ಉಡುಪಿ | ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್ ಪಾಸ್ : ಅರ್ಜಿ ಆಹ್ವಾನ

Date:

ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್‌ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು ಡಿಕ್ಲರೇಷನ್ ಫಾರ್ಮ್ ಅನ್ನು ಸೇವಾಸಿಂಧು ತಂತ್ರಾಂಶದಲ್ಲಿ ಅಥವಾ ಕ.ರಾ.ರ.ಸಾ.ನಿಗಮದ ವೆಬ್‌ಸೈಟ್ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಡಿಕ್ಲರೇಷನ್ ಫಾರ್ಮ್ ಅನ್ನು ಭರ್ತಿ ಮಾಡಿ ಶಾಲಾ ಅಥವಾ ಕಾಲೇಜು ಮುಖೋಪಾಧ್ಯಾಯರ ಅಥವಾ ಪ್ರಾಂಶುಪಾಲರ ಸಹಿ ಮತ್ತು ಶಾಲಾ/ಕಾಲೇಜು ಮೊಹರಿನೊಂದಿಗೆ ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡಬೇಕು.

ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸು ಪಡೆಯಲು ಭೇಟಿ ನೀಡಬೇಕಿರುವ ಕೌಂಟರ್‌ನ ಹೆಸರು/ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮುಖೇನ ಕಳುಹಿಸಲಾಗುವುದು. ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‌ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರವು ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಿದ್ದು, ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕ ರಾಜ್ಯದ ಶಾಲೆ/ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸು ಪಡೆಯುವ ಅಗತ್ಯವಿದೆ.

ಕ.ರಾ.ರ.ಸಾ.ನಿಗಮ ವ್ಯಾಪ್ತಿಯ ಪಾಸ್ ವಿತರಣಾ ಕೌಂಟರ್‌ಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಮಂಗಳೂರು ಕ.ರಾ.ರ.ಸಾ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...