ಕೊರಟಗೆರೆ | ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ : ತಹಶೀಲ್ದಾರ್ ಮಂಜುನಾಥ್

Date:

 ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ತುಮಕೂರು ಜಿಲ್ಲೆಯಲ್ಲಿ 15ಕೋಟಿ ಮತ್ತು ಕೊರಟಗೆರೆ ತಾಲ್ಲೂಕಿನಲ್ಲಿ 25ಲಕ್ಷಕ್ಕೂ ಅಧಿಕ ಮಹಿಳೆಯರು ಯೋಜನೆಯನ್ನು ಸದುಪಯೋಗ ಪಡಿಸಿಕೊಂಡಿದ್ದು, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು 500  ಕೋಟಿ ಮಹಿಳೆಯರು ಉಚಿತ ಪ್ರಯಾಣಿಸಿದ್ದು, ಈ ಸಂಭ್ರಮಾಚರಣೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ನೀಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಸರ್ಕಾರಿ ಬಸ್‌ನಲ್ಲಿ 500ಕೋಟಿ ಮಹಿಳೆಯರು ರಾಜ್ಯಾದ್ಯಾಂತ ಸಂಚರಿಸಿದ್ದು, ಸರ್ಕಾರ 12,669 ಕೋಟಿ.ರೂ ಹಣವನ್ನು ಮಹಿಳಾ ಸಬಲೀಕರಣಕ್ಕೆ ಬಳಸುತ್ತಿದೆ. 23 ಲಕ್ಷ ಮಹಿಳೆಯರು ದಿನನಿತ್ಯ ಸಾರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಮಹಿಳೆಯರು ಆಸ್ಪತ್ರೆ, ಶಾಲಾ-ಕಾಲೇಜು, ಉದ್ಯೋಗಕ್ಕೆ, ಪುಣ್ಯಕ್ಷೇತ್ರಗಳ ಕಡೆ ಹೆಚ್ಚಿನದಾಗಿ ಪ್ರಯಾಣಿಸಿದ್ದು ಸರ್ಕಾರದ ಶಕ್ತಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ್‌ ಮೂರ್ತಿ ಮಾತನಾಡಿ, ಕಳೆದ 2 ವರ್ಷದಲ್ಲಿ ರಾಜ್ಯಾದ್ಯಾಂತ 500 ಕೋಟಿ ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಉಚಿತವಾಗಿ ಪ್ರಯಾಣಿಸಿದ್ದಾರೆ. ಪುಣ್ಯಕ್ಷೇತ್ರ, ತವರು ಮನೆ, ಉದ್ಯೋಗಕ್ಕೆ, ಆಸ್ಪತ್ರೆ, ಶಾಲಾ-ಕಾಲೇಜುಗಳಿಗೆ ಪ್ರಯಾಣಿಸಿ ಬಡ ಕುಟುಂಬಗಳು ಆರ್ಥಿಕತೆಯಲ್ಲಿ ನೆಮ್ಮದಿ ಕಂಡುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ರವರ ನೇತೃತ್ವದಲ್ಲಿ 2028ರ ತನಕ ಗ್ಯಾರಂಟಿ ಯೋಜನೆಗಳ ಅನುಕೂಲ ನಾಡಿನ ಜನರಿಗೆ ಸಮರ್ಪಕವಾಗಿ ಸಿಗಲಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಪೂರೈಸಿ ಮುಂದೆ ಸಾಗುತ್ತಿರುವ ಕರ್ನಾಟಕ ಸರ್ಕಾರಕ್ಕೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಸತತವಾಗಿ 5 ವರ್ಷ ನೀಡಲಿದ್ದು, ಕೊರಟಗೆರೆ ಕ್ಷೇತ್ರದಲ್ಲಿ 100 ಕೋಟಿ ಅಧಿಕ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿದೆ. ಗೃಹ ಸಚಿವ ಡಾ.ಜಿ ಪರಮೇಶ್ವರ ರವರು ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. 

ಮಹಿಳಾ ಘಟಕದ ಅಧ್ಯಕ್ಷೆ ಜಯಮ್ಮ ಮಾತನಾಡಿ, ಸರ್ಕಾರ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಆರ್ಥಿಕತೆ ಅಭಿವೃದ್ಧಿಗೆ ಸಾಕಷ್ಟು ಅನುಕೂಲವಾಗಿದೆ. ಟೀಕೆಗಳ ಕಡೆ ಗಮನಹರಿಸದೆ ಮಹಿಳಾ ಸಬಲೀಕರಣಕ್ಕೆ ಸರ್ಕಾರ ಹೆಚ್ಚಿನ ಆಧ್ಯತೆ ನೀಡಿದೆ. ಮುಂದಿನ 10-15ವರ್ಷ ಕಾಂಗ್ರೆಸ್ ಸರ್ಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಸದಸ್ಯರಾದ ಚಂದ್ರಕಲಾ, ವಿದ್ಯಾ, ಗುರುಶಾಂತಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...