ಉಡುಪಿ | ಕೊರಗ ಸಮುದಾಯದ ಅಹೋರಾತ್ರಿ ಧರಣಿಗೆ ಎಸ್‌ಐಓ ಬೆಂಬಲ

Date:

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕೆಂಬ ನ್ಯಾಯಸಮ್ಮತ ಹಾಗೂ ದೀರ್ಘಕಾಲದ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 24ನೇ ದಿನಕ್ಕೆ ಕಲಿಟ್ಟಿದ್ದು ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗುತ್ತಿದೆ.

ಈ ಹೋರಾಟದ ಭಾಗವಾಗಿ, ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ವಿದ್ಯಾರ್ಥಿ ಸಂಘಟನೆಯ ಉಡುಪಿ ಜಿಲ್ಲಾ ತಂಡ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಗಾರರ ಸಮಸ್ಯೆಗಳು, ಅನುಭವಿಸುತ್ತಿರುವ ಸಾಮಾಜಿಕ-ಆರ್ಥಿಕ ಅನ್ಯಾಯಗಳು ಹಾಗೂ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಗಳನ್ನು ಗಮನದಿಂದ ಆಲಿಸಿತು. ಕೊರಗ ಸಮುದಾಯವು ಶಿಕ್ಷಣ ಪಡೆದರೂ ಸಹ ಸರ್ಕಾರಿ ಉದ್ಯೋಗಗಳಲ್ಲಿ ಅವಕಾಶಗಳಿಂದ ವಂಚಿತರಾಗುತ್ತಿರುವುದು ಗಂಭೀರ ವಿಚಾರವಾಗಿದ್ದು, ಇದಕ್ಕೆ ತಕ್ಷಣದ ಪರಿಹಾರ ಅಗತ್ಯವಿದೆ ಎಂದು ಎಸ್‌ಐಓ ಅಭಿಪ್ರಾಯ ವ್ಯಕ್ತಪಡಿಸಿದೆ.

ಈದಿನ.ಕಾಮ್ ಜೊತೆ ಮಾತನಾಡಿದ ಎಸ್‌ಐಓ ಉಡುಪಿ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ, ಕೊರಗ ಸಮುದಾಯದ ಬೇಡಿಕೆಗಳು ಸಂಪೂರ್ಣವಾಗಿ ನ್ಯಾಯಸಮ್ಮತವಾಗಿದ್ದು, ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ವಿದ್ಯಾರ್ಥಿ ಹಾಗೂ ಯುವ ಸಂಘಟನೆಗಳು ಇಂತಹ ಹೋರಾಟಗಳಿಗೆ ಸದಾ ಬೆಂಬಲವಾಗಿ ನಿಲ್ಲಬೇಕಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಸಮೀರ್ ತೀರ್ಥಹಳ್ಳಿ, ಎಸ್‌ಐಓ ಕಾರ್ಯಕರ್ತರಾದ ಅಫ್ಷಾನ್ ನವಾಜ್, ಮುಝಯಿನ್, ಅಬ್ದುಲ್ ರೆಹಮಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...