ಕೊರಟಗೆರೆ | ಅತ್ತೆಯ ಡೆತ್ ಸೆಂಟೆನ್ಸ್ ಬರೆದ ಡೆಂಟಲ್ ಡಾಕ್ಟರ್ ಈಗ ಪೊಲೀಸರ ಅತಿಥಿ

Date:

ಕೊರಟಗೆರೆ  ತಾಲೂಕಿನ  ಚಿಂಪುಗಾನಹಳ್ಳಿಯ ಮುತ್ಯಾಲಮ್ಮ ದೇವಸ್ಥಾನದ ಬಳಿಯಿಂದ ಸಿದ್ದರಬೆಟ್ಟದ ರಸ್ತೆ ತನಕ ಸುಮಾರು 30 ಕಿ.ಮೀ. ದೂರ ವ್ಯಾಪ್ತಿಯಲ್ಲಿ 17 ಸ್ಥಳಗಳಲ್ಲಿ ಮಹಿಳೆಯ ದೇಹದ ತುಂಡುಗಳನ್ನು ಎಸೆದಿರುವ ಪ್ರಕರಣಕ್ಕೆ ಹೊಸ ತಿರುವು ದೊರಕಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೃತ ಮಹಿಳೆ ಬೆಳ್ಳಾವಿ ಮೂಲದ ಲಕ್ಷ್ಮಿದೇವಮ್ಮ (42) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಈಕೆಯ ಅಳಿಯ, ವೃತ್ತಿಯಲ್ಲಿ ದಂತ ವೈದ್ಯನಾಗಿರುವ ರಾಮಚಂದ್ರಯ್ಯ ಮತ್ತು ಸತೀಶ್, ಕಿರಣ್ ಎಂಬವರು ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳಾಗಿದ್ದಾರೆ.

ತುಮಕೂರು ನಗರದಲ್ಲಿ ದಂತ ಕ್ಲಿನಿಕ್ ಇಟ್ಟು ಕೊಂಡಿದ್ದ ಆರೋಪಿ ಡಾ‌. ರಾಮಚಂದ್ರಯ್ಯ ಕುವೆಂಪು ನಗರದಲ್ಲಿ ವಾಸವಾಗಿದ್ದ ಎಂದು ತಿಳಿದು ಬಂದಿದ್ದು, ಅತ್ತೆಯ ಚಟುವಟಿಕೆಗಳ ಬಗ್ಗೆ ಬೇಸತ್ತ ಅಳಿಯ ಅಸಮಾದಾನಗೊಂಡು ಈ ದುಷ್ಕೃತ್ಯ ಮಾಡಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದ್ದು, ತನ್ನ ಸ್ನೇಹಿತರ ಜೊತೆಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ, ಸದ್ಯ ಕೊರಟಗೆರೆ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ಹೆಂಡತಿಯು ವಿಚ್ಚೇದನ ಪಡೆಯುವ ಹಂತದಲ್ಲಿದಾಗ 2ನೇ ಮದುವೆಯಾಗಿದ್ದ ಡಾಕ್ಟರ್, 2ನೇ ಹೆಂಡತಿಯ ತಾಯಿಯನ್ನೇ  ಮರ್ಡರ್ ಮಾಡಿದ್ದಾನೆ. ಈ ಕೃತ್ಯಕ್ಕೆ ಬಳಸಲಾಗಿದ್ದ ಕಾರ್ ನಿಂದಲ್ಲೇ ಪತ್ತೆಯಾದರೂ ಆರೋಪಿಗಳು, ಸ್ನೇಹಿತ ಸತೀಶ್ ನ ಕಾರ್ ನಲ್ಲಿಯೇ ಅತ್ತೆಯ ತುಂಡು ತುಂಡಾದ ಶರೀರದ ಭಾಗಗಳನ್ನು ದಿಕ್ಕಾಪಾಲು ಮಾಡಿ ಎಸೆದಿದ್ದ ಆರೋಪಿ ಡಾ. ರಾಮಚಂದ್ರಯ್ಯನನ್ನು ಬಂಧಿಸಲಾಗಿದೆ.

ಮೂರು ದಿನಗಳ ಕಾಲ ಮೃತದೇಹವನ್ನು ತಮ್ಮ ಬಳಿಯೇ ಇಟ್ಟುಕೊಂಡು ಆ.6ರಂದು ದೇಹವನ್ನು ತುಂಡು ಮಾಡಿ ಎಸೆದಿದ್ದರು. ಬಳಿಕ ರಾಮಚಂದ್ರ ಧರ್ಮಸ್ಥಳಕ್ಕೆ ತೆರಳಿದ್ದ. ಆತನ ಮೇಲೆ ಅನುಮಾನಗೊಂಡು ಪೊಲೀಸರು ವಿಚಾರಣೆ ನಡೆಸಿದ ಬಳಿಕ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...