ಉಡುಪಿ | ಕೊರಗ ಯುವಜನರಿಗೆ ನೇರ ನೇಮಕಾತಿ, ಸಮಸ್ಯೆ ಪರಿಹಾರಕ್ಕೆ ಭರವಸೆ

Date:

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ) ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ–ಸತ್ಯಾಗ್ರಹ ಸ್ಥಳಕ್ಕೆ ಇಂದು ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರು ಧರಣಿ ನಿರತರಿಂದ ಸಮಸ್ಯೆಗಳ ಕುರಿತು ವಿವರವಾಗಿ ಮಾಹಿತಿ ಪಡೆದು, ವಿಷಯವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ನ್ಯಾಯಸಮ್ಮತ ಪರಿಹಾರ ಒದಗಿಸುವ ಭರವಸೆ ನೀಡಿದರು. ಜೊತೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು, ಕೊರಗ ಸಮುದಾಯದ ಯುವಜನರ ಉದ್ಯೋಗ ಸಮಸ್ಯೆಗಳ ಕುರಿತು ಚರ್ಚಿಸಿ ತ್ವರಿತ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

WhatsApp Image 2026 01 06 at 11.26.15 AM

ಧರಣಿ ಸ್ಥಳದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ, ರಾಜ್ಯ ಆರ್‌ಜಿಪಿಆರ್‌ಎಸ್ ಸಂಘಟನೆಯ ಉಪಾಧ್ಯಕ್ಷರಾದ ರೋಶನಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಡಾ. ಸುನಿತಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ, ಉಡುಪಿ ಜಿಲ್ಲಾ ಮೀನುಗಾರಿಕಾ ಸಮಿತಿಯ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಪೆರ್ಡೂರು ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಸಾಲಿಯಾನ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...