ಕೆಎಸ್‌ಆರ್‌ಟಿಸಿ | ಕಲ್ಯಾಣ ಯೋಜನೆಯ ಪರಿಹಾರ ಮೊತ್ತ ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ₹3 ಲಕ್ಷದಿಂದ ₹10 ಲಕ್ಷಗಳವರೆಗೆ ಏರಿಕೆ ಮಾಡಲಾಗಿದೆ. ಇದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲು ಎಂದು ನಿಗಮ ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಎಸ್‌ಆರ್‌ಟಿಸಿ, “ನಿಗಮದಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ₹1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸಲಾಗುತ್ತಿದೆ. ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ₹1 ಕೋಟಿ ನೀಡಲಾಗಿದೆ” ಎಂದು ಹೇಳಿದೆ.

“ಇದೀಗ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ  ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ನಿಗಮದಿಂದ ಅವರಿಗೆ ನೆರವಾಗಲು ₹3 ಲಕ್ಷ ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸಲು ನಾನಾ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು₹3 ಲಕ್ಷದಿಂದ ₹10ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ ₹7 ಲಕ್ಷಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ” ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ʼಬಸವಣ್ಣʼ ನಾಮಕರಣ: ಸಾಮಾನ್ಯರು, ಗಣ್ಯರು ಹೇಳುವುದೇನು?

“ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ, ನೌಕರರು ಮರಣ ಹೊಂದಿದ್ದಲ್ಲಿ, ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ  ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ. ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ ₹100 ಗಳಿಂದ ₹200 ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ ₹50 ಗಳ ವಂತಿಕೆಯನ್ನು ₹100 ಗಳಿಗೆ ಹೆಚ್ಚಿಸಿ, ಪರಿಷ್ಕರಿಸಲಾಗಿದೆ” ಎಂದು ತಿಳಿಸಿದೆ.

“ಈ ಪರಿಷ್ಕೃತ ಆದೇಶವು ನವೆಂಬರ್ 1ರಿಂದ ಜಾರಿಗೆ ಬರಲಿದ್ದು, ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...