ಚುನಾವಣೆ ನೆಪದಲ್ಲಿ ಗಿಮಿಕ್ ಮಾಡಲು ಹೊರಟಿದ್ದಾರೆ: ವರ್ತೂರ್‌ ಪ್ರಕಾಶ್‌ ವಿರುದ್ಧ ಕೊತ್ತೂರು ಮಂಜುನಾಥ್ ವಾಗ್ದಾಳಿ

Date:

ಹತ್ತು ವರ್ಷಗಳ ಕಾಲ ಕ್ಷೇತ್ರದಲ್ಲಿ ವರ್ತೂರು ಪ್ರಕಾಶ್ ಶಾಸಕ ಹಾಗೂ ಸಚಿವರಾಗಿದ್ದರು. ಸಿ.ಎಸ್ ವೆಂಕಟೇಶ್ ಜಿಪಂ ಸದಸ್ಯ ಅಧ್ಯಕ್ಷರಾಗಿದ್ದರು. ಅಧಿಕಾರದಲ್ಲಿದ್ದಾಗ ಸುಮ್ಮನೆ ಇದ್ದು ಇಂದು ಚುನಾವಣೆ ಬಂದಿದೆ ಎಂದು ರಾಜಕೀಯ ಗಿಮಿಕ್ ಮಾಡಲು ಬಂದಿದ್ದಾರೆ. ಮತದಾರರು ಅಂತಹವರಿಗೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ವರ್ತೂರ್‌ ಪ್ರಕಾಶ್‌ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ವಾಗ್ದಾಳಿ ನಡೆಸಿದರು.

ಕೋಲಾರ ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ ವಾರು ಸಭೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಅಭಿವೃದ್ಧಿ ಬೇಕಾಗಿಲ್ಲ ಅವರಿಗೆ ದುಡ್ಡು ಮಾಡಬೇಕು ಅಂತ ಬಂದಿದ್ದಾರೆ ನಮ್ಮ ಜಿಲ್ಲೆಯವರು ಅಲ್ಲ ಅದರೂ ಜನ ಅವಕಾಶ ಕೊಟ್ಟಿದ್ದರು ಸರಿಯಾಗಿ ಜನರ ಋಣ ತೀರಿಸಲಿಲ್ಲ ಇವತ್ತು ಗಿಲಿಟ್ ಕೆಲಸ ಮಾಡಿಕೊಂಡು ದುಡ್ಡು ಮಾಡುವುದು ಜಮೀನು ಹೊಡೆಯುವುದು ಇವರ ಕೆಲಸವಾಗಿದೆ ಇವರು ಕೆಂಪು ಇರುವೆಗಳು ಇದ್ದಂತೆ ಮೈಮೇಲೆ ಬಿಟ್ಟಕೊಳ್ಳಬಾರದು” ಎಂದರು.

“ಕೋಲಾರ ವಿಧಾನ ಸಭಾ ಕ್ಷೇತ್ರದಲ್ಲಿ ಈಗಾಗಲೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಮುಂದಿನ ವರ್ಷದೊಳಗೆ ಪ್ರತಿಯೊಂದು ರಸ್ತೆಯನ್ನೂ ಅಭಿವೃದ್ಧಿ ಮಾಡಲಾಗುತ್ತದೆ. ವೇಮಗಲ್ ಕುರಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಉಸ್ತುವಾರಿ ಸಚಿವರು ಐದು ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ನಮಗೆ ಅಭಿವೃದ್ಧಿ ಮುಖ್ಯವಾಗಿದೆ. ಸರ್ಕಾರದ ಅನುದಾನದಲ್ಲಿ ಅಭಿವೃದ್ಧಿ ಮಾಡಲು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ, “ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ನಿಮ್ಮಗಳ ಸಮಸ್ಯೆ ಪರಿಹಾರ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಇಂದು ಪಟ್ಟಣ ಪಂಚಾಯತಿ ಚುನಾವಣೆ ನಡೆಯುತ್ತಿದೆ. ಬಂಡವಾಳಗಾರರು ಬಂದು ವ್ಯಾಪಾರ ಮಾಡಿ ರಾಜಕೀಯ ಮಾಡಲು ಹೊರಟಿದ್ದಾರೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬೇಡಿ. ಅಧಿಕಾರ ಇದ್ದಾಗ ಜೆಡಿಎಸ್ ಬಿಜೆಪಿ ಪಕ್ಷದವರು ಏನು ಮಾಡಿದ್ದಾರೆ ಎಂಬುದನ್ನು ಪ್ರಶ್ನೆ ಮಾಡಬೇಕು. ಸುಳ್ಳು ಹೇಳಿಕೊಂಡು ಜನರನ್ನು ಯಾಮಾರಿಸುವ ಮೈತ್ರಿ ಅಭ್ಯರ್ಥಿಗಳನ್ನು ದೂರವಿಟ್ಟು ಕಾಂಗ್ರೆಸ್ ಪಕ್ಷದವರನ್ನು ಆಯ್ಕೆ ಮಾಡಬೇಕು” ಎಂದು ತಿಳಿಸಿದರು.

ಇದನ್ನೂ ಓದಿ: ಕೋಲಾರ | ರಾಜ್ಯ ಸರ್ಕಾರ ಪರಿಶಿಷ್ಟರ ಹಣ ಪರಿಶಿಷ್ಟರಿಗೆ ಮಾತ್ರ ಬಳಸಬೇಕು; ದಸಂಸ ಆಗ್ರಹ

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, “ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿ ಇದೆ ಕಾಂಗ್ರೆಸ್ ಶಾಸಕ ಎಂಎಲ್ಸಿ, ಉಸ್ತುವಾರಿ ಸಚಿವರು ಇದ್ದಾರೆ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಬೇಕು ಕೊಟ್ಟ ಮಾತಿನಂತೆ ಅಭಿವೃದ್ಧಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆಯನ್ನು ಬಡವರಿಗೆ ಕೊಟ್ಟಿದ್ದೇವೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಲೋಕಸಭಾ ಕ್ಷೇತ್ರದ ಪಾರಾಜಿತ ಅಭ್ಯರ್ಥಿ ಗೌತಮ್, ಗ್ಯಾರಂಟಿ ಅಧ್ಯಕ್ಷ ವೈ ಶಿವಕುಮಾರ್, ಅಭ್ಯರ್ಥಿಗಳಾದ ವೆಂಕಟರಾಜು, ಕುಮಾರ್, ಮಂಜುಳ ಮುನಿರಾಜು, ಮುಖಂಡರಾದ ಮೈಲಾಂಡಹಳ್ಳಿ ಮುರಳಿ ಉರಟಾಗ್ರಹಾರ ಚೌಡರೆಡ್ಡಿ, ಉದಯಶಂಕರ್, ಯಲವಾರ ರಾಜಕುಮಾರ್, ರತ್ನಮ್ಮ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...