ಕುಮಟಾ | ಗ್ರಾಮಸ್ಥರ ಹೋರಾಟಕ್ಕೆ ಜಯ; ಮಿರ್ಜಾನ ಕೋಟೆ ರಸ್ತೆಗೆ ಗೇಟ್ ಅಳವಡಿಕೆ ನಿರ್ಧಾರ ಕೈಬಿಟ್ಟ ಪಂಚಾಯತ್.

Date:

ಕುಮಟಾ: ಐತಿಹಾಸಿಕ ಮಿರ್ಜಾನ ಕೋಟೆ ರಸ್ತೆಯಲ್ಲಿ ಅಕ್ರಮವಾಗಿ ಗೇಟ್ ಅಳವಡಿಸಿ ಸುಂಕ ವಸೂಲಿ ಮಾಡಲು ಮುಂದಾಗಿದ್ದ ಪಂಚಾಯತ್ ನಿರ್ಧಾರಕ್ಕೆ ಈಗ ಭಾರಿ ಹಿನ್ನಡೆಯಾಗಿದೆ.

ಗ್ರಾಮಸ್ಥರ ತೀವ್ರ ಪ್ರತಿಭಟನೆ ಹಾಗೂ ಮಾಧ್ಯಮಗಳ ನಿರಂತರ ವರದಿಗಾರಿಕೆಯ ಫಲವಾಗಿ ಎಚ್ಚೆತ್ತ ಮಿರ್ಜಾನ ಗ್ರಾಮ ಪಂಚಾಯತ್ ಆಡಳಿತವು ಗೇಟ್ ನಿರ್ಮಾಣದ ತನ್ನ ವಿವಾದಾತ್ಮಕ ನಿರ್ಧಾರವನ್ನು ಅಧಿಕೃತವಾಗಿ ಕೈಬಿಟ್ಟಿದೆ.

ಈ ಸಂಬಂಧ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸ್ಥರಿಗೆ ಲಿಖಿತವಾಗಿ ‘ಹಿಂಬರಹ’ ನೀಡುವ ಮೂಲಕ ಸೃಷ್ಟಿಯಾಗಿದ್ದ ಆತಂಕ ಮತ್ತು ವಿವಾದಕ್ಕೆ ತೆರೆ ಎಳೆದಿದ್ದಾರೆ. ಮಿರ್ಜಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ಸಾರ್ವಜನಿಕ ರಸ್ತೆಯಲ್ಲಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡುವ ಉದ್ದೇಶದಿಂದ ಗೇಟ್ ಅಳವಡಿಸಲು ಪಂಚಾಯತ್ ಈ ಹಿಂದೆ ತಯಾರಿ ನಡೆಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1000534723

ಸಾರ್ವಜನಿಕ ರಸ್ತೆಯನ್ನು ಈ ರೀತಿ ಬಂದ್ ಮಾಡುವುದು ಅಕ್ರಮ ಎಂದು ಖಂಡಿಸಿದ್ದ ಗ್ರಾಮಸ್ಥರು, ಪಂಚಾಯತ್ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದರು. ಈ ಗಂಭೀರ ವಿಷಯದ ಕುರಿತು ಮಾಧ್ಯಮಗಳಲ್ಲಿ ವಿಸ್ತೃತ ವರದಿಗಳು ಪ್ರಕಟವಾಗುವ ಮೂಲಕ ಸರ್ಕಾರದ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದವು.

ಈ ಸುದ್ದಿ ಓದಿದ್ದೀರಾ? ಕಾರವಾರ-ಅಂಕೋಲಾ ಕ್ಷೇತ್ರ ಜೆಡಿಎಸ್ ಪಾಲಾಗದು: ಮೈತ್ರಿ ವದಂತಿಗಳಿಗೆ ಬಿಜೆಪಿ ವಕ್ತಾರ ಮೊಗಟಾ ತಿರುಗೇಟು

ಮಾಧ್ಯಮಗಳ ವರದಿ ಹಾಗೂ ಸಾರ್ವಜನಿಕರ ಹೋರಾಟಕ್ಕೆ ಮಣಿದ ಮಿರ್ಜಾನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು (PDO), ಫೆಬ್ರವರಿ 17, 2026 ರಂದು ಅಧಿಕೃತ ಪತ್ರವನ್ನು ಹೊರಡಿಸಿದ್ದಾರೆ. “ಸಾರ್ವಜನಿಕ ಹಿತದೃಷ್ಟಿಯಿಂದ ಮಿರ್ಜಾನ ಕೋಟೆಯ ಹತ್ತಿರ ಛತ್ರಕೂರ್ವೆ ಮುಖ್ಯ ರಸ್ತೆಗೆ ಅಡ್ಡಲಾಗಿ ಯಾವುದೇ ಗೇಟ್ ಅಳವಡಿಸಲಾಗುವುದಿಲ್ಲ” ಎಂದು ಪತ್ರದಲ್ಲಿ ಸ್ಪಷ್ಟವಾದ ಭರವಸೆ ನೀಡಿದ್ದಾರೆ.

ಪಂಚಾಯತ್‌ನ ಈ ನಿರ್ಧಾರದಿಂದ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದು, ತಮ್ಮ ಹೋರಾಟಕ್ಕೆ ಬೆಂಬಲ ನೀಡಿದ ಮಾಧ್ಯಮಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

“ನಮ್ಮೂರಿನ ರಸ್ತೆಗೆ ಗೇಟ್ ಹಾಕದಂತೆ ನಾವು ಮಾಡಿದ ಮನವಿಗೆ ಪಂಚಾಯತ್ ಸ್ಪಂದಿಸಿ ಲಿಖಿತ ಭರವಸೆ ನೀಡಿದೆ. ನಮ್ಮ ಸಮಸ್ಯೆಯನ್ನು ಸಮಾಜಕ್ಕೆ ತಿಳಿಸಿ, ನ್ಯಾಯ ಒದಗಿಸಿಕೊಡಲು ಸಹಕರಿಸಿದ ಎಲ್ಲಾ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಗಳಿಗೆ ಛತ್ರಕೂರ್ವೆ ಗ್ರಾಮಸ್ಥರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ,” ಎಂದು ಗ್ರಾಮದ ಪ್ರಮುಖರಾದ ವಿನಾಯಕ ಪಟಗಾರ, ದಾಮೋದರ, ಲಕ್ಷ್ಮಣ, ಲೋಕೇಶ, ಚೆನ್ನಪ್ಪ, ದಯಾನಂದ ಹಾಗೂ ನವೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...