ಕುಮಾರಸ್ವಾಮಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ: ರಾಮಲಿಂಗಾರೆಡ್ಡಿ

Date:

  • ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ?
  • ‘ಬಿಜೆಪಿಯವರು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಲಿ’

ವಿರೋಧ ಪಕ್ಷದಲ್ಲಿರುವ ಎಚ್‌ ಡಿ ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ? ಅವರ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ನಮ್ಮ ಸರ್ಕಾರ ಟೇಕಾಫ್ ಆಗಿ ಸಾವಿರಾರು ಕಿಲೋಮೀಟರ್ ಮುಂದೆ ಹೋಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ರಾಮನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಟೀಕೆ ಮಾಡುವವರು ಮಾಡಲಿ. ವಿರೋಧ ಪಕ್ಷದವರ ಕೆಲಸವೇ ಅದು” ಎಂದರು.

“ಭ್ರಷ್ಟಾಚಾರ ಆರೋಪ ಕುರಿತು ಮನೆ ದೇವರ ಮೇಲೆ ಆಣೆ ಮಾಡಲಿ ಎನ್ನುವ ಬಿಜೆಪಿಯವರು, ತಮ್ಮ ಕಾಲದಲ್ಲಿ ಭ್ರಷ್ಟಾಚಾರವೇ ನಡೆದಿಲ್ಲ ಎಂದು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಿ ತೋರಿಸಲಿ. ಬಿಜೆಪಿಯೊಳಗೆ ಶಾಸಕ ಸಿ ಎನ್ ಅಶ್ವತ್ಥನಾರಾಯಣ ಮಾತಿಗೆ ಕಿಮ್ಮತ್ತಿಲ್ಲ. ಹೀಗಿರುವಾಗ ಉಳಿದವರು ಕಿಮ್ಮತ್ತು ಕೊಡುತ್ತಾರಾ?” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಕೆದಾಟು ಯೋಜನೆ

“ಮೇಕೆದಾಟು ಯೋಜನೆಯಿಂದ ಯಾರಿಗೂ ಸಮಸ್ಯೆ ಇಲ್ಲ. ಯಾವುದೇ ಸರ್ಕಾರವಿದ್ದರೂ ತಮಿಳುನಾಡು ಕ್ಯಾತೆ ತೆಗೆಯುತ್ತಲೇ ಇರುತ್ತದೆ. ಈಗ ಅವರು ಕೋರ್ಟ್ ಮೋರೆ ಹೋಗಿದ್ದಾರೆ. ನಾವು ಸಹ ಕೋರ್ಟ್ ಮೂಲಕವೇ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಮುನಿಯಪ್ಪ ಅವರದು ವೈಯಕ್ತಿಕ ಅಭಿಪ್ರಾಯ

“ಎರಡು ವರ್ಷದ ಬಳಿಕ ಹಿರಿಯ ಸಚಿವರು ಕಿರಿಯರಿಗೆ ಅವಕಾಶ ನೀಡಬೇಕು ಎಂಬುದು ಸಚಿವ ಮುನಿಯಪ್ಪ ಅವರ ವೈಯಕ್ತಿಕ ಅಭಿಪ್ರಾಯ. ಹೊಸಬರಿಗೆ ಅವಕಾಶ ನೀಡುವ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...