ಕುಮಟಾ | ಎಕ್ಸ್‌ಪ್ರೆಸ್ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

Date:

ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಕಳೆದ ರಾತ್ರಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಅಘನಾಶಿನಿ ನದಿಯ ಮೇಲಿನ ಮಿರ್ಜಾನ ಸಮೀಪ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ.

ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ವೆಲ್ಲಿಕುಲಂಗರ ನಿವಾಸಿ, ಬೇಬಿ ಥಾಮಸ್ ಪರಕಡನ್ (56) ಎಂದು ಗುರುತಿಸಲಾಗಿದೆ. ಎರ್ನಾಕುಲಂನಿಂದ ಮುಂಬೈಗೆ ತೆರಳುತ್ತಿದ್ದ ನೇತ್ರಾವತಿ ಎಕ್ಸ್‌ಪ್ರೆಸ್ ರೈಲಿನಿಂದ ಆಯತಪ್ಪಿ ಬಿದ್ದ ಪರಿಣಾಮಾದಿಂದ, ರೈಲ್ವೇ ಹಳಿಯ ಕೆಳಗಿರುವ ಜಲ್ಲಿಕಲ್ಲುಗಳಿಗೆ ತಲೆ ತಾಗಿ, ತಲೆ ಒಡೆದು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಮಿರ್ಜಾನ ರೈಲ್ವೆ ಸ್ಟೇಷನ್ ಟ್ರಾಕ್‌ಮೆನ್, ಪೊಲೀಸರಿಗೆ ದೂರು ನೀಡಿದ್ದಾರೆ. ಕುಮಟಾ ಪೊಲೀಸರು ಸ್ಥಳಕ್ಕಾಗಮಿಸಿ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತರ ಬಳಿ ಮೂರು ಚಿನ್ನದ ಸರಗಳು, ರೂ. 3980 ನಗದು ಮತ್ತು ಒಂದು ವಾಚ್ ಇದ್ದು, ಇವರ ಇಬ್ಬರು ಮಕ್ಕಳು ಕೂಡ ಇದೇ ಟ್ರೈನ್ ನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಬಂಗಾರದ ಚೈನ್ ಯಾರಾದರು ಕಳುವು ಮಾಡಬಹುದು ಎನ್ನುವ ಉದ್ದೇಶದಿಂದ ಚೈನ್ ತನ್ನ ಪರ್ಸನಲ್ಲಿ ಇಟ್ಟುಕೊಂಡಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದ್ದು, ವಸ್ತುಗಳನ್ನು ಮನೆಯವರಿಗೆ ಹಿಂತಿರುಗಿಸಲಾಗಿದೆ.

ಇದನ್ನೂ ಓದಿ: ಗೋಕರ್ಣ | ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ ಪತ್ತೆ!

ರೈಲ್ವೆ ಹಳಿಯ ಮೇಲೆ ಬಿದ್ದ ಮೃತ ದೇಹವನ್ನು ಆಂಬುಲೆನ್ಸ್ ಚಾಲಕರಾದ ಉಲ್ಲಾಸ ಮತ್ತು ನಚಿಕೇತ ಎಂಬುವವರು 1 ಕಿಮೀ ಹೊತ್ತಿ ಸಾಗಿ, ಅಲ್ಲಿಂದ ವಾಹನದ ಮೇಲೆ ಸರಕಾರಿ ಆಸ್ಪತ್ರೆಗೆ ತರುವಲ್ಲಿ ಸಹಕಾರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...