ಉಡುಪಿ | ಕೃಷಿ ಅಭಿವೃದ್ಧಿಗೆ ಕೇಂದ್ರ-ರಾಜ್ಯ ಸಮನ್ವಯ ಅಗತ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ

Date:

ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಲು ಹಾಗೂ ರೈತರು ಎದುರಿಸುತ್ತಿರುವ ಸವಾಲುಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಜಿಲ್ಲೆಯ ರೈತರು ಮತ್ತು ರೈತ ಸಂಘಟನೆಗಳ ಸಭೆಗಳನ್ನು ಆಯೋಜಿಸುವ ಪದ್ಧತಿಯನ್ನು ಪುನರಾರಂಭಿಸಬೇಕೆಂದು ಉಡುಪಿ–ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕರ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಆಡಳಿತದಡಿ ಕಾರ್ಯನಿರ್ವಹಿಸುತ್ತಿರುವ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಆವರಣದಲ್ಲಿ ನಡೆದ ಎರಡು ದಿನಗಳ ಕೃಷಿ ಮೇಳ ಹಾಗೂ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.

WhatsApp Image 2025 10 11 at 9.22.28 AM

ಕೃಷಿ ಮೇಳಗಳು ಇಂದಿನ ಕಾಲದಲ್ಲಿ ಕೃಷಿಯ ಅರ್ಥಪೂರ್ಣತೆಯನ್ನು ಜನರಿಗೆ ಪರಿಚಯಿಸುವ ವೇದಿಕೆಗಳಾಗಿವೆ. ಕರಾವಳಿಯಷ್ಟೇ ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಿಂದ ರೈತರು ಭಾಗವಹಿಸುತ್ತಿರುವುದು ಸಂತೋಷದ ವಿಚಾರ. ಇಂತಹ ಮೇಳಗಳು ರೈತರ ಉತ್ಸಾಹವನ್ನು ಹೆಚ್ಚಿಸುವುದರೊಂದಿಗೆ ಜಿಲ್ಲೆಯ ಆರ್ಥಿಕತೆಗೆ ಚೈತನ್ಯ ತುಂಬುತ್ತವೆ. ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಉತ್ತೇಜನಕ್ಕಾಗಿ 2,100ಕ್ಕೂ ಹೆಚ್ಚು ಯೋಜನೆಗಳನ್ನು ಜಾರಿಗೆ ತಂದು 42,000 ಕೋಟಿ ರೂ.ಗಳಷ್ಟು ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯದಿಂದ ಕೆಲಸ ಮಾಡಿದರೆ ಕೃಷಿ ಕ್ಷೇತ್ರದ ಅಭಿವೃದ್ಧಿ ವೇಗವಾಗಿ ನಡೆಯಲಿದೆ. ಭತ್ತದ ಬೆಂಬಲ ಬೆಲೆ ಹೆಚ್ಚಿಸಲಾಗಿದೆ. ಕಾಳುಮೆಣಸಿನ ಬೆಳೆ ಸಮಸ್ಯೆ ಪರಿಹಾರಕ್ಕಾಗಿ ಜಂಟಿ ಕಾರ್ಯಯೋಜನೆ ರೂಪಿಸುವ ಅಗತ್ಯವಿದೆ. ಕೃಷಿ ಡಿಪ್ಲೊಮಾ ಕಾಲೇಜನ್ನು ಪದವಿ ಕಾಲೇಜಾಗಿ ಮೇಲ್ದರ್ಜೆಗೇರಿಸುವ ಜನಾಭಿಪ್ರಾಯವನ್ನು ಸರ್ಕಾರದ ಮಟ್ಟದಲ್ಲಿ ಪೂರ್ಣಗೊಳಿಸಲು ತಾವು ಬದ್ಧರಾಗಿರುವುದಾಗಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಬ್ರಹ್ಮಾವರದಲ್ಲಿ ಕೃಷಿ ಕಾಲೇಜಿನೊಂದಿಗೆ ಕೃಷಿಗೆ ಸಂಬಂಧಿಸಿದ ವಿಶೇಷ ಆರ್ಥಿಕ ವಲಯ ಹಾಗೂ ಸಮುದ್ರ ಉತ್ಪನ್ನಗಳಿಗೆ ಸಂಬಂಧಿಸಿದ ವಿಶೇಷ ಆರ್ಥಿಕ ವಲಯ ಸ್ಥಾಪನೆಯಾದರೆ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ನಾಂದಿ ಸಿಗುತ್ತದೆ ಎಂದು ಹೇಳಿದರು.

WhatsApp Image 2025 10 11 at 9.22.28 AM 1

ಈ ಸಂದರ್ಭದಲ್ಲಿ ಕರಾವಳಿಯ ಪ್ರಗತಿಪರ ರೈತರಾದ ವಂಡ್ಸೆಯ ಉದಯಕುಮಾರ್ ಶೆಟ್ಟಿ, ಪೆರ್ಡೂರಿನ ಜಯಲಕ್ಷ್ಮೀ ಹೆಗ್ಡೆ, ಸುರತ್ಕಲ್‌ನ ಚಂದ್ರಶೇಖರ ಹೆಗ್ಡೆ, ಸದಾಶಿವ ಐತಾಳ್ ಹಾಗೂ ಉಡುಪಿಯ ಚಂದ್ರಶೇಖರ ನಾಯ್ಕರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧಿಕಾರಿ ಸ್ವರೂಪ್ ಟಿ.ಕೆ, ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ಡಾ. ಸುನೀತಾ ಶೆಟ್ಟಿ, ಪೂರ್ಣಿಮಾ ಜೆ.ಸಿ., ವಿವೇಕ್ ಆರ್., ರಾಜು ಎಂ.ಎಸ್., ಎಂ.ಸಿ.ರೆಡ್ಡಪ್ಪ, ರವೀಂದ್ರ ಕುಮಾರ್ ಡಿ.ಎನ್., ಚಂದ್ರಶೇಖರ್ ನಾಯ್ಕ್, ಡಾ. ಬಿ.ಎಂ. ದುಷ್ಯಂತ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬ್ರಹ್ಮಾವರ ವಲಯ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಧನಂಜಯ ಬಿ. ಸ್ವಾಗತಿಸಿ, ಹಿರಿಯ ಕ್ಷೇತ್ರ ಅಧೀಕ್ಷಕ ಡಾ. ಶಂಕರ್ ಎಂ. ಮತ್ತು ಸಂತೋಷ ಶೆಟ್ಟಿ ನೀಲಾವರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...