ಬೆಂಗಳೂರು | ಹೋರಾಟದ ಕರಪತ್ರ ಹಂಚುತ್ತಿದ್ದ ಕಾರ್ಮಿಕ ನಾಯಕರ ಬಂಧನ

Date:

ಹೋರಾಟದ ಕರಪತ್ರಗಳನ್ನು ಹಂಚುತ್ತಿದ್ದ ಇಬ್ಬರು ಕಾರ್ಮಿಕ ನಾಯಕರನ್ನು ಬಂಧಿಸಿರುವ ಘಟನೆ ಬೆಂಗಳೂರು ನಗರದ ಬಿಟಿಎಂ ಲೇಔಟ್ ಸಮೀಪ ನಡೆದಿದೆ. ಬಂಧಿತರನ್ನು ಸಿಪಿಐ(ಎಂ) ಮುಖಂಡರು ಮತ್ತು ಕರ್ನಾಟಕ ಮಾಹಿತಿ ತಂತ್ರಜ್ಞಾನ ನೌಕರರ ಸಂಘದ(KITU) ನಾಯಕರುಗಳಾದ ಚಿತ್ರಾ ಮತ್ತು ಸುಹಾಸ್ ಅಡಿಗ ಎಂದು ಗುರುತಿಸಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನ ವಿರೋಧಿ, ರೈತ -ಕಾರ್ಮಿಕ ವಿರೋಧಿ ಧೋರಣೆಗಳ ವಿರುದ್ಧ ಡಿಸೆಂಬರ್ 21ರಂದು ಸಿಪಿಐಎಂ ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ಈ ಹೋರಾಟದ ಪ್ರಚಾರದ ಭಾಗವಾಗಿ ಈ ಇಬ್ಬರು ನಾಯಕರು ಕರಪತ್ರವನ್ನು ಹಂಚುತ್ತಿದ್ದರು. ಈ ವೇಳೆ ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ವಿಜಯಪುರ | ಏಳು ಮಂದಿ ಕಾರ್ಮಿಕರ ಸಾವು; ಗೋದಾಮು ಮಾಲೀಕರ ಬಂಧನಕ್ಕೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಈ ಇಬ್ಬರು ನಾಯಕರು ಸೇರಿದಂತೆ ಕೆಐಟಿಯು ಸಂಘದ ನಾಯಕರುಗಳು ಟಿಸಿಎಸ್,ಇನ್ಫೋಸಿಸ್, ವಿಪ್ರೋ ಮೊದಲಾದ ಕಂಪನಿಗಳಲ್ಲಿ ಏಕಪಕ್ಷೀಯವಾಗಿ ಕೆಲಸದಿಂದ ವಜಾಗೊಳಿಸುವ ಕಾರ್ಮಿಕ ವಿರೋಧಿ ಕ್ರಮಗಳನ್ನು ಪ್ರಶ್ನಿಸಿ ಕಾರ್ಮಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಕರಪತ್ರ ಹಂಚಿದ ಕಾರಣಕ್ಕೆ ಬಂಧನ ಸರಿಯಲ್ಲ ಎಂಬ ಆಕ್ರೋಶವನ್ನು ಕಾರ್ಮಿಕ ಮುಖಂಡರು ವ್ಯಕ್ತಪಡಿಸಿದ್ದು, ಕೂಡಲೇ ಇಬ್ಬರನ್ನೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...