ಕುಮಟಾ | ದಸಂಸ ಸಮಾಲೋಚನಾ ಸಭೆ; ಸಂಘಟನೆಯ ಬಲವರ್ಧನೆಗೆ ತೀರ್ಮಾನ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ಕುಮಟಾ ತಾಲ್ಲೂಕು ಶಾಖೆಯ ವತಿಯಿಂದ ಕುಮಟಾದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ತಾಲ್ಲೂಕಿನಾದ್ಯಂತ ಸಂಘಟನೆಯನ್ನು ಬಲಿಷ್ಠವಾಗಿ ರೂಪಿಸುವ ಕುರಿತು ಚರ್ಚೆ ನಡೆಯಿತು. ತಾಲ್ಲೂಕಿನ ಅಡಿ ಬರುವ ಎಸ್ಸಿ/ಎಸ್ಟಿ ಜನರು ಹೆಚ್ಚು ವಾಸಿಸುವ ಗ್ರಾಮಗಳಿಗೆ ತಾಲ್ಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು ಭೇಟಿ ನೀಡಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಮತ್ತು ಅವರಿಗೆ ಅನ್ಯಾಯವಾದಾಗ ಯಾವ ರೀತಿಯಲ್ಲಿ ಕಾನೂನು ಹೋರಾಟ ಮಾಡಬೇಕು ಮತ್ತು ಸಂಘಟಿತರಾದರೆ ನಮ್ಮ ಹಕ್ಕುಗಳನ್ನು ನಾವು ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಬಿ. ಕೃಷ್ಣಪ್ಪ ಅವರ ಜೀವನಪರಂಪರೆ, DSS ಹೋರಾಟದ ಇತಿಹಾಸ, ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ಗ್ರಾಮಸ್ತರಿಗೆ ಪರಿಚಯಿಸಬೇಕು ಮತ್ತು ನಮ್ಮ ಇತಿಹಾಸದ ಬಗ್ಗೆ ನಮ್ಮ ಜನಕ್ಕೆ ಜ್ಞಾನ ನೀಡಬೇಕು. ಸಾಮಾಜಿಕ ಹಕ್ಕುಗಳು, ಸಂವಿಧಾನದಲ್ಲಿ ನೀಡಿರುವ ರಕ್ಷಣೆಗಳು, ಹಾಗೂ ಸರ್ಕಾರದ ಸಹಾಯ ಸೌಲಭ್ಯಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸದಸ್ಯತ್ವ ಅಭಿಯಾನ ಆರಂಭಿಸಿದ್ದೆವೆ ಆದ್ದರಿಂದ ಎಲ್ಲರೂ ಸಹಕರಿಸಲು ಕೋರಿದಾಗ ಎಲ್ಲರೂ ಸಹಕರಿಸಲು ಸಿದ್ದರಿದ್ದೇವೆ ಎಂದು ಹೇಳಿದರು.

1000236833

ಸಭೆಯನ್ನು ದ.ಸಂ.ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಎಸ್. ಫಕ್ಕೀರಪ್ಪ ಉದ್ಘಾಟಿಸಿದರು. ಜಿಲ್ಲಾ ಸಂಚಾಲಕರಾದ ಗೋಪಾಲ ನಡಕಿನಮನಿ ಸಭೆಯ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸಂಘಟನಾ ಸಂಚಾಲಕರಾದ ಬೊಮ್ಮಯ್ಯ ಕ್ಕೆ ಹಳ್ಳೆರ್ (ಕುಮಟಾ), ಮಂಜುನಾಥ ಎನ್. ಹಳ್ಳೆರ್ (ಹೊನ್ನಾವರ), ಕಲ್ಲಪ್ಪ ಎಂ. ಹೋಳಿ (ಯಲ್ಲಾಪುರ), ಹಾಗೂ ಮುಂಡಗೋಡ ಸಂಚಾಲಕರಾದ ಲಕ್ಷ್ಮಣ ಬೋವಿವಡ್ಡರ ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶಿರಸಿ | ಮಳೆ ಬಂದರೆ ಹೊಂಡ, ಬಿಸಿಲಾದ್ರೆ ಧೂಳು: ಭೀಮಘರ್ಜನೆಯ ವಿಡಿಯೋ ವೈರಲ್

ಸಭೆಯಲ್ಲಿ ಹೊನಲು ಗದ್ದೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದು ಸಂಘಟನೆಯ ಬಲವರ್ಧನೆಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ತಾಲ್ಲೂಕು ಪದಾಧಿಕಾರಿಗಳು, ಸದಸ್ಯರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...