ಉಡುಪಿ | ಸ್ವಾತಂತ್ರ ನಂತರ ಹಂಚಿಹೋಗಿದ್ದ ರಾಜ್ಯಗಳನ್ನು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿದವರು ಸರ್ದಾರ್ ವಲ್ಲಭಭಾಯಿ ಪಟೇಲರು : ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಸ್ವಾತಂತ್ರ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿ ಭಾರತದ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದರು ಸರ್ದಾರ್ ವಲ್ಲಭಭಾಯಿ ಪಟೇಲರು
ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಜಿಲ್ಲಾಡಳಿತ ಮತ್ತು ಮೈ ಭಾರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ಮತ್ತು ಎನ್.ಎಸ್.ಎಸ್., ಎನ್.ಸಿಸಿ, ರೇಂಜ್ ರೋವರ್ಸ್ ಸಂಯುಕ್ತ ಆಶ್ರಯದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲರ 150 ನೇ ಜನ್ಮ ದಿನೋತ್ಸವದ ಪ್ರಯುಕ್ತ ಉಡುಪಿ ಬೋರ್ಡ್ ಹೈಸ್ಕೂಲ್ ನಿಂದ ಆರಂಭಗೊಂಡ ಉಡುಪಿ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಚಾಲನೆ ನೀಡಿ, ಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರ್ದಾರ್ ವಲ್ಲಭಬಾಯಿ ಪಟೇಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಿದ್ದರು.

ಕಾಶ್ಮೀರವೂ ಸೇರಿದಂತೆ ದೇಶದ ಪ್ರತಿ ಗಲ್ಲಿಗಳಲ್ಲಿಯೂ ಭಾರತದ ತ್ರಿವರ್ಣ ಧ್ವಜ ಹಾರಾಡಬೇಕೆಂಬುದು ಸರ್ದಾರ್ ವಲ್ಲಭಭಾಯಿ ಪಟೇಲರ ಕನಸಾಗಿತ್ತು. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 370 ನೇ ವಿಧಿಯನ್ನು ರದ್ದು ಮಾಡುವ ಮೂಲಕ ದೇಶದ ಅಖಂಡತೆಯನ್ನು ಎತ್ತಿ ಹಿಡಿದಿದ್ದು ಪಟೇಲರು ಕಂಡ ಕನಸನ್ನು ನನಸಾಗಿಸಿದೆ ಎಂದ ಅವರು, ಜಾತಿ, ವರ್ಗ, ಭಾಷೆಯ ಬೇಧ ಮರೆತು ದೇಶದ ಏಕತೆ, ಸಮಗ್ರತೆ ಮತ್ತು ಅಭಿವೃದ್ದಿಗೆ ಮಾರ್ಗದರ್ಶನ ತೋರಿದ ಸರ್ದಾರ್ ವಲ್ಲಭ ಭಾಯಿ ಪಟೇಲರ ನೆನಪಿಗಾಗಿ ಪ್ರತಿವರ್ಷವೂ ಏಕತೆಗಾಗಿ ಓಟ ಕಾರ್ಯಕ್ರಮವನ್ನು ಹಮ್ಮಿಕೊಂಡು ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಪ್ರಪ್ರಥಮ ಉಪ ಪ್ರಧಾನಿಯಾಗಿ ಹಾಗೂ ಗೃಹ ಮಂತ್ರಿಯಾಗಿ ಸರ್ದಾರ್ ವಲ್ಲಭಬಾಯಿ ಪಟೇಲರು ದೇಶವನ್ನು ಒಗ್ಗೂಡಿಸಲು ದಿಟ್ಟ ನಿರ್ಧಾರವನ್ನು ತೆಗೆದುಕೊಂಡ ಫಲವಾಗಿ ಇಂದು ಭಾರತವು ಅಖಂಡವಾಗಿದೆ. ಇಂದಿಗೂ ಅದು ಪ್ರಸ್ತುತ ಎಂದರು.

ಅಪರ ಜಿಲ್ಲಾಧಿಕಾರಿ ಅಭೀದ್ ಗದ್ಯಾಳ್ ರಾಷ್ಟ್ರೀಯ ಐಕ್ಯತೆ ಹಾಗೂ ಸಮಗ್ರತೆಯ ಪ್ರತಿಜ್ಞಾ ವಿಧಿ ಭೋಧಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯಾಧ್ಯಕ್ಷ ಬಸ್ರೂರು ರಾಜೀವ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಬಿಜೆಪಿ ಮಂಗಳೂರು ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳು, ಎನ್.ಎಸ್.ಎಸ್, ಎನ್.ಸಿ.ಸಿ, ರೇಂರ‍್ಸ್, ರೋವರ್ಸ್ ಘಟಕದ ಸ್ವಯಂಸೇವಕರು ಭಾಗವಹಿಸಿದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕ ಡಾ. ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಶಾಂತ್ ಶೆಟ್ಟಿ ಹಾವಂಜೆ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಸರ್ದಾರ್ ವಲ್ಲಭಬಾಯಿ ಪಟೇಲರ 150 ನೇ ಜನ್ಮ ದಿನೋತ್ಸವದ ಪ್ರಯುಕ್ತ ಆಯೋಜಿಸಲಾದ ಜಿಲ್ಲಾ ಮಟ್ಟದ ಆತ್ಮನಿರ್ಭರ ಭಾರತ ಹಾಗೂ ಏಕತಾ ನಡಿಗೆಗೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪ
ಟಿ.ಕೆ ಉಡುಪಿಯ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಅಜ್ಜರಕಾಡಿನ ಹುತಾತ್ಮ ಸ್ಮರಣೆ ಭವನದಲ್ಲಿ ಸಮಾರೋಪಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...