ಕೊರಟಗೆರೆ | ಡಾ. ಜಿ ಪರಮೇಶ್ವರ್ 74ನೇ ಹುಟ್ಟುಹಬ್ಬ : ಬೃಹತ್‌ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ

Date:

 ಜನಪ್ರಿಯ ಶಾಸಕರು,ಗೃಹ ಸಚಿವರು,ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ ಪರಮೇಶ್ವರ ರವರ ಹುಟ್ಟುಹಬ್ಬದ ಅಂಗವಾಗಿ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಿಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ತಿಳಿಸಿದರು.

ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಡಾ.ಜಿ ಪರಮೇಶ್ವರ್ ಅಭಿಮಾನಿಗಳ ಬಳಗದಿಂದ ಭಾನುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಡಾ. ಜಿ ಪರಮೇಶ್ವರ ರವರ 74ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಇದೇ ಬುಧವಾರ 6ನೇ ತಾರೀಖು ಬೃಹತ್‌ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರವನ್ನು ಹೊಳವನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಬೆಳಗ್ಗೆ 09ರಿಂದ ಸಂಜೆ 5ಗಂಟೆಯವರೆಗೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

ನಮ್ಮ ನೆಚ್ಚಿನ ಜನಪ್ರಿಯ ಶಾಸಕರಾಗಿರುವ ಡಾ.ಜಿ ಪರಮೇಶ್ವರ ರವರ ಆದೇಶದಂತೆ ಅವರ ಜನ್ಮ ದಿನದಂದು ಇವರದೇ ಸಿದ್ಧಾರ್ಥ ಆಸ್ಪತ್ರೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರ ಆಯೋಜನೆ ಮಾಡಲಾಗಿದೆ, ಇದರ ಸದುಪಯೋಗ ಪಡೆದುಕೊಳ್ಳುವ ಈ ಶಿಬಿರದಲ್ಲಿ ಹಳ್ಳಿ ಜನತೆ ಹೆಚ್ಚು ಭಾಗವಹಿಸಿ ಸದುಪಯೋಗಪಡಿಸಿಕೊಳ್ಳುವಂತ್ತಾಗಬೇಕು ಜೊತೆಗೆ ಈ ಶಿಬಿರ ತಪಾಸಣೆಗೆ ಕಡ್ಡಾಯವಾಗಿ ಪಡಿತರ ಕಾರ್ಡ್, ಆಧಾರ್ ಕಾರ್ಡ್ ತರುವಂತೆ ತಿಳಿಸಿದರು..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್ ಮಾತನಾಡಿ ಪ್ರತಿಯೊಬ್ಬ ಮನುಷ್ಯನು ಆರೋಗ್ಯವಂತವಾಗಿರಬೇಕು, ಆರೋಗ್ಯವೇ ಭಾಗ್ಯ ಎಂಬುದು ನಮಗೆಲ್ಲ ತಳಿದಿದೆ, ಎಲ್ಲರಿಗೂ ಈ ಶಿಬಿರ ಉಪಯುಕ್ತವಾಗಲಿದ್ದು, ತಪಾಸಣೆ ನಂತರ ಹೆಚ್ವಿನ ಚಿಕಿತ್ಸೆಗೆ ಸಿದ್ದಾರ್ಥ ವೈದ್ಯಕೀಯ ಸಂಸ್ಥೆಯಿಂದ ಶಸ್ತ್ರ ಚಿಕಿತ್ಸೆ ಉಚಿತವಾಗಿ ಸಿಗಲಿದೆ ಎಂದರು.

ವಿಶೇಷವಾಗಿ ರಕ್ತದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಸಿ ರಕ್ತದಾನ ಮಾಡುವ ಮೂಲಕ ಈ ಕಾರ್ಯಕ್ರಮ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಟಾಧಿಕಾರಿ, ಸಿಇಓ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದು, ಕಾಂಗ್ರೆಸ್ ಪಕ್ಷದ ಹೆಚ್ಚಿನ ಮುಖಂಡರು,ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೊಳಿಸಬೇಕು ಎಂದರು.

ಈ ಮಹತ್ವದ ಶಿಬಿರದಲ್ಲಿ ನೂರಿತ ಹೃದ್ರೋಗ ತಜ್ಞರು, ಕಣ್ಣಿನ ರೋಗಗಳ ತಜ್ಞರು, ಸಾಮಾನ್ಯ ರೋಗ, ಸ್ತ್ರೀ ರೋಗಪ್ರಸೂತಿ ಚಿಕಿತ್ಸಾ, ಕೀಲು ಮತ್ತು ಮೂಳೆ ರೋಗ, ಮಕ್ಕಳ ಚಿಕಿತ್ಸಾ, ಕಿವಿಮೂಗುಮತ್ತು ಗಂಟಲು, ಮನೋ ವೈದ್ಯಕೀಯ ಚಿಕಿತ್ಸಾ, ಚರ್ಮಹಾಗೂಗುಹ್ಯ ರೋಗಗಳ,ದಂತ ಚಿಕಿತ್ಸಾಗಳು ಒಂದೇ ಶಿಬಿರದಲ್ಲಿ ದೊರಯಲಿದ್ದು ಈ ಭಾಗದ ಬಡವರು, ರೈತರು, ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಲು ಈ ಮೂಲಕ ತಿಳಿಸಲಾಯಿತು.

 ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವಥ್, ಗ್ರಾಮೀಣ ಅಧ್ಯಕ್ಷ ಅರಕೆರೆ ಶಂಕರ್, ಯುವ ಕಾಂಗ್ರೆಸ್ ಬೈರೇಶ್, ಜಿಲ್ಲಾ ನಿರ್ದೇಶಕಿ ಕವಿತಾ, ಜಿ.ಡಿ ನಾಗಭೂಷಣ್, ಸುನೀಲ್, ಡಿಸಿಸಿ ನಿರ್ದೇಶಕ ಹನುಮಾನ್, ಮೈಲಾರಪ್ಪ, ಗಟ್ಲಹಳ್ಳಿ ಕುಮಾರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಗ್ರಾ.ಪಂ ಅಧ್ಯಕ್ಷೆ ಸೌಮ್ಯ, ಕವಿತಾ, ಜಯರಾಮ್, ತಾ.ಪಂ ಮಾಜಿ ಅಧ್ಯಕ್ಷ ವೆಂಕಟಪ್ಪ, ಕಾಂಗ್ರೆಸ್ ಮುಖಂಡರಾದ ವಿನಯ್ ಕುಮಾರ್, ರವಿಕುಮಾರ್, ಉಮೇಶ್, ನಂಜುಂಡಯ್ಯ, ಗಂಗರಾಜು, ಜಯರಾಜ್, ಕೇಶವಮೂರ್ತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...