ಉಡುಪಿ | ಸಮುದ್ರದಲ್ಲಿ ಈಜಲು‌ ಹೋದ ನಾಲ್ವರು ಯುವಕರು; ಇಬ್ಬರು ನೀರುಪಾಲು

Date:

ಸಮುದ್ರಕ್ಕೆ ಈಜಲು ಹೋದ ನಾಲ್ವರು ಯುವಕರ ಪೈಕಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾಗಿ, ಇನ್ನೋರ್ವನನ್ನು ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಬಾಶಿಯ ಗಾಯಿತ್ರಿ ಕಂಪರ್ಟ್ ನಲ್ಲಿ ತಂಗಿದ್ದು ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದ್ದಿದ್ದಾರೆ.ಸಮುದ್ರದ ಅಬ್ಬರದ ಅಲೆಗೆ ನಾಲ್ವರು ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಆದರೆ ಆತ ಗಂಭೀರಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಯಿತು.

ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ರವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವ ನಾಪತ್ತೆ ಆಗಿದ್ದಾನೆ. ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...