ಉಡುಪಿ | ಅ.13ರಂದು ತೆರೆಗೆ ಬರಲಿದೆ ʼಕುದ್ರುʼ ಚಿತ್ರ

Date:

ʼಕುದ್ರುʼ ಚಿತ್ರ ಅಕ್ಟೋಬರ್ 13ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ, ಚಿತ್ರದ ನಟ ಹರ್ಷಿತ್ ಶೆಟ್ಟಿ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ ನಲ್ಲಿ, ಭಾಸ್ಕರ್ ನಾಯ್ಕ್ ರಚಿಸಿ, ನಿರ್ದೇಶಿಸಿ, ನಿರ್ಮಿಸಿರುವ ಈ ಚಿತ್ರ ಕರಾವಳಿ ಭಾಗದ ಕಥಾಹಂದರ ಹೊಂದಿದೆ ಎಂದರು.

ʼಕುದ್ರುʼ ಎಂದರೆ, ನೀರಿನಿಂದ ಸುತ್ತುವರೆದ ದ್ವೀಪ. ಈ ದ್ವೀಪದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮೂರು ಕಟುಂಬಗಳು‌ ಸಹಬಾಳ್ವೆಯಿಂದ ಜೀವನ ನಡೆಸುತ್ತಿರುತ್ತವೆ. ಈ ವೇಳೆ ವಾಟ್ಸಪ್ ಸಂದೇಶವೊಂದರಿಂದ ಎಲ್ಲರಲ್ಲೂ ಮನಸ್ತಾಪ ಮೂಡುತ್ತದೆ. ಚಿತ್ರದ ಮೊದಲ ಭಾಗದ ಕಥೆ ಕಾಲೇಜಿನಲ್ಲಿ ನಡೆಯುತ್ತದೆ. ಆನಂತರ, ಕುತೂಹಲ ಮೂಡಿಸುವ ಕಥಾಹಂದರವಿದೆ. ಅದನ್ನು ಚಿತ್ರದಲ್ಲೇ ನೋಡಬೇಕು.

ಉಡುಪಿ, ಮಲೆನಾಡು, ಗೋವಾ ಹಾಗೂ ಆಯಿಲ್‌ರಿಗ್‌ನಲ್ಲಿ ಚಿತ್ರೀಕರಣವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಮತ್ತು ಟ್ರೇಲರ್ ಜನಪ್ರಿಯವಾಗಿದೆ. ಈ ಚಿತ್ರದಲ್ಲಿ  ಮುಸ್ಲಿಂ ಸಮುದಾಯದ ಹುಡುಗಿಯಾಗಿ, ನಟಿ ಡೈನ ಡಿಸೋಜ, ಮುಸ್ಲಿಂ ಹುಡುಗನಾಗಿ ನಟ ಫರ್ಹಾನ್, ಬ್ರಾಹ್ಮಣ ಹುಡುಗನಾಗಿ ಹರ್ಷಿತ್ ಶೆಟ್ಟಿ ಅಭಿನಯಿಸಿದ್ದು, ಕ್ರಿಶ್ಚಿಯನ್ ಹುಡುಗನಾಗಿ ಗಾಡ್ವಿನ್ ಹಾಗೂ ಬ್ರಾಹ್ಮಣ ಹುಡುಗಿ ಪಾತ್ರದಲ್ಲಿ ನಾಯಕಿ ಪ್ರಿಯಾ ಹೆಗ್ಡೆ, ಮಂಗಳೂರಿನ ನಮಿತಾ, ಪ್ರವೀಣ್ ಬಂಗೇರ, ಕಾಂತಾರ ಸತೀಶ್ ಆಚಾರ್ಯ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛಾಯಾಗ್ರಹಣ ಶ್ರೀ ಪುರಾಣಿಕ್, ಪ್ರದೀಪ್ ಹಾಗೂ ಉಡುಪಿ ಪ್ರಜ್ವಲ್, ಪ್ರತೀಕ್ ಕುಂದು ಸಂಗೀತ  ನಿರ್ದೇಶನ ಹಾಗೂ ಶ್ರೀನಿವಾಸ್ ಕಲಾಲ್ ಅವರ ಸಂಕಲನವಿರುವ ʼಕುದ್ರುʼ ಚಿತ್ರಕ್ಕೆ ಉಡುಪಿ ಕೃಷ್ಣ ಆಚಾರ್ ಸಂಭಾಷಣೆ ಬರೆದಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ಪತ್ರಿಕಾಗೋಷ್ಠಿಯಲ್ಲಿ ಹರ್ಷಿತ್ ಶೆಟ್ಟಿ, ಪ್ರಿಯಾ ಹೆಗ್ಡೆ, ಸತೀಶ್ ಆಚಾರ್ಯ, ಫರ್ಹಾನ್, ನಮಿತಾ,  ಡಯಾನಾ ಡಿಸೋಜ, ಪ್ರವೀಣ್ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...