ಕುಮಟಾ | ‘ಅಂದರ್-ಬಾಹರ್’ ಆಟಕ್ಕೆ ಅನುಮತಿ ನೀಡುವಂತೆ ಬೇಡಿಕೆ; ನೀಡದಿದ್ದರೆ ಹೋರಾಟದ ಎಚ್ಚರಿಕೆ!

Date:

ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗೂ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷರಾದ ಮಂಜು ಜೈನ್ ಅವರು ಕುಮಟಾ ಪೊಲೀಸ್ ಇಲಾಖೆಗೆ ವಿನೂತನ ಮನವಿಯೊಂದನ್ನು ಸಲ್ಲಿಸಿ ಇಲಾಖೆಯನ್ನೇ ಗಲಿಬಿಲಿಗೊಳಿಸಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ “ಅನಾದಿಕಾಲದಿಂದಲೂ” ನಡೆದುಕೊಂಡು ಬಂದಿರುವ ಆಟಗಳಾದ ‘ಹೊಂಡೆ ಆಟ’, ‘ಅಂದರ್-ಬಾಹರ್’, ‘ಸೋಲಕಾಯಿ’ ಮತ್ತು ‘ಕುಟುಕುಟೆ’ ಆಟಗಳಿಗೆ ದಿನಾಂಕ 19-10-2025 ರಿಂದ 22-10-2025 ರವರೆಗೆ ಅನುಮತಿ ನೀಡಬೇಕು ಹಾಗೂ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಘವು ಮನವಿ ಮಾಡಿಕೊಂಡಿದೆ.

ಸಂಘದ ಪ್ರಕಾರ, ಕುಮಟಾದಲ್ಲಿ ದೀಪಾವಳಿ ಹಬ್ಬವು ಪರಿಪೂರ್ಣವಾಗಬೇಕಂದರೆ ಈ ಆಟಗಳಿಗೆ ಅನುಮತಿ ನೀಡುವುದು ಅತ್ಯಗತ್ಯ! ಇವು ಕೇವಲ ಆಟಗಳಲ್ಲ, ಬದಲಿಗೆ ಶತಮಾನಗಳ ಸಂಸ್ಕೃತಿಯ ಪ್ರತೀಕ ಎಂದು ಸಂಘದ ಮುಖಂಡರು ಮನವಿ ನೀಡುವ ಸಂದರ್ಭದಲ್ಲಿ ಹೇಳಿದರು.

1000236916

ಎಚ್ಚರಿಕೆ ಕೇಳಿ ದಂಗಾದ ಇಲಾಖೆ: ಸಂಘದ ವಾದ ಇಲ್ಲಿಗೇ ನಿಂತಿಲ್ಲ. ಒಂದು ವೇಳೆ ಈ ಮಹೋನ್ನತ ಆಟಗಳಿಗೆ ಅನುಮತಿ ನೀಡದೇ ಇದ್ದರೆ, ಕುಮಟಾ ತಾಲ್ಲೂಕಿನಲ್ಲಿ ಬೇರೆ ಯಾವುದೇ ಮನೋರಂಜನೆ ಕಾರ್ಯಕ್ರಮಕ್ಕೆ, ಹಬ್ಬ, ಜಾತ್ರೆ ಮತ್ತು ಉತ್ಸವಗಳಿಗೆ ಅನುಮತಿ ನೀಡಬಾರದು ಎಂದು ಸಂಘದವರು ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಅನುಮತಿ ನಿರಾಕರಿಸಿದರೆ “ಉಗ್ರ ಹೋರಾಟ” ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕುಮಟಾ | ದ.ಸಂ.ಸಮಿತಿ ಸಮಾಲೋಚನೆ ಸಭೆ: ಸಂಘಟನೆಯ ಬಲವರ್ಧನೆಗೆ ತೀರ್ಮಾನ

ಸಂಘದ ಈ ಬೇಡಿಕೆ ಕೇಳಿ ತಲೆ ಕೆಡಿಸಿಕೊಂಡಿರುವ ಪೊಲೀಸ್ ಇಲಾಖೆಯ ಅಧಿಕಾರಿಗಳು, “ನಾವು ಈ ಆಟಗಳನ್ನು ‘ಸಾಂಸ್ಕೃತಿಕ ಕಾರ್ಯಕ್ರಮ’ ಎಂದು ಪರಿಗಣಿಸಬೇಕೋ ಅಥವಾ ಬೇರೆ ರೀತಿಯಲ್ಲಿ ಪರಿಗಣಿಸಬೇಕೋ ಹಾಗೂ ಕಾನೂನಿನಲ್ಲಿ ಇದಕ್ಕೆ ಏನಾದರೂ ಅವಕಾಶ ಇದಿಯಾ ಅಥವಾ ಇಲ್ಲವೇ” ಎಂಬುದನ್ನು ನಿರ್ಧರಿಸಲಾಗದೆ ಗಲಿಬಿಲಿಗೊಂಡಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...