ಕೊರಟಗೆರೆ | ಬೇಕರಿಗೆ ನುಗ್ಗಿದ ಗೊಬ್ಬರದ ಲಾರಿ: ಮೂವರು ಸಾವು, ಮೂವರ ಸ್ಥಿತಿ ಗಂಭೀರ

Date:

ಗೊಬ್ಬರ ತುಂಬಿದ್ದ ಲಾರಿ ಬ್ರೇಕ್ ಫೇಲ್ಯೂರ್ ಆಗಿ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರಂತ ಘಟನೆ ಕೊರಟಗೆರೆ ತಾಲೂಕಿನ ಕೋಳಾಲ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಕೋಳಾಲ ಗ್ರಾಮದಲ್ಲಿ ಮಂಗಳವಾರ 12ಗಂಟೆ ಸುಮಾರಿಗೆ ಕೋಳಾಲ ಪೋಲಿಸ್ ಠಾಣೆ ರಸ್ತೆ ಕಡೆಯಿಂದ ಬಂದ ಗೊಬ್ಬರದ ಲಾರಿಯ ಬ್ರೇಕ್ ಫೇಲ್ಯೂರ್‌ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭೈರವೇಶ್ವರ ಕ್ಯಾಂಡಿಮೆಂಟ್ಸ್‌ಗೆ ನುಗ್ಗಿದ್ದು, ಈ ದುರಂತದಲ್ಲಿ ಬೇಕರಿ ಮುಂದೆಯಿದ್ದ ರಂಗಶಾಮಯ್ಯ(70), ಬೈಲಪ್ಪ(65), ಜಯಣ್ಣ(55) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಜಿ.ಪಂ ಮಾಜಿ ಸದಸ್ಯೆ ಸಿದ್ದಗಂಗಮ್ಮ ಪ್ರಜ್ಞಾಹೀನಗೊಂಡಿದ್ದು, ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಹೆಚ್ಚಿನ ಚಿಕಿತ್ಸೆಗೆ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಕರಿ ಮಾಲೀಕ ಈ ದುರಂತದಿಂದ ಪಾರಾಗಿದ್ದು, ಹಿಂದೆಯೂ ಕೂಡ ಇದೇ ರೀತಿ ಘಟನೆ ನಡೆದ ಉದಾಹರಣೆ ಇದೆ. ರೋಡ್ ಹಂಪ್ ಇಲ್ಲದ ಕಾರಣ ಇಂತಹ ಘಟನೆಗಳು ಮರುಕಳಿಸುತ್ತಿವೆಯೆಂದು ಸ್ಥಳೀಯರು, ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮುಳಬಾಗಿಲು | ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್‌: ಯಾರಿಗೂ ಹೇಳದಂತೆ ಬೆದರಿಕೆ

ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಸಿಪಿಐ ಅನಿಲ್, ಕೋಳಾಲ ಪಿಎಸ್‌ಐ ಅಭಿಷೇಕ್, ಯೋಗೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೋಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುರಂತದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ ಅಧಿಕಾರಿಗಳಿಂದ ಮಾಹಿತಿ ಪಡೆದು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿ, ಮೃತ ವ್ಯಕ್ತಿಗಳ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...