ವರ್ಷಗಳ ತಿಕ್ಕಾಟಕ್ಕೆ ಮುಕ್ತಿ: ಮಂಗಳೂರಿನಿಂದ ಕಾರ್ಕಳ, ಮೂಡಬಿದ್ರಿ ಮಾರ್ಗಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ಸೇವೆ ಆರಂಭ

Date:

ಹಲವಾರು ವರ್ಷಗಳ ತಿಕ್ಕಾಟದ ತರುವಾಯ ಕೊನೆಗೂ ಮಂಗಳೂರಿನಿಂದ ಮೂಡಬಿದ್ರೆ ಮಾರ್ಗವಾಗಿ ಕಾರ್ಕಳಕ್ಕೆ ಕೆಎಸ್‌ಆರ್‌ಟಿಸಿ ಬಸ್ಸು ಸಂಚರಿಸಲು ಪ್ರಾರಂಭವಾಗಿದೆ.

ಮಂಗಳೂರಿನಿಂದ ಪ್ರಾರಂಭವಾದ ಬಸ್ಸು ಈಗಾಗಲೇ ಪ್ರತಿದಿನವೂ ಐದು ಟ್ರಿಪ್‌ಗಳನ್ನು ಮುಗಿಸುತ್ತಿದ್ದು, ಸಾರ್ವಜನಿಕರ ಸ್ಪಂದನೆಯೂ ಕೂಡ ಉತ್ತಮವಾಗಿದೆ ಎಂದು ಚಾಲಕ-ನಿರ್ವಾಹಕರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಮಾಧ್ಯಮದಲ್ಲಿ ಪ್ರಕಟಿಸಿರುವಂತೆ ರಸ್ತೆ ಸಾರಿಗೆ ಬಸ್ಸುಗಳು ರಾಜ್ಯ ಹೆದ್ದಾರಿಯ ಬದಿಯಲ್ಲಿಯೇ ನಿಲ್ಲಿಸಿ ಮುಂದುವರೆಯುತ್ತಿರುವುದು ಪ್ರಯಾಣಿಕರಿಗೆ ಬಹಳ ತೊಂದರೆದಾಯಕವಾಗಿದೆ. ಆದುದರಿಂದ ರಾಜ್ಯ ರಸ್ತೆ ಸಾರಿಗೆಯ ಎಲ್ಲ ಬಸ್ವನ್ ಅವರು ಕೂಡ ಮೂಡುಬಿದಿರೆಯ ರಾಜೀವ್ ಗಾಂಧಿ ಕಾಂಪ್ಲೆಕ್ಸ್‌ನ ಒಳಗೆ ನಿಲ್ಲಿಸಿ ನಿಯಂತ್ರಣ ಕಚೇರಿಯ ಉಪಯೋಗವನ್ನು ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 12 12 at 3.07.31 PM

ಮೂಡುಬಿದಿರೆ ಪುರಸಭೆ ಹಾಗೂ ಪೊಲೀಸ್ ಇಲಾಖೆಯವರು ಅಲ್ಲಿರುವ ಇತರ ವಾಹನಗಳನ್ನು ನಿವಾರಿಸಿ ರಾಜ್ಯ ರಸ್ತೆ ಸಾರಿಗೆ ಹಾಗೂ ಹೊರ ರಾಜ್ಯದ ಬಸ್ಸುಗಳಿಗಾಗಿಯೇ ಇರುವ ಸ್ಥಳವನ್ನು ಒದಗಿಸಿಕೊಡುವುದು ಯೋಗ್ಯ ಎಂದು ಪ್ರಯಾಣಿಕರು ಪ್ರತಿಕ್ರಿಯಿಸಿದ್ದಾರೆ.

ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜಾ ಸ್ವಾಗತ

ಮಂಗಳೂರು-ಮೂಡಬಿದ್ರಿ-ಕಾರ್ಕಳ ಮಾರ್ಗದಲ್ಲಿ 4 ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಮಂಗಳೂರು ಕೆ ಎಸ್ ಆರ್ ಟಿ ಸಿ ವಿಭಾಗ ನಿರ್ಧಾರಕ್ಕೆ ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜ ಅವರು ಸ್ವಾಗತಿಸಿದ್ದಾರೆ.

ಮಂಗಳೂರು-ಮೂಡಬಿದ್ರಿ-ಕಾರ್ಕಳ ಮಾರ್ಗದಲ್ಲಿ ಶಕ್ತಿ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ಬಸ್ ಸಂಚಾರ ಇಲ್ಲದೇ ತೊಂದರೆ ಉಂಟಾಗಿದ ಬಗ್ಗೆ ಕಳೆದ ಕೆ ಡಿ ಪಿ ಸಭೆಯಲ್ಲಿ ಪ್ರಸ್ತಾಪಿಸಿ, ಪ್ರಸ್ತುತ ಬೆಳಗಾವಿ ಅಧಿವೇಶನದಲ್ಲಿ ಚುಕ್ಕಗುರುತಿನ ಪ್ರಶ್ನೆ ಮತ್ತು ಗಮನ ಸೆಳೆಯುವ ಪ್ರಶ್ನೆ ಹಾಕಿರುವ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿ ದಿ 9/12/2024 ರಂದು ಪ್ರಾದೇಶಿಕ ಆಯುಕ್ತರು 4 ಪರ್ಮಿಟ್‌ಗಳನ್ನು ನೀಡಿ, ಬಸ್ ಪ್ರಾರಂಭಿಸುವುದಾಗಿ ತಿಳಿಸಿದರು.

ಆದರೆ ಬಸ್ ಮತ್ತು ಚಾಲಕರ ಲಭ್ಯತೆ ಇಲ್ಲದೆ ಕಾರಣಕ್ಕಾಗಿ ಶುಕ್ರವಾರ ಬೆಳಗ್ಗೆಯಿಂದ 4 ಬಸ್ ಸಂಚಾರ ಪ್ರಾರಂಭಿಸಲಾಗುವುದು ಮತ್ತು ಹೆಚ್ಚಿನ ಬಸ್ ಗಳನ್ನು ಮಂಗಳೂರು ನಗರದಲ್ಲಿ ಮೂಡಬಿದ್ರೆ-ಕಾರ್ಕಳ ಮಾರ್ಗದಲ್ಲಿ ಸಂಚರಿಸಲಾಗುವುದು ಎಂದು ಸಾರಿಗೆ ಇಲಾಖೆ ಅನುಮತಿ ನೀಡಲಾಗಿದೆ ಎಂದು ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ ತಿಳಿಸಿದ್ದಾರೆ ಮತ್ತು ಸಾರಿಗೆ ಸಚಿವರಿಗೆ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

WhatsApp Image 2024 12 12 at 3.07.32 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...