ಉಡುಪಿ | ಖಾಸಗಿ ಬಸ್ ಗೆ ಆಕಸ್ಮಿಕ ಬೆಂಕಿ, ಘಾಟಿಯಲ್ಲಿ ತಪ್ಪಿದ ಭಾರೀ ದುರಂತ

Date:

ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ‘ಶ್ರೀ ದುರ್ಗಾಂಬಾ’ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಸಂಭವ್ಯ ಭಾರೀ ಅವಘಡ ತಪ್ಪಿದೆಯೆಂದು ತಿಳಿದುಬಂದಿದೆ.

ಸುಮಾರು 35ಕ್ಕೂ ಅಧಿಕ ಪ್ರಯಾಣಿಕರು ಸಂಚರಿಸುತ್ತಿದ್ದ ಬಸ್‌ನ ಮುಂಭಾಗದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪರಿಸ್ಥಿತಿಯನ್ನು ಅರಿತ ಚಾಲಕ ಹಾಗೂ ನಿರ್ವಾಹಕರು ಬಸ್‌ನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಡೆ ಇಳಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

1009808541

ಆದರೆ ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿ ಸಂಪೂರ್ಣವಾಗಿ ದಹನಗೊಂಡಿದೆ. ಸ್ಥಳೀಯರು ಮತ್ತು ಪ್ರಯಾಣಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...