ಉಡುಪಿ | ಸೂರ್ಯ ಘರ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ – ಸಂಸದ ಶ್ರೀನಿವಾಸ ಪೂಜಾರಿ

Date:

ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ವಿದ್ಯುತ್ ಹೊಂದಿಲ್ಲದ ಕುಟುಂಬದ ಮನೆಗಳಿಗೆ ಮೊದಲ ಆದ್ಯತೆ ನೀಡಿದಾಗ ಈ ಯೋಜನೆ ಯಶಸ್ವಿಯಾಗುತ್ತದೆ ಎಂದ ಅವರು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳು ಈ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಇದರ ಅಡಿಯಲ್ಲಿ ಒದಗಿಸಲಾಗುವ ಸಹಾಯಧನದ ಕುರಿತು ಮಾಹಿತಿ ನೀಡಬೇಕು ಎಂದರು.
ಸೂರ್ಯ ಘರ್ ಯೋಜನೆಯಡಿ ಸೌರ ಶಕ್ತಿ ಪ್ಯಾನೆಲ್‌ಗಳನ್ನು ಅಳವಡಿಸಿಕೊಳ್ಳಲು ಗ್ರಾಹಕರಿಗೆ 3 ಕಿ.ವ್ಯಾಟ್ ವರೆಗೆ ಮಾತ್ರ ಸಹಾಯಧನ ಮೊತ್ತವನ್ನು ನೀಡಲಾಗುತ್ತದೆ. 1 ಕಿ.ವ್ಯಾಟ್‌ಗೆ 30,000 ರೂ, 2 ಕಿ.ವ್ಯಾಟ್‌ಗೆ 60,000 ರೂ. ಮತ್ತು 3 ಕಿ.ವ್ಯಾಟ್‌ಗೆ 78 ಸಾವಿರ ರೂ. ಸಬ್ಸಿಡಿ ನೀಡಲಾಗುವುದು ಎಂದರು.

ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸುವ ಈ ಯೋಜನೆಯು ಕ್ರಾಂತಿಕಾರಿಯಾಗಿ ಜಾರಿಗೆ ಬರಬೇಕು. ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಪ್ರತಿ ಮನೆಗಳ ಮೇಲ್ಛಾವಣೆಯಲ್ಲಿಯೂ ನವೀಕರಿಸಬಹುದಾದ ಇಂಧನವನ್ನು ಬಳಸಿಕೊಂಡು ವಿದ್ಯುತ್ ಉತ್ಪಾದಿಸುವ ಸೂರ್ಯ ಘರ್ ಯೋಜನೆಯನ್ನು ಅಳವಡಿಸಿಕೊಳ್ಳಬೇಕು ಎನ್ನುವುದು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದ್ದು, ಇದನ್ನು ಅಳವಡಿಸಲು ನಗರ ಪ್ರದೇಶಗಳಿಗಿಂತ ಗ್ರಾಮೀಣ ಭಾಗದಲ್ಲಿ ಉಂಟಾಗುವ ಸಣ್ಣ ಪುಟ್ಟ ನ್ಯೂನ್ಯತೆಗಳನ್ನು ನಿವಾರಿಸಿಕೊಂಡು, ಸೋಲಾರ್ ಶಕ್ತಿಯನ್ನು ಬಳಸಿಕೊಳ್ಳುವಂತೆ ಮನಮುಟ್ಟುವಂತೆ ಪ್ರಚಾರ ಮಾಡುವುದರೊಂದಿಗೆ ಪ್ರತಿಯೊಬ್ಬರೂ ಇದನ್ನು ಬಳಸಿಕೊಳ್ಳುವಂತಾಗಲಿ ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಜನಸಾಮಾನ್ಯರ ಬದುಕನ್ನು ಹಸನಾಗಿಸುವ ನಿಟ್ಟಿನಲ್ಲಿ ಹಲವಾರು ಜನಪರ ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಜಾರಿಗೊಳಿಸಲಾಗಿದೆ. ಅದರಲ್ಲಿ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಸಹ ಒಂದಾಗಿದ್ದು, ಇದನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಕೆಲಸವಾಗಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಮೆಸ್ಕಾಂ ವತಿಯಿಂದ ಸೌರ ವಿದ್ಯುತ್ ಒದಗಿಸುವುದು ಮಹತ್ವಪೂರ್ಣ ಯೋಜನೆಯಾಗಿದ್ದು, ವಿದ್ಯುತ್ ಅಭಾವದಿಂದ ಇತ್ತೀಚಿನ ದಿನಗಳಲ್ಲಿ ಜಲ ವಿದ್ಯುತ್, ಉಷ್ಣ ವಿದ್ಯುತ್ ಮೇಲೆ ಅವಲಂಬಿತರಾಗಿದ್ದೇವೆ. ಇದು ಸಾಕಾಗುತ್ತಿಲ್ಲ. ಇದರ ಕೊರತೆಯನ್ನು ನೀಗಿಸಲು ಕೇಂದ್ರ ಸರಕಾರವು ಜಾರಿಗೆ ತಂದಿರುವ ಸೂರ್ಯ ಘರ್ ಯೋಜನೆಯಡಿ ಸುಲಭವಾಗಿ ದೊರೆಯುವ ಸೂರ್ಯನ ಶಾಖದಿಂದ ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದ ಅವರು, ಇದನ್ನು ಅಳವಡಿಸಿಕೊಂಡವರಿಗೆ ಸಬ್ಸಿಡಿ ಸಹ ನೀಡಲಾಗುವುದು ಎಂದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವರ್ಚುಲ್ ಮೂಲಕ ಶುಭ ಹಾರೈಸಿದರು.
ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಮೆಸ್ಕಾಂ ತಾಂತ್ರಿಕ ನಿರ್ದೇಶಕ ಮಹಾದೇವ ಸ್ವಾಮಿ ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸೂರ್ಯ ಘರ್ ಯೋಜನೆಯಡಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ಮತ್ತು ಸಹಾಯಧನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮಂಗಳೂರು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್ ಜಯಕುಮಾರ್, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ ನಾಯಕ್, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್ ಜಿ, ಮೆಸ್ಕಾಂ ಮುಖ್ಯ ಇಂಜಿನಿಯರ್ ರವಿಕಾಂತ ಕಾಮತ್, ನಗರಸಭಾ ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಪಿ.ಡಿ.ಓ ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಮೆಸ್ಕಾಂ ವೃತ್ತ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯಾಯ ಸ್ವಾಗತಿಸಿ, ಪ್ರಶಾಂತ್ ಹಾವಂಜೆ ನಿರೂಪಿಸಿ, ಲೆಕ್ಕಾಧಿಕಾರಿ ಗಿರೀಶ್ ವಂದಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...