ಉಡುಪಿ | ಗ್ಯಾಸ್ ಸಮಸ್ಯೆ ಬಗ್ಗೆ ಸಂಸದರ ನಿರ್ಲಕ್ಷ್ಯ: ಕೋಟ ನಾಗೇಂದ್ರ ಪುತ್ರನ್ ಟೀಕೆ

Date:

ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾಗುತ್ತಿರುವ ಸಮಸ್ಯೆಯಿಂದಾಗಿ ಕರ್ನಾಟಕದ ಮಹಾನಗರಗಳು ಹಾಗೂ ಕರಾವಳಿ ಭಾಗದಲ್ಲಿ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಕುರಿತು ಕರಾವಳಿ ಭಾಗದ ಸಂಸದರು ತಕ್ಷಣ ಗಮನಹರಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಆಗ್ರಹಿಸಿದ್ದಾರೆ.

ಕರ್ನಾಟಕ ಕರಾವಳಿ ಭಾಗದ ಬಹುತೇಕ ಕುಟುಂಬಗಳು ಹೋಟೆಲ್ ಉದ್ಯಮವನ್ನು ನಂಬಿಕೊಂಡು ಜೀವನ ನಡೆಸುತ್ತಿವೆ. ಯುದ್ಧ ಆರಂಭವಾಗಿ ಕೇವಲ 12 ದಿನಗಳಲ್ಲಿ ದೇಶದ ಪರಿಸ್ಥಿತಿ ಇಂತಾಗಿದ್ದರೆ, ದೇಶವನ್ನು ಮುನ್ನಡೆಸುವ ಬಗ್ಗೆ ಕೇಂದ್ರ ಸರ್ಕಾರದ ಸಾಮರ್ಥ್ಯ ಪ್ರಶ್ನಾರ್ಥಕವಾಗುತ್ತದೆ ಎಂದು ಅವರು ಹೇಳಿದರು.

ಧರ್ಮದ ವಿಚಾರವನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದರೆ ಸಾಕಾಗುವುದಿಲ್ಲ; ಸಂಕಷ್ಟದ ಸಂದರ್ಭಗಳಲ್ಲಿ ಜನರ ಜೊತೆ ನಿಲ್ಲಬೇಕು. ಗ್ಯಾಸ್ ಸಮಸ್ಯೆ ಕುರಿತು “ಪ್ರಯತ್ನ ಮಾಡುತ್ತೇವೆ” ಎನ್ನುವುದು ಸಂಸದ ಕೋಟ ಅವರಿಂದ ಬಂದಿರುವ ಜವಾಬ್ದಾರಿಯಿಲ್ಲದ ಹೇಳಿಕೆ ಎಂದು ಅವರು ಟೀಕಿಸಿದರು. ಯಾವುದೇ ಕಾರಣಕ್ಕೂ ಮಹಾನಗರಗಳು ಹಾಗೂ ಕರಾವಳಿ ಭಾಗದಲ್ಲಿ ಹೋಟೆಲ್‌ಗಳು ಬಂದ್ ಆಗದಂತೆ ನೋಡಿಕೊಳ್ಳುವುದು ಜನಪ್ರತಿನಿಧಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರಾವಳಿ ಭಾಗದ ಜನರು ಕೇವಲ ತಮ್ಮ ಹೊಟ್ಟೆಪಾಡಿಗಾಗಿ ಮಾತ್ರವಲ್ಲದೆ ದೇಶದಾದ್ಯಂತ ಹೋಟೆಲ್ ಉದ್ಯಮ ನಡೆಸಿ ಲಕ್ಷಾಂತರ ಕಾರ್ಮಿಕರು, ಸಾಫ್ಟ್‌ವೇರ್ ಕಂಪನಿಗಳ ಉದ್ಯೋಗಿಗಳು ಸೇರಿದಂತೆ ವಿವಿಧ ವರ್ಗದವರಿಗೆ ಆಹಾರ ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಆದ್ದರಿಂದ ಹೋಟೆಲ್ ಉದ್ಯಮಕ್ಕೆ ಅಡುಗೆ ಅನಿಲದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳುವುದು ಕರಾವಳಿ ಸಂಸದರು ಹಾಗೂ ಸರ್ಕಾರದ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಾಮಾನ್ಯ ಹೇಳಿಕೆ ನೀಡಿ ವಿಷಯವನ್ನು ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಬಾರದು. ದೇಶದಾದ್ಯಂತ ಸಾವಿರಾರು ಕುಟುಂಬಗಳು ಹೋಟೆಲ್ ಉದ್ಯಮವನ್ನು ನಂಬಿಕೊಂಡು ಬದುಕುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೋಟ ನಾಗೇಂದ್ರ ಪುತ್ರನ್ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...