ಉಡುಪಿ | ಬೈಕ್ – ಬಸ್ ನಡುವೆ ಭೀಕರ ಅಪಘಾತ, ಹೊತ್ತಿ ಉರಿದ ಬೈಕ್, ಸವಾರ ಸ್ಥಳದಲ್ಲೇ ಸಾವು

Date:

ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಬೈಕ್ ಸುಟ್ಟು ಕರಕಲಾದ ಘಟನೆ ಜೂ. 16 ರಂದು ಸೋಮವಾರ ಮಧ್ಯಾಹ್ನ ಹೆಮ್ಮಾಡಿ-ವಂಡ್ಸೆ ರಸ್ತೆಯ ಮಲ್ಲಾರಿ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಸಿಗಂದೂರಿನ ಶರತ್‌ (25) ಎಂದು ಮಾಹಿತಿ ತಿಳಿದು ಬಂದಿದೆ. ಸಿಗಂದೂರು ನಿಂದ ಕುಂದಾಪುರಕ್ಕೆ ಸಂಬಂಧಿಕರ ಮನೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಕೆಂಚನೂರು ಮಲ್ಲಾರಿ ಬಳಿ ರಸ್ತೆಯ ತಿರುವಿನಲ್ಲಿ ಸವಾರ ನಿಯಂತ್ರಣ ತಪ್ಪಿ ಹೆಮ್ಮಾಡಿ ಕಡೆಯಿಂದ ವಂಡ್ಸೆ ಕಡೆಗೆ ಹೋಗುತ್ತಿದ್ದ ಶ್ರೀ ದುರ್ಗಾಂಬಾ ಬಸ್ಸಿಗೆ ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಶರತ್ ಸ್ಥಳದಲ್ಲೇ ಮೃತ ಪಟ್ಟಿದ್ದು ಬೈಕ್ ಸಂಪೂರ್ಣ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿದೆ.

ಕುಂದಾಪುರ ಸಂಚಾರ ಠಾಣೆ ಪೊಲೀಸ್ ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...