ಪ್ರೀತಿಗೆ ಪೋಷಕರ ವಿರೋಧ: ಕೇರಳದಿಂದ ನಾಪತ್ತೆಯಾಗಿದ್ದ ಜೋಡಿ ಉಡುಪಿಯಲ್ಲಿ ಪತ್ತೆ

Date:

ಕೇರಳದ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳನ್ನು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ರಕ್ಷಿಸಿರುವ ಘಟನೆ ನಡೆದಿದೆ. ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಗೆ ಮನೆಯಲ್ಲಿ ವಿರೋದ ವ್ಯಕ್ತವಾದರಿಂದ ಮನೆಮಂದಿಗೆ ಸೂಚನೆ ನೀಡದೆ ನಾಪತ್ತೆಯಾಗಿದ್ದರು. ಮನೆ‌ಮಂದಿ ಹುಡುಕಾಟ ನಡೆಸಿದರೂ, ಯುವಕ ಯುವತಿ ಪತ್ತೆಯಾಗದೆ ಇರುವುದರಿಂದ‌, ಕುಂಬಳೆ ಪೋಲಿಸ್ ಠಾಣೆಯ‌ಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

1006011934

ಕೇರಳದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ಆರ್ ಪಿ ಎಫ್ ಸುನಿಲ್ ಕೆ.ಸಿ ಅವರಿಗೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವಕ ಯುವತಿಯ ವರ್ತನೆಯಲ್ಲಿ ಅನುಮಾನಗೊಂಡು ವಿಚಾರಿಸಿದಾಗ, ಕುಂಬಳೆಯಿಂದ ನಾಪತ್ತೆಯಾಗಿದ್ದವರೆಂದು ತಿಳಿದುಬಂದಿದೆ. ಬಳಿಕ ಅವರು ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ಇಳಿಸಿ, ಇನ್ಸ್ಪೆಕ್ಟರ್ ಮಧುಸೂದನ್ ಅವರಿಗೆ, ಹಸ್ತಾಂತರಿಸಿದರು. ಅವರು ಪ್ರೇಮಿಗಳ‌ ವಯಸ್ಸಿನಲ್ಲಿ ಅನುಮಾನಪಟ್ಟು, ಮಕ್ಕಳ ಸಹಾಯವಾಣಿಗೆ ಮಾಹಿತಿ ನೀಡಿದರು.

ಮಕ್ಕಳ ಸಹಾಯವಾಣಿಯ, ಪ್ರಕಾಶ್, ಲಕ್ಷ್ಮೀಕಾಂತ್ ಅವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರ ನೆರವು ಪಡೆದು, ಪ್ರೇಮಿಗಳನ್ನು ಉಡುಪಿ ನಗರ ಮಹಿಳಾ ಪೋಲಿಸ್ ಠಾಣೆಯ‌ ವಶಕ್ಕೆ ಒಪ್ಪಿಸಿದರು. ಅಲ್ಲಿ ವಿಚಾರಿಸಲ್ಪಟ್ಟಾಗ ಕುಂಬಳೆಯಿಂದ ನಾಪತ್ತೆಯಾಗಿದ್ದ ಪ್ರೇಮಿಗಳೆಂದು ದೃಢಪಟ್ಟಿತು. ಬಳಿಕ ಪ್ರೇಮಿಗಳನ್ನು ಕುಂಬಳೆಯ ಪೋಲಿಸರಿಗೆ ಒಪ್ಪಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...