ಉಡುಪಿ | ಹಂಗಾರುಕಟ್ಟೆ ಬಂದರು, ವಾರಾಹಿ ನೀರು ಸಮಸ್ಯೆ ಬಗೆಹರಿಸಬೇಕು : ಕೋಟ ನಾಗೇಂದ್ರ ಪುತ್ರನ್

Date:

ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಕುಂದಾಪುರ ಕ್ಷೇತ್ರದ ಅಭಿವೃದ್ಧಿ ಹಾಗೂ ಸಾರ್ವಜನಿಕ ಹಿತಾಸಕ್ತಿಯ ಹಲವು ಜ್ವಲಂತ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಕೋಟ ನಾಗೇಂದ್ರ ಪುತ್ರನ್ ಕುಂದಾಪುರ ಶಾಸಕರಿಗೆ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಪ್ರಮುಖ ವಿಷಯಗಳನ್ನು ಒತ್ತಿ ಹೇಳಿದ್ದಾರೆ.

ಮನವಿಯಲ್ಲಿ ಏನಿದೆ ?
1) ಹಂಗಾರುಕಟ್ಟೆ ಬಂದರು ಸರ್ವ ಋತು ಬಂದರಾಗಿ ಅಭಿವೃದ್ಧಿ: ಕರಾವಳಿಯ ಪ್ರಮುಖ ಮೀನುಗಾರಿಕೆ ಕೇಂದ್ರವಾಗಿರುವ ಹಂಗಾರುಕಟ್ಟೆ ಬಂದರು ಸರ್ವ ಋತು ಬಂದರಾಗಿ ಪರಿವರ್ತನೆಯಾಗಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇರುವುದರಿಂದ, ಇದನ್ನು ಆದ್ಯತೆಯಲ್ಲಿ ಸರ್ಕಾರದ ಮುಂದೆ ಪ್ರಸ್ತಾಪಿಸಿ ಅನುಷ್ಠಾನಕ್ಕೆ ಒತ್ತಾಯಿಸಬೇಕೆಂದು ಶಾಸಕರಿಗೆ ಮನವಿ ಮಾಡಲಾಗಿದೆ.

2) ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು:
ಕುಂದಾಪುರ-ಉಡುಪಿ ಕರಾವಳಿಗೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಪ್ರವಾಸಿಗರು ಹೆಚ್ಚಾಗಿ ಬರುತ್ತಿರುವ ಸಂದರ್ಭದಲ್ಲಿ, ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಹೆಚ್ಚು ಹೂಡಿಕೆ ಮಾಡಲು ಹಾಗೂ ಪ್ರಸಿದ್ಧ ತಾಣಗಳನ್ನು ಜಾಗತಿಕ ಮಟ್ಟಕ್ಕೆ ತರುವಂತೆ ಅಧಿವೇಶನದಲ್ಲಿ ಒತ್ತಾಯಿಸಬೇಕೆಂದು ಬೇಡಿಕೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

3) ಐಟಿ ಪಾರ್ಕ್ ಸ್ಥಾಪನೆ ಮೂಲಕ ಉದ್ಯೋಗ ಸೃಷ್ಟಿ:
ಸ್ಥಳೀಯ ಯುವಕರು ಉದ್ಯೋಗಕ್ಕಾಗಿ ರಾಜ್ಯದ ಹೊರಗೆ ಹಾಗೂ ವಿದೇಶಗಳಿಗೆ ತೆರಳುವ ದುಸ್ಥಿತಿ ಮುಂದುವರಿದಿರುವುದರಿಂದ, ಕುಂದಾಪುರದಲ್ಲಿ ಐಟಿ ಪಾರ್ಕ್ ಅಥವಾ ಉದ್ಯೋಗ ವಲಯಗಳನ್ನು ತಕ್ಷಣ ನಿರ್ಮಿಸಲು ಸರ್ಕಾರಕ್ಕೆ ಆಗ್ರಹಿಸಬೇಕೆಂದು ಮನವಿಯಲ್ಲಿ ಹೇಳಲಾಗಿದೆ. “ನಮ್ಮ ಕ್ಷೇತ್ರ ಮುದುಕರ ಕ್ಷೇತ್ರವಾಗುತ್ತಿದೆ. ಉದ್ಯೋಗ ಅಪಾರ್ತಿಯಿಂದ ಯುವ ಶಕ್ತಿ ಹೊರ ರಾಜ್ಯಕ್ಕೆ ಹರಿದುಹೋಗುತ್ತಿದೆ,” ಎಂದು ಮನವಿಯಲ್ಲಿ ವಿಷಾದ ವ್ಯಕ್ತವಾಗಿದೆ.

4) ವಾರಾಹಿ ನೀರು ಯೋಜನೆಯ ವಿಳಂಬಕ್ಕೆ ಪರಿಹಾರ:
ಸುಮಾರು 50 ವರ್ಷಗಳಿಂದ ಕರಾವಳಿಗೆ ವಾರಾಹಿ ನೀರು ಬರದೇ ಇರುವ ಪ್ರಶ್ನೆಯನ್ನು ಅಧಿವೇಶನದಲ್ಲಿ ಗಂಭೀರವಾಗಿ ಎತ್ತಿ ಹಿಡಿದು ಕುಡಿಯುವ ನೀರಿನ ಕೊರತೆಯನ್ನು ಶಾಶ್ವತವಾಗಿ ಪರಿಹರಿಸಬೇಕು ಎಂದು ಮನವಿ ಮಾಡಲಾಗಿದೆ.

5) ಉಡುಪಿ ಜಿಲ್ಲೆಗೆ ಸುಸಜ್ಜಿತ ವೈದ್ಯಕೀಯ ಕಾಲೇಜಿನ ಅಗತ್ಯ:
ಉಡುಪಿ ಜಿಲ್ಲೆಗೆ ಸರ್ಕಾರಿ ಅಥವಾ ಅಗ್ರ ಮಟ್ಟದ ಮೆಡಿಕಲ್ ಕಾಲೇಜು ಸ್ಥಾಪನೆ ಅಗತ್ಯವಿದ್ದು, ಜಿಲ್ಲೆಯ ಎಲ್ಲಾ ಶಾಸಕರು ಒಟ್ಟಾಗಿ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಉಲ್ಲೇಖವಾಗಿದೆ.

6) ಕರಾವಳಿಯಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ:
ಕರಾವಳಿ ಪ್ರದೇಶದಲ್ಲಿ ಕಡಲ್ಕೊರೆತ ಹಾಗೂ ಕಲ್ಲು ಸಮುದ್ರಕ್ಕೆ ಸೇರುವ ಸಮಸ್ಯೆ ಗಂಭೀರವಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಮನವರಿಕೆ ಮಾಡಲು ಶಾಸಕರನ್ನು ಮನವಿ ಮಾಡಲಾಗಿದೆ. “ಸಾರ್ವಜನಿಕರ ಜೀವ-ಆಸ್ತಿ ರಕ್ಷಣೆ ಹೆಚ್ಚು ಮುಖ್ಯ, ಸುಳ್ಳು ಭರವಸೆ ನೀಡಿ ಚುನಾವಣೆಗಾಗಿಯೇ ಕೆಲಸ ಮಾಡುವ ಕಾಲ ಕಳೆದಿದೆ,” ಎಂದು ನಾಗೇಂದ್ರ ಪುತ್ರನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...