ಕೊರಟಗೆರೆ | ರಾಮಾಯಣ ಮಹಾಕಾವ್ಯ ಬೇರೆ ದೇಶದಲ್ಲಿಯೂ ಪ್ರಚಲಿತದಲ್ಲಿದೆ : ಗೋಪಿನಾಥ್

Date:

ನಿಸರ್ಗದೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಮಹರ್ಷಿ ವಾಲ್ಮೀಕಿ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ ಎಂದು ವಾಲ್ಮೀಕಿ ಸಮುದಾಯದ ಮುಖಂಡ ಗೋಪಿನಾಥ್ ತಿಳಿಸಿದರು.

ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಬೇಡರ ಕಣ್ಣಪ್ಪ ದೇವಾಲಯದಿಂದ ವಾಲ್ಮೀಕಿ ವೃತ್ತದವರೆಗೆ ನೂರಾರು ಮಹಿಳೆಯರು ಕಳಸ ಹೊತ್ತು ಮರೆವಣಿಗೆಯೊಂದಿಗೆ ಸಾಗಿ ಜಯಂತಿಯನ್ನು ವಿಶೇಷವಾಗಿ ಆಚರಿಸಿ ನಂತರ ಮಾತನಾಡಿದರು.

ವಿಶ್ವಕ್ಕೆ ರಾಮಾಯಾಣ ಎಂಬ ಅತಿದೊಡ್ಡವಾದ ಕಾವ್ಯವನ್ನು ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದರ್ಶಗಳು ನಮ್ಮ ದೇಶ ಮಾತ್ರವಲ್ಲದೇ ಮಲೇಶಿಯಾ, ಕಾಂಬೋಡಿಯಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಪ್ರಚಲಿತದಲ್ಲಿವೆ. ಆದ್ದರಿಂದ ಸಮುದಾಯದ ಮುಖಂಡರು ಮತ್ತು ಮಹಿಳೆಯರು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಎಸ್‌ಎಸ್‌ಎನ್ ಸದಸ್ಯೆ ಸ್ವಾತಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಪ್ರತಿಯೊಬ್ಬರು ಹಬ್ಬದ ರೀತಿಯಲ್ಲಿ ಆಚರಣೆ ಮಾಡಬೇಕು. ಹೊಳವನಹಳ್ಳಿ ಗ್ರಾಮದಲ್ಲಿ ಪ್ರತಿವರ್ಷದಿಂದ ವಿಜೃಂಭಣೆಯಿಂದ ಆಚರಿಸಿಕೊಂಡು ಬಂದಿದ್ದೇವೆ. ವಾಲ್ಮೀಕಿ ಜಯಂತಿ ಮನೆತನದ ಹಬ್ಬದಂತೆ ಮಹಿಳೆಯರು ಆಚರಣೆ ಮಾಡುತ್ತಿರುವುದು ಖುಷಿಯ ವಿಚಾರ ಎಂದು ಹೇಳಿದರು.

1002167032

ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪವಾಗಿವೆ. ಭ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ, ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿದೆ. ಆದಕವಿ ಹೇಳಿಕೊಟ್ಟ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಜೀವನ ನಡೆಸಬೇಕಿದೆ ಎಂದು ಹೇಳಿದರು.

ಯುವ ಮುಖಂಡ ಪ್ರವೀಣ್ ಮಾತನಾಡಿ, ರಾಮಾಯಣ ಮನುಕುಲಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದ್ದು, ಅದರಲ್ಲಿರುವ ಸಂದೇಶಗಳು ಎಲ್ಲ ಕಾಲಕ್ಕೂ ಪ್ರಸ್ತುತ. ಸಮಾಜದಲ್ಲಿ ಜನರು ಸಂಘಟಿತರಾಗಿ ಸಕಾಲಕ್ಕೂ ಮಹಾತ್ಮರ ಸ್ಮರಣೆ ಮಾಡಬೇಕು ಎಂದು ಹೇಳಿದರು.

ಸಮುದಾಯದ ಯುವ ಮುಖಂಡ ಕಿಶೋರ್ ಮಾತನಾಡಿ, ಇಡೀ ವಿಶ್ವಕ್ಕೆ ರಾಮಾಯಣದಂತಹ ಮಹಾಕಾವ್ಯ ಕೊಟ್ಟ ಮಹಾನ್ ದಾರ್ಶನಿಕ ಮಹರ್ಷಿ ವಾಲ್ಮೀಕಿ ಅವರು ಜೀವನ ಪ್ರತಿಯೊಬ್ಬರಿಗೂ ಪ್ರೇರಣೆಯಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಸುಮಿತ್ರ ಉಮೇಶ್, ಸದಸ್ಯ ರಮಾಂಜಿನಯ್ಯ, ಮಂಜುನಾಥ್, ರವಿಕುಮಾರ್, ಕವಿತಮ್ಮ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ವಾಲ್ಮೀಕಿ ಸಂಘದ ಅಧ್ಯಕ್ಷ ಓಬಳಯ್ಯ, ಕಾರ್ಯದರ್ಶಿ ಜಯರಾಜು, ಉಪಾಧ್ಯಕ್ಷ ಮಾದಯ್ಯ, ಖಚಾಂಚಿ ರಂಗಯ್ಯ, ನಿರ್ದೇಶಕ ಎಚ್.ಪಿ ನರಸಿಂಹಮೂರ್ತಿ, ನಾಗರಾಜು, ರಾಜಣ್ಣ, ಶಿವರಾಜು, ಮುದ್ದಣ್ಣ, ಚಂದ್ರಪ್ಪ, ತಿಮ್ಮಯ್ಯ, ಯುವ ಮುಖಂಡ ಕಿಶೋರ್, ರಮೇಶ್, ಪ್ರವೀಣ್, ಶಿಂಗಾರ್, ಶಶಾಂಕ್, ಹರೀಶ್ ರಂಗಶಾಮಯ್ಯ, ಕಿಶೋರ್, ಮುದ್ದರಂಗಯ್ಯ, ವಿನೋದ್ ಕುಮಾರ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...