ನೈಸ್ ಕಂಪನಿಯ ದೌರ್ಜನ್ಯ, ಹಗರಣಗಳಿಗೆ ಉಪಮುಖ್ಯಮಂತ್ರಿ ಬೆಂಬಲ: ಕರ್ನಾಟಕ ಪ್ರಾಂತ ರೈತ ಸಂಘ ಖಂಡನೆ

Date:

ಹತ್ತು ಹಲವು ಅಕ್ರಮಗಳಿಗಾಗಿ ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಕಾಲತ್ತು ರೈತ ದ್ರೋಹ ಹಾಗೂ ಅಕ್ರಮ ಕೂಟದ ಬಹಿರಂಗ ಪ್ರದರ್ಶನ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿಯ ಅಧ್ಯಕ್ಷ ಜಿಸಿ ಬಯ್ಯಾರೆಡ್ಡಿ ಖಂಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂಲ ಒಪ್ಪಂದ ಚೌಕಟ್ಟು ಉಲ್ಲಂಘನೆ, ಒಪ್ಪಂದ ವ್ಯಾಪ್ತಿ ಮೀರಿ ಭೂ ಕಬಳಿಕೆ, ಬಿಎಂಐಸಿ ಕ್ರಿಯಾ ಒಪ್ಪಂದದ ಉಲ್ಲಂಘನೆ, ಹೆಚ್ಚುವರಿ ಭೂಮಿ ಕಬಳಿಕೆ, ರಸ್ತೆ ನಿರ್ಮಾಣದ ಹೆಸರಿನಲ್ಲಿ ಪಡೆದ ಭೂಮಿಗಳ ರಿಯಲ್ ಎಸ್ಟೇಟ್ ಮಾರಾಟ, ಕಾನೂನು ಬಾಹಿರ ಕ್ರಮ, ದೌರ್ಜನ್ಯ, ದಬ್ಬಾಳಿಕೆ ಭ್ರಷ್ಟಾಚಾರದ ಮೂಲಕ ರೈತರ ಭೂ ಸ್ವಾಧೀನ ಮುಂತಾದ ಕೃತ್ಯಗಳು ನಡೆದಿವೆ ಎಂದರು.

ಬೆಂಗಳೂರು ಮೈಸೂರು ಮಧ್ಯೆ ಹತ್ತು ಪಥಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ನೈಸ್ ಯೋಜನೆ ಅಪ್ರಸ್ತುತವಾಗಿದೆ. ಯೋಜನೆ ಕಾರ್ಯಗತ ಆಗದೇ ಇದ್ದರೂ ಮೂವತ್ತು ವರ್ಷಗಳ ಹಿಂದಿನ ಕೆಐಎಡಿಬಿ ಭೂ ಸ್ವಾಧೀನವನ್ನು ಉಳಿಸಿಕೊಂಡು ಬರುತ್ತಿರುವುದು ಅನ್ಯಾಯದ ಪರಮಾವಧಿ. ನೈಸ್ ಕಂಪನಿಯ ಭೂ ಸ್ವಾಧೀನದಿಂದ ಈ ಯೋಜನೆ ವ್ಯಾಪ್ತಿಯ ರೈತರು ಅಪಾರ ಯಾತನೆ ಮತ್ತು ಸಂಕಟವನ್ನು ಅನುಭವಿಸುತ್ತಿದ್ದಾರೆ. ಅನ್ಯಾಯದ ಭೂ ಕಬಳಿಕೆ ವಿರುದ್ಧ ರಕ್ಷಣೆಗಾಗಿ ಕೋರ್ಟ್ ಕಛೇರಿಗಳಿಗೆ ಅಲೆದು ಲಕ್ಷಾಂತರ ರೂ.‌ಹಣವನ್ನು ಕಳೆದುಕೊಂಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ನೆರವಿಗೆ ನ್ಯಾಯವಾಗಿ ನಿಲ್ಲಬೇಕಾದ ಸರ್ಕಾರದ ಉಪ ಮುಖ್ಯಮಂತ್ರಿಗಳು ಕಪ್ಪು ಪಟ್ಟಿಯಲ್ಲಿ ಇರಬೇಕಾದ ಹಗರಣ -ಭ್ರಷ್ಟಾಚಾರದ ಕುಖ್ಯಾತಿಗೆ ಒಳಗಾದ ನೈಸ್ ಕಂಪನಿ ಪರವಾಗಿ ವಕಾಲತ್ತು ವಹಿಸುವುದು ಬೇಜವಾಬ್ದಾರಿ ಮತ್ತು ಅವರ ಹುದ್ದೆಗೆ ಯೋಗ್ಯವಲ್ಲದ್ದು. ಮಾತ್ರವಲ್ಲ, ಸರ್ಕಾರದ ಕಾರ್ಪೊರೇಟ್ ಲೂಟಿ ಪರ ನೀತಿಗಳಿಗಿಂತ ತಾನು ಮತ್ತಷ್ಟು ಮುಂದೆ ಇದ್ದೇನೆ ಎಂದು ತನ್ನನ್ನು ಬಿಂಬಿಸಿಕೊಳ್ಳುವ ಹೇಳಿಕೆಯೂ ಕೂಡ ಆಗಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಕರ್ನಾಟಕ ರಾಜ್ಯ ಸಮಿತಿ ತೀವ್ರವಾದ ಆಕ್ರೋಶವನ್ನು ವ್ಯಕ್ತಪಡಿಸುತ್ತದೆ ಎಂದರು.

ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಮಾತನಾಡಿ, ತಮ್ಮ ಮಾತನ್ನು ಕೂಡಲೇ ವಾಪಸ್ಸು ಪಡೆದು ರೈತ ಸಮುದಾಯದ ಕ್ಷಮೆ ಕೋರುವಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರರಿಗೆ ಸಿಎಂ ಸೂಚಿಸಬೇಕು. ಟಿ ಬಿ ಜಯಚಂದ್ರ ಅಧ್ಯಕ್ಷತೆಯ ಸದನ ಸಮಿತಿ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು, ಬಿಎಂಐಸಿ ಯೋಜನೆ ರದ್ದುಪಡಿಸಿ ನೈಸ್ ಕಂಪನಿಯ ಹಗರಣ, ಭ್ರಷ್ಟಾಚಾರ, ಅಕ್ರಮಗಳನ್ನು ಶಿಕ್ಷೆಗೆ ಒಳಪಡಿಸಬೇಕು, ಹೆಚ್ಚುವರಿ ಭೂಮಿಯನ್ನು ನೈಸ್ ಕಂಪನಿಯಿಂದ ವಾಪಸ್ಸು ಪಡೆಯುವ ಸುಪ್ರೀಂ ಕೋರ್ಟ್ ತೀರ್ಪು ಜಾರಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ ಎಂದರು.

ಉಪ ಮುಖ್ಯಮಂತ್ರಿ ರೈತ ದ್ರೋಹ ಹೇಳಿಕೆ ಖಂಡಿಸಿ ಡಿಕೆ ಶಿವಕುಮಾರ್ ಪ್ರತಿಕೃತಿ ಸುಟ್ಟು ಪ್ರತಿಭಟಿಸಲು ನೈಸ್ ಸಂತ್ರಸ್ಥ ರೈತರಿಗೆ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಘಟಕಗಳಿಗೆ ಕರ್ನಾಟಕ ಪ್ರಾಂತ ರೈತ ಸಂಘ ಕರ್ನಾಟಕ ರಾಜ್ಯ ಸಮಿತಿ ಕರೆ ನೀಡುತ್ತದೆ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...