ಉಡುಪಿ | ಹಿಂದೂ ಯುವತಿಯರ ಮೇಲೆ ಲೈಂಗಿಕ ಶೋಷಣೆ, ಬಿಜೆಪಿ, ಹಿಂದೂ ಸಂಘಟನೆಗಳು ಮೌನ : ಕೋಟ ನಾಗೇಂದ್ರ ಪುತ್ರನ್

Date:

ಉಡುಪಿ ಜಿಲ್ಲೆಯ ಅಮಾಸೆಬೈಲ್ ನಲ್ಲಿ ಧರ್ಮ ಸಂರಕ್ಷಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ನೀಡಲು ಬಂದ ಮಹಿಳೆಯನ್ನು ಬಲತ್ಕಾರ ಮಾಡಲು ಮುಂದಾಗಿದ್ದು ಒಂದು ಕಡೆ ಆದರೆ, ಇನ್ನೊಂದು ಕಡೆಯಲ್ಲಿ ಪುತ್ತೂರಿನಲ್ಲಿ ಮದುವೆಯಾಗುವ ಭರವಸೆ ನೀಡಿ 20 ವರ್ಷದ ಯುವತಿಯನ್ನು ಪುಸಲಾಯಿಸಿ ಗರ್ಭಿಣಿ ಮಾಡಿ ಸಂತ್ರಸ್ತ ಯುವತಿ ಮಗುವಿಗೂ ಜನ್ಮ ನೀಡಿದ ಆರೋಪ ಬಿಜೆಪಿ ಮುಖಂಡನ ಮಗ ಕೃಷ್ಣ ರಾವ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿತ್ತು. ಇದೀಗ DNA ಪರೀಕ್ಷೆಯ ಪ್ರಕಾರ ಆರೋಪಿಯೇ ಮಗುವಿನ ತಂದೆ ಎಂದು ತಿಳಿದುಬಂದಿದೆ.

“ಧರ್ಮ ಸಂರಕ್ಷಣೆ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ಶೋಷಣೆಯ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಆದರೆ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಈ ಬಗ್ಗೆ ಮೌನವಾಗಿವೆ. ಪುತ್ತೂರಿನ ಈ ಘಟನೆಗೆ ಸಂಬಂಧಿಸಿ ಸರ್ಕಾರ ಹಾಗೂ ಸಂಘ ಪರಿವಾರ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಆಗ್ರಹಿಸಿದ್ದರು.

ಈ ಕುರಿತಂತೆ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ “ಬಿಜೆಪಿಯವರು ಧರ್ಮ, ಸಂಸ್ಕೃತಿ, ಸಂರಕ್ಷಣೆ ಎಂಬ ಹೆಸರಿನಲ್ಲಿ ಮಾತನಾಡುತ್ತಾ ತಮ್ಮದೇ ಕಾರ್ಯಕರ್ತರಿಂದ ಆಗುತ್ತಿರುವ ಅಮಾನುಷ ಘಟನೆಗಳ ವಿರುದ್ಧ ಮೌನವಾಗಿರುವುದು ವಿಷಾದನೀಯ. ಈ ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಮತ್ತು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು,” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಂದುಗಳು ಇನ್ನು ಮುಂದೆ ಹೆಚ್ಚು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಹೇಳಿರುವ ಚಕ್ರವರ್ತಿ ಸೂಲಿಬೆಲೆ ಕೂಡ ನಾಪತ್ತೆಯಾಗಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರು ಮದುವೆಯಾಗಿ ಹೆಚ್ಚು ಮಕ್ಕಳು ಮಾಡಿ ಎಂದು ಹೇಳಿದ್ದೋ? ಅಥವಾ ಅತ್ಯಾಚಾರ ಮಾಡಿ ಹೆಚ್ಚು ಮಗು ಮಾಡಿ ಅಂತ ಹೇಳಿದ್ದೋ? ಎಂದು ಪ್ರಶ್ನಿಸಿದ್ದಾರೆ‌.

ಹಿಂದುಳಿದ ವರ್ಗದ ಯುವತಿಗೆ ನ್ಯಾಯ ಸಿಗುವವರೆಗೆ ಪ್ರತಿಭಾ ಕುಳಾಯಿ ಅವರ ಹೋರಾಟಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಂಪೂರ್ಣ ಬೆಂಬಲವಿದೆ. ಯುವತಿಯಿಗೂ ಮಗುವಿಗೂ ನ್ಯಾಯ ಸಿಗಬೇಕೆಂಬುದು ನಮ್ಮ ಒಟ್ಟಿನ ಬೇಡಿಕೆ,” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...