ಉಡುಪಿ | ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

Date:

ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ಜನವರಿ 27 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ.

ಕಾರಂತರ ಕಾದಂಬರಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾದಂಬರಿ ಪ್ರಕಾರದ ಸ್ವರೂಪವನ್ನು ಅರಿಯುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಉಚಿತ ಊಟ-ಉಪಹಾರಗಳನ್ನು ಒದಗಿಸಲಾಗುವುದು.

ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ. ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುಕ್ತವಾಗಿ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ಹೆಸರು ನೋಂದಾಯಿಸಿಕೊಳ್ಳಲು ಡಾ.ಶಿವರಾಮ ಕಾರಂತ ಟ್ರಸ್ಟ್ ಮೊ.ನಂ: 6362517472, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ರತ್ನಮಾಲಾ ಮೊ.ನಂ: 9980462972 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...