ಉಡುಪಿ | ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನರಿಗೆ ಕುಂದಾಪುರದಲ್ಲಿ ಸನ್ಮಾನ

Date:

ಬದುಕು ಬಯಸಿದಂತಲ್ಲ, ಬಂದಂತೆ ಎಂಬ ಮಾತಿನಂತೆ ಬದುಕಿನಲ್ಲಿ ಏನು ಬರುತ್ತದೋ ಅದನ್ನು ಸ್ವೀಕಾರ ಮಾಡಿ ಬದುಕಬೇಕು, ಅದೇ ನಮ್ಮ ಜೀವನವಾಗಿರಬೇಕು ಎಂಬುದನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಏನೆಲ್ಲಾ ತನಗೆ ಬೇಕೋ ಅದನೆಲ್ಲವನ್ನು ಅವರು ಸಿದ್ಧಿಸಿಕೊಂಡಿರುವ ಲಕ್ಷ್ಮೀ ಮಚ್ಚಿನ ಅವರು ಎಲ್ಲಾ ಜಾತಿ, ಧರ್ಮ, ರಾಜಕೀಯ ಪಕ್ಷದವರು ಪ್ರೀತಿಸುವ ವ್ಯಕ್ತಿತ್ವವುಳ್ಳಂತಹ ವ್ಯಕ್ತಿ ಎಂದು ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಕಿಶೋರ್ ಕುಮಾರ್ ಹೇಳಿದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕುಂದಾಪುರದ ಭಂಡಾರ್‌ಕರ‍್ಸ್ ಕಾಲೇಜಿನ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ನಡೆದ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಲಕ್ಷ್ಮೀ ಮಚ್ಚಿನ ಅವರು ಪತ್ರಿಕಾ ಧರ್ಮದಲ್ಲಿ, ಪತ್ರಿಕಾ ಕ್ಷೇತ್ರದಲ್ಲಿದ್ದರೂ ಕೂಡ ಇಡೀ ಜಗತ್ತು, ದೇಶ ಮತ್ತು ರಾಜ್ಯದ ರಾಜಕಾರಣದ, ಜಿಲ್ಲೆಯ ಮತ್ತು ರಾಜ್ಯದ ಇತರ ಜಿಲ್ಲೆಗಳ ಸಮಗ್ರ ಮಾಹಿತಿಯನ್ನು ನೀಡಬಲ್ಲ ಸಮರ್ಥ ವ್ಯಕ್ತಿ. ಯಾರು ಯಕ್ಷಗಾನವನ್ನು ಪ್ರೀತಿಸುತ್ತಾರೋ ಅವರು ಪ್ರತಿಯೊಬ್ಬರನ್ನೂ ಪ್ರೀತಿಸಬಲ್ಲರು ಮತ್ತು ಜಗತ್ತನ್ನು ಪ್ರೀತಿಸುತ್ತಾರೆ. ಯಕ್ಷಗಾನವನ್ನು ಪ್ರೀತಿಸುವುದರಿಂದ ನಿರಂತರವಾಗಿ ಬರೆಯಲು ಸಾಧ್ಯವಾಗುತ್ತದೆ, ಬೇರೆ ಬೇರೆ ವಿಷಯಗಳ ಬಗ್ಗೆ ಅಧ್ಯಯನ ಮಾಡಲು ಸಾಧ್ಯವಾಗುತ್ತದೆ. ಯಕ್ಷಗಾನ ಕ್ಷೇತ್ರ ಪರಿಪೂರ್ಣ ವ್ಯಕ್ತಿಯನ್ನು ನಿರ್ಮಾಣ ಮಾಡುತ್ತದೆ. ಅಂತಹ ಕ್ಷೇತ್ರದಲ್ಲಿರುವ ಲಕ್ಷ್ಮೀ ಮಚ್ಚಿನ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿರುವುದು ನಿಜಕ್ಕೂ ಆ ಪ್ರಶಸ್ತಿಗೆ ಬೆಲೆ ಬಂದಂತಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ ಮಾತನಾಡಿ, ಸಮಾಜದಲ್ಲಿ ಬದಲಾವಣೆಯನ್ನು ಪತ್ರಕರ್ತರಿಂದ ಮಾಡಲು ಸಾಧ್ಯವಾಗುತ್ತದೆ. ಪತ್ರಕರ್ತರ ಸಂಘ ಮನೆ ಇದ್ದ ಹಾಗೆ. ಪತ್ರಕರ್ತರಿಂದ ಆಯೋಜಿಸಲ್ಪಟ್ಟ ಈ ಸಮಾರಂಭದ ಆತ್ಮೀಯ ಕ್ಷಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪತ್ರಕರ್ತರು ಪ್ರೀತಿ ತೋರಿಸುವ ಪರಿ ಮೂಕನನ್ನಾಗಿ ಮಾಡಿದೆ. ಪತ್ರಿಕೋದ್ಯಮದಲ್ಲಿ ಜೀವ ಸವೆಸಿದ ಅನೇಕ ಮಂದಿ ಯೋಗ್ಯರಿದ್ದರೂ ಅವರೆಲ್ಲರ ಮುಂದೆ ನಾನು ಕುಬ್ಜ. ಪತ್ರಕರ್ತರ ಒಗ್ಗಟ್ಟು ಮುರಿಯುವುದು ತುಂಬಾ ಸುಲಭವಾದರೂ ಕುಂದಾಪುರ ಸಂಘದಲ್ಲಿ ಇದೆಲ್ಲ ನಡೆಯುದಿಲ್ಲ ಎಂದು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಪತ್ರಕರ್ತರು ಉತ್ಸಾಹದ ಚಿಲುಮೆಯಾಗಿ ಕೆಲಸ ಮಾಡುವಂತೆ ಆಗಬೇಕು. ಪತ್ರಕರ್ತರಲ್ಲಿ ಉತ್ಸಾಹ ಕಡಿಮೆಯಾದರೆ, ಉದಾಸೀನದ ಮನೋಭಾವ ಬೆಳೆದರೆ ನಾವು ಅರ್ಧ ಸತ್ತ ಹಾಗೆ. ಆದ್ದರಿಂದ ಯಾವುದೇ ಸುದ್ಧಿಯನ್ನು ಈಗಲೇ ಮಾಡುವ, ಇವತ್ತೇ ಮಾಡುವ ನಮ್ಮಲ್ಲಿ ಉತ್ಸಾಹ ಇದ್ದರೆ ಮಾತ್ರ ನಾವು ಬೇಡಿಕೆಯ ಪತ್ರಕರ್ತರಾಗಿ ಇರಲು ಸಾಧ್ಯವಾಗುತ್ತದೆ. ನಮ್ಮ ಉತ್ಸಾಹ ಹೊರಟು ಹೋಗುತ್ತದೆ. ಸಮಾಜದಲ್ಲಿ ಬೇಡಿಕೆ ಕಡಿಮೆಯಾಗುತ್ತದೆ. ನಮ್ಮ ಕುರಿತಾದ ನಿರೀಕ್ಷೆ ಹೋಗುತ್ತದೆ ಎಂದರು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಜಾನ್ ಡಿಸೋಜ ಶುಭಾಶಂಸನೆಗೈದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ಭಂಡಾರ್‌ಕರ‍್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶುಭಕರ ಆಚಾರ್ಯ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಪಸ್ಥಿತರಿದ್ದರು. ಇದೇ ಸಂದರ್ಭ ಎಸ್.ಸುಬ್ರಹ್ಮಣ್ಯ ಭಟ್ (ಸುಜಿ ಕುರ್ಯ), ನಜೀರ್ ಪೊಲ್ಯ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಕಾರ್ಯದರ್ಶಿ ಟಿ.ಲೋಕೇಶ ಆಚಾರ್ಯ ತೆಕ್ಕಟ್ಟೆ, ಬಿ.ರಾಘವೇಂದ್ರ ಪೈ ಗಂಗೊಳ್ಳಿ, ಚಂದ್ರಮ ತಲ್ಲೂರು ಮತ್ತು ಯೋಗೀಶ್ ಕುಂಭಾಶಿ ಅವರನ್ನು ಗೌರವಿಸಲಾಯಿತು.

ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ ಸ್ವಾಗತಿಸಿದರು. ಪತ್ರಕರ್ತ ಪ್ರಶಾಂತ ಪಾದೆ ಸನ್ಮಾನ ಪತ್ರ ವಾಚಿಸಿದರು. ಪತ್ರಕರ್ತ ಶ್ರೀಕಾಂತ ಹೆಮ್ಮಾಡಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಧಾನ ಕಾರ್ಯದರ್ಶಿ ಗಣೇಶ್ ಎಸ್.ಬೀಜಾಡಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...