ಉಡುಪಿ | ಹೆದ್ದಾರಿ ಅಗಲೀಕರಣದಿಂದ ಕುಡಿಯುವ ನೀರಿಗೆ ತೊಂದರೆ, ಪೈಪ್‌ಲೈನ್ ದುರಸ್ತಿಗೆ ಎನ್‌ಎಚ್‌ಎಐಗೆ ಸೂಚನೆ

Date:

ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಕೆಯಲ್ಲಿ ಆದ ಸಮಸ್ಯೆಯ ಬಗ್ಗೆ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

WhatsApp Image 2026 01 01 at 5.58.29 PM

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಕುಂದಾಪುರ ತಾಲೂಕಿನ ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ ಹಾಗೂ ಬ್ರಹ್ಮಾವರದ ಸಾಲಿಗ್ರಾಮ, ಕೋಟತಟ್ಟು, ಕೋಟ, ಮಣೂರು, ಪಾಂಡೇಶ್ವರ ಹಾಗೂ ಸಾಸ್ತಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡಿರುವ ಸಾರ್ವಜನಿಕ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್‌ಗಳು ಹಾನಿಗೊಂಡು ಸಾರ್ವಜನಿಕರ ಕುಡಿಯುವ ನೀರಿಗೆ ತೊಂದರೆ ಉಂಟಾಗುತ್ತಿದೆ. ಇವುಗಳ ದುರಸ್ಥಿ ಕಾರ್ಯಗಳನ್ನು ಆದ್ಯತೆಯ ಮೇಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಗಲೀಕರಣ ಕಾಮಗಾರಿಯಿಂದ ಮುಂಬರುವ ದಿನಗಳಲ್ಲಿ ಪೈಪ್‌ಲೈನ್ ಹಾನಿಗೊಳಗಾಗುವ ಸಾಧ್ಯತೆಗಳಿವೆ. ಅಲ್ಲದೇ ಪೈಪ್‌ಲೈನ್‌ಗಳು ರಸ್ತೆ ಕ್ಯಾರೇಜ್ ವೇ ಮಧ್ಯದಲ್ಲಿ ಬರುತ್ತಿರುವುದರಿಂದ ಪ್ರತ್ಯೇಕ ಪೈಪ್‌ಲೈನ್ ಅಳವಡಿಕೆ ಅವಶ್ಯಕತೆ ಇದೆ. ದುರಸ್ಥಿ ಹಾಗೂ ಪ್ರತ್ಯೇಕ ಪೈಪ್‌ಲೈನ್ ಅಳವಡಿಕೆಗೆ ಗ್ರಾಮ ಪಂಚಾಯತ್ ಗಳಲ್ಲಾಗಲಿ, ಗ್ರಾಮೀಣಾಭೀವೃದ್ಧಿ ಇಲಾಖೆಯಿಂದ ಅನುದಾನದ ಲಭ್ಯತೆ ಇಲ್ಲದೇ ಇರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ದುರಸ್ಥಿ ಸೇರಿದಂತೆ ಮತ್ತಿತರ ಕಾರ್ಯಗಳನ್ನು ಕೈಗೊಳ್ಳಬೇಕಿದೆ ಎಂದರು.

ಹಾಲಿ ರಸ್ತೆ ಮಧ್ಯ ಭಾಗದಲ್ಲಿರುವ ಪೈಪ್‌ಲೈನ್‌ಗಳ ಬದಲಿಯಾಗಿ ಹೊಸದಾಗಿ ಪೈಪ್‌ಲೈನ್ ಕಾಮಗಾರಿಗಳನ್ನು ಸರ್ವೀಸ್ ರಸ್ತೆಯಲ್ಲಿ ಬಾಕಿ ಉಳಿದಿರುವ 2.5 ಮೀಟರ್ ಜಾಗದಲ್ಲಿ ಅಳವಡಿಸುವುದು ಸೂಕ್ತ ಎಂದರು. ಪ್ರಸ್ತುತ ದುರಸ್ಥಿ ಸೇರಿದಂತೆ ಹೊಸ ಪೈಪ್‌ಲೈನ್‌ಗಳನ್ನು ಅಳವಡಿಸಲು ತಯಾರಿಸಿರುವ ಅಂದಾಜು ಪಟ್ಟಿಯ ವೆಚ್ಚ ಹೆಚ್ಚಿದ್ದು, ಈ ಬಗ್ಗೆ ಮರು ಪರಿಶೀಲಿಸಿ, ಸರಿಯಾಗಿ ಅಂದಾಜು ವೆಚ್ಚ ತಯಾರಿಸಿ ನೀಡಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರುಗಳಿಗೆ ತಿಳಿಸಿದ ಅವರು, ಇಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕೈಗೊಂಡ ನಿರ್ಣಯದ ನಡವಳಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಭಾಗೀಯ ಕಚೇರಿಗೆ ಕಳುಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರುಗಳಾದ ಯಶ್‌ಪಾಲ್ ಎ ಸುವರ್ಣ ಹಾಗೂ ಎ. ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮೀಷನರ್ ರಶ್ಮಿ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜನೆಯ ಅಭಿಯಂತರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...