ಉಡುಪಿ | ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ‌ ಸಾವು

Date:

ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಿಜೂರು ಗ್ರಾಮದ ದೀಟಿಮನೆ ನಿವಾಸಿ ಮುತ್ತಯ್ಯ ದೇವಾಡಿಗ ಎಂಬುವರ ಹಿರಿಯ ಪುತ್ರ ವಾಸುದೇವ ದೇವಾಡಿಗ ಯಾನೇ ಮಣಿಕಂಠ (25) ಸಾವನ್ನಪ್ಪಿದ ದುರ್ದೈವಿ.

ವೃತ್ತಿಯಲ್ಲಿ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿದ್ದ ವಾಸುದೇವ ದೇವಾಡಿಗ ಸುಮಾರು 5 ಎಕ್ರೆ ಜಾಗದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಇನ್ನು ಎರಡು ಮೂರು ದಿನದಲ್ಲಿ ಕಲ್ಲಂಗಡಿ ಕಟಾವಿಗೆ ಸಿದ್ಧತೆ ಮಾಡಿದ್ದರು. ನಾಗೂರಿನಲ್ಲಿ ಫೆಬ್ರುವರಿ. 4 ರಂದು ಮಂಗಳವಾರ ಸಂಜೆ ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ತನ್ನ ವಾಹನವನ್ನು ಕಲ್ಲಂಗಡಿ ಹಣ್ಣಿನ ಲೋಡ್ ಮಾಡಲು ಮತ್ತೊಬ್ಬರಿಗೆ ನೀಡಿದ್ದು, ಅವರು ವಾಹನವನ್ನು ಅವರು ರೈಲ್ವೆ ಹಳಿ ಪಶ್ಚಿಮ ದಿಕ್ಕಿನಲ್ಲಿ ನಿಲ್ಲಿಸಿ ಕಲ್ಲಂಗಡಿ ಹಣ್ಣಿನ ಲೋಡ್ ಮಾಡುತ್ತಿದ್ದವರ ಬಳಿ ಮಾತನಾಡಿ ಹಣ ಕೊಟ್ಟು ಬರುತ್ತೇನೆಂದು ರೈಲ್ವೇ ಹಳಿ ದಾಟಿ ಹೋಗಿ ವಾಪಾಸು ಬರುತ್ತಿದ್ದರು.

ಈ ವೇಳೆ ಮಂಗಳೂರು ಕಡೆಯಿಂದ ಮಡಗಾಂವ್ ಕಡೆಗೆ ರೈಲು ಬರುತ್ತಿರುವುದನ್ನು ಕೊನೆಯ ಕ್ಷಣದಲ್ಲಿ ಗಮನಿಸಿದ ವಾಸುದೇವ ತಪ್ಪಿಸಿಕೊಳ್ಳಲು ಯತ್ನಿಸಿ ಹಳಿಯ ಪಕ್ಕಕ್ಕೆ ಸರಿದು ತಿರುಗಿದಾಗ ಮುಖಕ್ಕೆ ರೈಲು ಡಿಕ್ಕಿಯಾಗಿ ತಲೆ ಛಿದ್ರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಧ್ಯಾಹ್ನ ಊಟಕ್ಕೆ ಬಂದಿದ್ದ ವಾಸುದೇವ ತನ್ನ ಮನೆಯಲ್ಲಿ ಸಂಜೆ ಕೆಲಸ ಮುಗಿಸಿಕೊಂಡು ಬಂದು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಹೋಗಬೇಕು ಎಂದು ಹೇಳಿ ಹೋಗಿದ್ದ. ಅದರಂತೆ ಕೆಲಸ ಮುಗಿಸಿಕೊಂಡು ಬರುವಾಗಲೂ ಕೆಲಸದವರ ಬಳಿ ನನ್ನನ್ನು ಬೇಗ ಮನೆಗೆ ಬಿಡಿ, ಮಾರಣಕಟ್ಟೆ ಹೋಗಲು ಇದೆ ಎಂದೆ ಹೇಳಿ ವಾಹನದ ಚಾಲಕನನ್ನು ಮಾತನಾಡಿಸಲು ಹೋಗಿ ವಾಪಾಸ್ಸು ಬರುವಾಗ ದುರ್ಘಟನೆ ನಡೆದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಾಸುದೇವ ಮುತ್ತಯ್ಯ ದೇವಾಡಿಗರ ಐದು ಜನ ಮಕ್ಕಳ ಪೈಕಿ ಹಿರಿಯವನಾಗಿದ್ದಾನೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...