ್ಣವಾಗಿ ಕೊರಗ ಸಮುದಾಯದ ಹೋರಾಟಕ್ಕೆ ಬೆಂಬಲ ನೀಡುತ್ತದೆ. ಈ ಕುರಿತು ಮುಖ್ಯಮಂತ್ರಿ ಅವರಿಗೆ ನಾವು ಸಹ ಮನವಿ ಸಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ವೇದಿಕೆಯ ಕಾರ್ಯದರ್ಶಿ ಝಫರುಲ್ಲಾ ಟಿ.ಎಂ. ಹೂಡೆ, ನಿಕಟಪೂರ್ವ ಅಧ್ಯಕ್ಷ ಇಸ್ಮಾಯಿಲ್ ಹುಸೈನ್ ಕಟ್ಪಾಡಿ, ಮಾಜಿ ಅಧ್ಯಕ್ಷ ಡಾ. ಜೆರಾಲ್ಡ್ ಪಿಂಟೊ, ಉಪಾಧ್ಯಕ್ಷೆ ಶಾಂತಿ ಪಿರೇರಾ, ಮೇರಿ ಡಿಸೋಜಾ, ಭಾರತೀಯ ಕ್ರೈಸ್ತ ಒಕ್ಕೂಟದ ಗ್ಲಾಡ್ಸನ್ ಕರ್ಕಡ, ಉಡುಪಿ ಯುಬಿಎಂಸಿ ಚರ್ಚ್ ನ ಲಿಯೊನಾರ್ಡ್ ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...