ಕೂಡ್ಲಿಗಿ | ವೇತನ ಹೆಚ್ಚಳ; ಸಿಹಿ ಹಂಚಿ ಸಂಭ್ರಮಿಸಿದ ಹೊರಗುತ್ತಿಗೆ ನೌಕರರು

Date:

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖಾ ವಸತಿ ನಿಲಯ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರು, ಸರ್ಕಾರ ವೇತನ ಹೆಚ್ಚಿಸಿರುವುದಕ್ಕೆ, ಹರ್ಷ ವ್ಯಕ್ತಪಡಿಸಿದ್ದು ಸರ್ಕಾರದ ನಿಲುವನ್ನು ಸ್ವಾಗತಿಸಿದ್ದಾರೆ. ಕೂಡ್ಲಿಗಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಫಕೀರಪ್ಪರವರಿಗೆ ಸಿಹಿ ತಿನಿಸುವುದರ ಮೂಲಕ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

“ಹಗಲಿರುಳು ವಸತಿ ಶಾಲೆ, ವಸತಿ ನಿಲಯದಲ್ಲಿ ಕೆಲಸಕ್ಕೆ ಅತಿ ಕಡಿಮೆ ವೇತನ ನೀಡಲಾಗುತ್ತಿತ್ತು. ವೇತನ ಪರಿಷ್ಕರಿಸಿ ಹೆಚ್ಚಿಸಬೇಕೆಂಬ ಹೊರಗುತ್ತಿಗೆ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಗಣನೆಗೆ ತೆಗೆದುಕೊಂಡು ಈ ಬಾರಿ ವೇತನ ಹೆಚ್ಚಳ ಮಾಡಿರುವುದು ಸಂತಸ ತಂದಿದೆ. ಬೆವರಿಗೆ ಸೂಕ್ತ ಗೌರವ ನೀಡಿ ತಕ್ಕ ಪ್ರತಿ ಫಲವಾಗಿ, ನ್ಯಾಯಯುತವಾದ ವೇತನ ನೀಡಲು ಸರ್ಕಾರ ನಿರ್ಧರಿಸಿರುವುದನ್ನು ಸ್ವಾಗತಿಸಿದ್ದೇವೆ” ಎಂದು ಕಾರ್ಮಿಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೊರಗುತ್ತಿಗೆ ನೌಕರರ ಸಂಘದ ಯುವ ಮುಖಂಡ ಜಿ ಪರಸಪ್ಪ, ವಂದೇ ಮಾತರಂ ಜಾಗೃತಿ ವೇದಿಕೆ ಮುಖಂಡ ಹಾಗೂ ಕಾರ್ಮಿಕರ ಪರ ದಲಿತ ಹೋರಾಟಗಾರ ಡಿ ‌ಹೆಚ್ ಮರಿಸ್ವಾಮಿ, ಗೋವಿಂದಪ್ಪ, ವಸತಿ ಶಾಲೆ ಹಾಗೂ ವಸತಿ ನಿಲಯಗಳ ಹೊರಗುತ್ತಿಗೆ ನೌಕರರಾದ ಅಂಜಿನಮ್ಮ, ಸಾವಿತ್ರಮ್ಮ, ಬೆನಾಳಮ್ಮ, ನಾಗರತ್ನ, ಕಲಾವತಿ, ಭಾರತಿ, ಲಕ್ಷ್ಮಿ, ಭಾಗ್ಯಮ್ಮ, ಸಿ ಜೆ ನಾಗರಾಜ, ಮಹಾಂತೇಶ, ಪವಿತ್ರ, ಸಿದ್ದಮ್ಮ, ರತ್ನಮ್ಮ, ಶಕುಂತಲಮ್ಮ, ಯಲ್ಲಮ್ಮ ಹಾಗೂ ಸಿದ್ದಲಿಂಗಮ್ಮ, ಕೆ.ರೇಣುಕಮ್ಮ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಸಿದ್ದಪ್ಪ ಸೇರಿದಂತೆ ಇತರರು ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಪಹಲ್‌ಗಾಮ್ ಭಯೋತ್ಪಾದಕರ ದಾಳಿಗೆ 28 ಜನರ ಸಾವು; ಡಿವೈಎಫ್ಐ ಖಂಡನೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...