ಕುಮಟಾ ಪುರಸಭೆ ಕಚೇರಿ ಉದ್ಘಾಟನೆ ವೇಳೆ ಶಾಸಕ ದಿನಕರ ಶೆಟ್ಟಿ ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ

Date:

ಕುಮಟಾ ಮಾರುಕಟ್ಟೆಯಲ್ಲಿದ್ದ ಪುರಸಭೆ ಕಚೇರಿಯನ್ನು ಸ್ಥಳಾಂತರಿಸಿ, ಈಗ ಗಿಬ್ ಸರ್ಕಲ್ ಸಮೀಪದ ಹಳೆಯ ತಹಶೀಲ್ದಾರ್ ಕಚೇರಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 1ರಿಂದ ನವೀಕರಿಸಿದ ಹೊಸ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ಪ್ರಾರಂಭವಾಗಿದ್ದು, ಮೊದಲ ದಿನವೇ ಪುರಸಭೆ ನೂತನ ಕಚೇರಿಗೆ ಹೆಚ್ಚಿನ ಜನರು ಭೇಟಿ ನೀಡಿದ್ದಾರೆ. ಉದ್ಘಾಟನೆ ವೇಳೆ ಶಾಸಕ ದಿನಕರ್‌ ಶೆಟ್ಟಿ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಕ್ಸಮರ ಉಂಟಾಗಿದೆ.

ಹಳೆಯ ಕಚೇರಿಯಲ್ಲಿ ಜಾಗದ ಅಭಾವ, ಮಳೆಯ ಸಮಯದಲ್ಲಿ ಮಹಡಿಯಿಂದ ನೀರು ಸೋರುವ ತೊಂದರೆ, ಹಿಂದಿನ ಪುರಸಭೆ ಕಚೇರಿ ಮೇಲ್ಮಹಡಿಯಲ್ಲಿ ಇದ್ದಿದ್ದರಿಂದ ವೃದ್ಧರು ಹಾಗೂ ಅಂಗವಿಕಲರಿಗೆ ಮೆಟ್ಟಿಲು ಹತ್ತಿ ಬರುವುದು ಕಷ್ಟವಾಗುತ್ತಿತ್ತು, ಮತ್ತು ಕಚೇರಿಯ ಕೆಲಸಕ್ಕೆ ಬರುವ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಸರಿಯಾಗಿ ಇಲ್ಲದೆ ಇದ್ದಿದ್ದರಿಂದ ಟ್ರಾಫಿಕ್ ಸಮಸ್ಯೆ ಕೂಡ ಸಾಮಾನ್ಯವಾಗಿತ್ತು. ಸಭೆಗಳನ್ನು ಮಾಡಲು ಸ್ವಂತ ಸಭಾಂಗಣ ಇರದೇ, ಖಾಸಗಿ ಹಾಲ್‌ ಬಳಸಬೇಕಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಪುರಸಭೆ ಕಚೇರಿ ಸ್ಥಳಾಂತರ ಮಾಡಿದ್ದು ತುಂಬಾ ಅನುಕೂಲಕರವಾಗಿದೆ ಎಂದು ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.

