ಕುಂದಾಪುರ | ಪತ್ನಿಯ ರೀಲ್ಸ್ ನೋಡುವ ಹವ್ಯಾಸಕ್ಕೆ ಕೋಪಗೊಂಡ ಪತಿ: ಹಲ್ಲೆಗೈದು ಕೊಲೆ!

Date:

ಪತ್ನಿಯ ರೀಲ್ಸ್ ನೋಡುವ ಹವ್ಯಾಸದ ಕಾರಣಕ್ಕೆ ದಂಪತಿಯ ನಡುವೆ ಜಗಳ ಉಂಟಾಗಿ ಪತ್ನಿಯನ್ನು ಪತಿ ಹೊಡೆದು ಕೊಂದ ದಾರುಣ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಹಿಲಿಯಾಣ ಎಂಬಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ರೇಖಾ ಪೂಜಾರಿ(26) ಎಂದು ಗುರುತಿಸಲಾಗಿದೆ. ಪತ್ನಿಯನ್ನು ಕೊಂದ ಆರೋಪಿಯನ್ನು ದರ್ಕಾಸು ನಿವಾಸಿ ಗಣೇಶ್ ಪೂಜಾರಿ (43) ಎಂದು ಗುರುತಿಸಲಾಗಿದೆ. ಕೊಲೆಗೀಡಾದ ರೇಖಾ ಅವರು ಶಂಕರನಾರಾಯಣದಲ್ಲಿರುವ ಪೆಟ್ರೋಲ್ ಬಂಕ್‌ವೊಂದರಲ್ಲಿ ಸಿಬ್ಬಂದಿಯಾಗಿ ದುಡಿಯುತ್ತಿದ್ದರು ಎಂದು ತಿಳಿದುಬಂದಿದೆ.

ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ, ಗುರುವಾರ ತಡರಾತ್ರಿ ಮನೆಗೆ ಬಂದು ಕ್ಷುಲ್ಲಕ ಕಾರಣಕ್ಕೆ ಹೆಂಡತಿಯೊಂದಿಗೆ ಜಗಳಕ್ಕೆ ನಿಂತಿದ್ದ. ಬಳಿಕ ಮಾತಿಗೆ ಮಾತು ಬೆಳೆದು ಉದ್ರೇಕಗೊಂಡ ಪತಿ ಗಣೇಶ್ ಪೂಜಾರಿ ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೇಖಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Kundapura Murder

ಪತ್ನಿ ಸತ್ತಿದ್ದಾಳೆ ಎನ್ನುವುದು ತಿಳಿಯುತ್ತಿದ್ದಂತೆ ಆರೋಪಿ ಗಣೇಶ್ ಪೂಜಾರಿ ಮನೆಯಿಂದ ಓಡಿ ಹೋಗಿದ್ದ. ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದ ಶಂಕರನಾರಾಯಣ ಪೊಲೀಸರು, ಕೊನೆಗೂ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಬಂಟ್ವಾಳ | ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಕೆಎಸ್‌ಆರ್‌ಟಿಸಿ: ‘ಬೋಳಂಗಡಿ’ಯಲ್ಲಿ ಬಸ್‌ ನಿಲ್ಲಿಸಲು ಆದೇಶ

ಗಣೇಶ್ ಪೂಜಾರಿ-ರೇಖಾ ದಂಪತಿಗಳಿಗೆ 6 ಮತ್ತು 3 ವರ್ಷದ ಇಬ್ಬರು ಗಂಡು ಮಕ್ಕಳಿದ್ದು, ಇದೀಗ ಆ ಮಕ್ಕಳು ಅನಾಥರಾಗಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೇರಿದಂತೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...