ಕೆಎಸ್‌ಆರ್‌ಟಿಸಿ ಉದ್ಯೋಗಿ ಆತ್ಮಹತ್ಯೆಗೆ ಯತ್ನ; ಮೇಲಾಧಿಕಾರಿ ಕಿರುಕುಳ ಆರೋಪ

Date:

ಡಿಪೋ ಮ್ಯಾನೇಜರ್ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕೆಎಸ್‌ಆರ್‌ಟಿಸಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಮಡಿಕೇರಿ ತಾಲೂಕಿನ ಹೆಬ್ಬಾಲೆ ಗ್ರಾಮದ ನಿವಾಸಿ ಅಭಿಷೇಕ್ ಆತ್ಮಹತ್ಯೆಗೆ ಯತ್ನಿಸಿರುವ ಉದ್ಯೋಗಿ. ಅವರು ಸಾರಿಗೆ ಇಲಾಖೆಯ ಜಿಲ್ಲಾ ವಿಭಾಗಾಧಿಕಾರಿ ಅವರಿಗೆ ಪತ್ರ ಬರೆದಿದ್ದು, ಬಳಿಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪತ್ರದಲ್ಲಿ ಮಡಿಕೇರಿ ಡಿಪೇ ಮ್ಯಾನೇಜರ್ ಗೀತಾ ಅವರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಷೇಕ್‌ ಅವರು ಮಡಿಕೇರಿ ಡಿಪೋದಲ್ಲಿ ಕಿರಿಯ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮಗೆ ಗೀತಾ ಅವರು ಕಳೆದ ಮೂರ್ನಾಲ್ಕು ವರ್ಷಗಳಿಂದ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

WhatsApp Image 2023 08 30 at 7.36.28 AM

“ಗೀತಾ ಅವರು ಹಿಂದಿನ ಸರ್ಕಾರದಲ್ಲಿ ಜಿಲ್ಲೆಯ ಶಾಸಕರ ನೆರವು ಪಡೆದು ನೆಲೆ ಕಂಡುಕೊಂಡಿದ್ದಾರೆ. ಅವರ ವಿರುದ್ಧ ವ್ಯಾಪಕ ದೂರುಗಳು ಇದ್ದರೂ, ಮಾಜಿ ಶಾಸಕರ ನೆರವಿನಿಂದ ಇಲ್ಲೇ ಉಳಿದಿದ್ದಾರೆ. ಅವರನ್ನು ವರ್ಗಾವಣೆ ಮಾಡಿ ಹೊಸ ಸರ್ಕಾರ ಆದೇಶಿಸಿದೆ. ಆದರೂ, ಗೀತಾ ಅವರು ತಮ್ಮ ಪ್ರಭಾವ ಬಳಸಿ, ಜಿಲ್ಲೆಯ ಇಬ್ಬರೂ ಶಾಸಕರ ಮನವೊಲಿಸಿ, ಇಲ್ಲೇ ಮುಂದುವರೆಯಲು ಶಿಫಾರಸ್ಸು ಮಾಡಿಸಿಕೊಂಡಿದ್ದಾರೆ” ಎಂದು ಪತ್ರದಲ್ಲಿ ಆರೋಪಪಿಸಿದ್ದಾರೆ.

“ಗೀತಾ ಅವರ ಕಿರುಕುಳವನ್ನು ಸಹಿಸಲಾರದೆ ಹಾಗೂ ಹಾಲಿ ಶಾಸಕರುಗಳು ಕೂಡ ಇವರ ಬಗ್ಗೆ ಮೃದು ಧೋರಣೆ ಅನುಸರಿಸಿದನ್ನು ಕಂಡು ಬೇಸಿತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ” ಎಂದು ಅವರು ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...