ಹೊಸ ಕಚೇರಿಯಲ್ಲಿ ಪ್ರತಿಯೊಂದು ಇಲಾಖೆಗೆ ಪ್ರತ್ಯೇಕ ಕೊಠಡಿ ಕಲ್ಪಿಸಲಾಗಿದ್ದು, ಜನನ–ಮರಣ ಪ್ರಮಾಣಪತ್ರ, ಮಾಹಿತಿ ತಂತ್ರಜ್ಞಾನ, ಆರೋಗ್ಯ, ಲೆಕ್ಕಪತ್ರ, ಕಲ್ಯಾಣ ಯೋಜನೆಗಳು, ಕಾಮಗಾರಿ ಮತ್ತು ಕಟ್ಟಡ ಪರವಾನಗಿ ಸೇರಿದಂತೆ ಹಲವು ವಿಭಾಗಗಳು ಸುಧಾರಿತ ರೀತಿಯಲ್ಲಿ ಕಾರ್ಯನಿರ್ವಹಿಸಲಿವೆ. ಜೊತೆಗೆ ವಿಶಾಲ ಪಾರ್ಕಿಂಗ್, ಶೌಚಾಲಯ ಮತ್ತು ಸುಗಮ ಪ್ರವೇಶ ವ್ಯವಸ್ಥೆಯೂ ಸಾರ್ವಜನಿಕರಿಗೆ ಲಭ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಕಚೇರಿಯ ಮೊದಲ ದಿನವೇ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕರಾದ ದಿನಕರ ಶೆಟ್ಟಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಬಿಜೆಪಿ ಶಾಸಕರಾದ ದಿನಕರನ್ ಶೆಟ್ಟಿ ಹಾಗೂ ಕೆಲವು ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ಜಗಳ ತಲುಪಿತು. ಬಳಿಕ ಬಿಜೆಪಿ ಕಾರ್ಯಕರ್ತರು ಶಾಸಕರನ್ನು ಸಮಾಧಾನಪಡಿಸಿ ಸ್ಥಳದಿಂದ ಕರೆದುಕೊಂಡು ಹೋದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ–2026: 14,231 ಕರಡು ಮತದಾರರ ಪಟ್ಟಿ ಪ್ರಕಟ

ಶಾಸಕರ ಹೇಳಿಕೆ ಪ್ರಕಾರ ವಿವಾದಕ್ಕೆ ಕಾರಣವಾಗಿದ್ದು,  ಕಾಂಗ್ರೆಸ್ ಕಾರ್ಯಕರ್ತರು ಕೆಲವು ದಿನಗಳ ಹಿಂದೆ “ಪುರಸಭೆ ಕಚೇರಿ ನೂತನ ಕಟ್ಟಡಕ್ಕೆ ನಮ್ಮ ಪ್ರಯತ್ನದಿಂದ ಸ್ಥಳಾಂತರವಾಗಿದೆ” ಎಂಬ ರೀತಿಯ ಸುಳ್ಳು ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಎಲ್ಲಾ ಕೆಲಸಗಳನ್ನು ಅವರೇ ಮಾಡುವುದಾದರೆ ಹಳೆ ಬಸ್ ನಿಲ್ದಾಣ ಸೇರಿದಂತೆ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಅವರೇ ಮಾಡಲಿ ಎಂದು ಹೇಳಿದರು.

ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಭುವನ್ ಭಾಗವತ್ ಅವರು,“ನಾವು ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದಾಗ ಶಾಸಕರಾದ ದಿನಕರನ್ ಶೆಟ್ಟಿ ಅವರು ಕಾಂಗ್ರೆಸ್ ಮುಖಂಡರಿಗೆ ಮತ್ತು ಕಾರ್ಯಕರ್ತರಿಗೆ ಅವಮಾನಕಾರಿ ರೀತಿಯಲ್ಲಿ ಮಾತನಾಡಿದರು. ಇದರಿಂದ ಅಲ್ಲಿ ಗದ್ದಲಮಯ ವಾತಾವರಣ ಸೃಷ್ಟವಾಯಿತು,” ಎಂದು ಆರೋಪಿಸಿದರು. ಸ್ಥಳಾಂತರದೊಂದಿಗೆ ಸಾರ್ವಜನಿಕರಿಗೆ ಸುಸಜ್ಜಿತ ಸೌಲಭ್ಯ ಲಭ್ಯವಾದರೂ, ಉದ್ಘಾಟನಾ ದಿನವೇ ಶಾಸಕರ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ವಾಕ್ಸಮರ ನೂತನ ಕಚೇರಿಯ ಉದ್ಘಾಟನ ಸಂಭ್ರಮವನ್ನು ಮರೆಮಾಚಿತು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಪಿ. ಶ್ರವಣಕುಮಾರ, ತಹಶೀಲ್ದಾರ್ ಕೃಷ್ಣ ಕಾಮಕರ್, ತಾಲ್ಲೂಕು ಪಂಚಾಯಿತಿ ಅಧಿಕಾರಿ ಆರ್ ಎಲ್ ಭಟ್ಟ್, ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ, ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...