ಕೂಡ್ಲಿಗಿ | ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಶ್ರೀನಿವಾಸ್

Date:

ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್ ಟಿ ಶ್ರೀನಿವಾಸ್‌ ಅವರು, ಗುಡೇಕೋಟೆ, ಹೊಸಹಳ್ಳಿ, ಕೂಡ್ಲಿಗಿ ಹೋಬಳಿ ವ್ಯಾಪ್ತಿಗಳ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪಕ್ಷದ ಕಾರ್ಯಕರ್ತದ ಅಹವಾಲುಗಳನ್ನು ಸ್ವೀಕರಿಸಿದರು.

ಪಟ್ಟಣದಲ್ಲಿ ಮಾ.19ರಂದು ಜರುಗಿದ್ದ ಅಗ್ನಿ ಅವಘಡದಲ್ಲಿ ನಷ್ಟಕ್ಕೀಡಾಗಿದ್ದ ರೈತನ ಕುಟುಂಬಸ್ಥರು ಶಾಸಕರನ್ನು ಸಂಪರ್ಕಿಸಿ ಪರಿಹಾರಕ್ಕಾಗಿ ಮನವಿ ಮಾಡಿದರು. ಅವರ ಮನವಿ ಸ್ವೀಕರಿಸಿ ಅಹವಾಲು ಆಲಿಸಿದ ಅವರು, ಸಂಬಂಧಿಸಿದ ಇಲಾಖೆಗೆ ಶಿಫಾರಸ್ಸು ಮಾಡಲಾಗುವುದೆಂದು ಭರವಸೆ ನೀಡಿದರು. ವೈಯಕ್ತಿಕವಾಗಿ ತುರ್ತು ಹಣದ ನೆರವು ನೀಡಿ ಸಂತೈಸಿದರು.

ಬಳಿಕ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಚರ್ಚೆ ನಡೆಸಿದರು. ಕರ್ತವ್ಯದಲ್ಲಿ ಸಮನ್ವಯ ಸಾಧಿಸಿಕೊಂಡು ಸೇವೆಯಲ್ಲಿ ಸಮರ್ಪಕತೆ ಕಾಪಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 03 29 at 11.16.42 AM 1

ಇದನ್ನೂ ಓದಿ: ವಿಜಯನಗರ | ಕೂಡ್ಲಿಗಿ ಬಳಿ ಶಾಲಾ ವಾಹನ ಡಿಕ್ಕಿ; ಶಿಕ್ಷಕ ಮೃತ್ಯು

ಕುಂದು ಕೊರತೆ ಸಭೆಯಲ್ಲಿ ತಹಶೀಲ್ದಾರ್‌ ವಿ ಕೆ ನೇತ್ರಾವತಿ, ಡಿವೈಎಸ್‌ಪಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ನಂಜಪ್ಪ, ಹೊಸಹಳ್ಳಿ ಗುಡೇಕೋಟೆ ಹೋಬಳಿಯ ವಿವಿಧ ಮುಖಂಡರು, ಸಾರ್ವಜನಿಕರು ರೈತರು ಪಕ್ಷದ ಮುಖಂಡರು ಕಾರ್ಯಕರ್ತರು, ಪಟ್ಟಣ ಪಂಚಾಯ್ತಿ ಅಧ್ಯಕ್ಷ ಕಾವಲ್ಲಿ ಶಿವಪ್ಪನಾಯಕ ಸೇರಿದಂತೆ ಕ್ಷೇತ್ರದ ಜನಪ್ರತಿನಿಧಿಗಳು, ಮುಖಂಡರಾದ ಗುರುಸಿದ್ದನಗೌಡ, ತಾಪಂ ನಿವೃತ್ತ ಅಧಿಕಾರಿ ಜಿ.ಎಮ್.ಬಸಣ್ಣ, ನರಸಿಂಹಗಿರಿ ವೆಂಕಟೇಶ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...