ಅನುದಾನ ಕೊರತೆ: 20 ವರ್ಷಗಳಿಂದ ತೆವಳುತ್ತಿದೆ ಹಾಸನದ ವಿಮಾನ ನಿಲ್ದಾಣ ಕಾಮಗಾರಿ

Date:

ಉಡಾನ್ (UDAN) ಯೋಜನೆಯಡಿ ಹಾಸನದಲ್ಲಿ ನಿರ್ಮಾಣವಾಗುತ್ತಿರುವ ‘ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ’ದ ಕಾಮಗಾರಿಯು ಅನುದಾನದ ಕೊರತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯ ಅಡೆತಡೆಗಳಿಂದ ತೆವಳುತ್ತಿದೆ. ಟರ್ಮಿನಲ್ ಕಟ್ಟಡ, ಏರ್ ಟ್ರಾಫಿಕ್ ಕಂಟ್ರೋಲ್ ಟವರ್ (ATC), ರನ್-ವೇ ಹಾಗೂ ಏಪ್ರನ್ ಸೇರಿದಂತೆ 80%ಕ್ಕಿಂತ ಹೆಚ್ಚು ಕೆಲಸಗಳು ಪೂರ್ಣಗೊಂಡಿವೆ. ಆದರೂ, ಸದ್ಯದಲ್ಲೇ ಕಾಮಗಾರಿ ಪರಿಪೂರ್ಣವಾಗಿ ಪೂರ್ಣಗೊಳ್ಳುವ ಸೂಚನೆ ಇದ್ದಂತಿಲ್ಲ.

ವಿಮಾನ ನಿಲ್ದಾಣವು ಹಾಸನ ನಗರದಿಂದ 6 ಕಿಮೀ ದೂರದಲ್ಲಿರುವ ಭುವನಹಳ್ಳಿ ಬಳಿ 516 ಎಕರೆ ಪ್ರದೇಶದಲ್ಲಿ ತಲೆ ಎತ್ತುತ್ತಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು 2006ರಲ್ಲಿ ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆಗಿನ ಸರ್ಕಾರವು 244.33 ಎಕರೆ ಖರಾಬು ಜಮೀನು ಸೇರಿದಂತೆ ಒಟ್ಟು 1,224.16 ಎಕರೆ ಪ್ರದೇಶವನ್ನು ಈ ಉದ್ದೇಶಕ್ಕಾಗಿ ಮೀಸಲಿಟ್ಟಿತ್ತು. ಮೂಲ ಯೋಜನೆಯಲ್ಲಿ ವಾಯುಯಾನ ತರಬೇತಿ ಕೇಂದ್ರ, ಎಂಆರ್‌ಒ (MRO) ಸೌಲಭ್ಯ, ಇನ್‌ಲ್ಯಾಂಡ್ ಕಂಟೈನರ್ ಕೇಂದ್ರ, ಗಾಲ್ಫ್ ಕೋರ್ಸ್, ಹೋಟೆಲ್ ಮತ್ತು ಕಲ್ಯಾಣ ಸೌಲಭ್ಯಗಳು, ಟೆಕ್ ಪಾರ್ಕ್, ಕಾರ್ಗೋ ಟರ್ಮಿನಲ್ ಹಾಗೂ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳನ್ನು ರಫ್ತುಗಾಗಿ ಬೃಹತ್ ಕೋಲ್ಡ್‌ ಸ್ಟೋರೇಜ್‌ಗಳನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿತ್ತು. ಆದರೆ, ನಂತರದ ದಿನಗಳಲ್ಲಿ ರಾಜ್ಯ ಸರ್ಕಾರವು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲ ಯೋಜನೆಯನ್ನು ಕೈಬಿಟ್ಟು, ಕೇವಲ ಮೂಲಭೂತ ಸೌಲಭ್ಯಗಳಿರುವ ‘ನೋ-ಫ್ರಿಲ್’ (no-frill) ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ಧರಿಸಿತು.

ಆ ಬಳಿಕ, ಈ ಯೋಜನೆಯನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯವು ‘ಉಡಾನ್’ ಯೋಜನೆಯಡಿ ತನ್ನ ವ್ಯಾಪ್ತಿಗೆ ತೆಗೆದುಕೊಂಡಿತು. ಆದರೆ, ವಿಮಾನ ನಿಲ್ದಾಣದ ಸಮೀಪವೇ ಹಾದುಹೋಗುವ ಹೈ-ಟೆನ್ಷನ್ ವಿದ್ಯುತ್ ತಂತಿಗಳಿಂದಾಗಿಯೂ ಯೋಜನೆ ವಿಳಂಬವಾಯಿತು. ಪಕ್ಕದ ಜಮೀನಿನ ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್‌ ಕಂಬಗಳನ್ನು ನಿರ್ಮಿಸಲು ಮುಂಗಡವಾಗಿ ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದ್ದರು. ಅಂತಿಮವಾಗಿ ಅಧಿಕಾರಿಗಳು ರೈತರನ್ನು ವಿಶ್ವಾಸಕ್ಕೆ ಪಡೆದು ವಿದ್ಯುತ್‌ ಕಂಬಗಳನ್ನು ನಿರ್ಮಿಸಿ, ಹೈ-ಟೆನ್ಷನ್‌ ತಂತಿಗಳನ್ನು ಸ್ಥಳಾಂತರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದಾಗ್ಯೂ, ಯೋಜನೆಗೆ ಸರಿಯಾದ ಸಮಯಕ್ಕೆ ಅನುದಾನ ಬಿಡುಗಡೆಯಾಗದೇ ಇರುವ ಕಾರಣ, ಕಾಮಕಾರಿ ಕುಂಟುತ್ತಿದೆ. ಜೊತೆಗೆ, ವಿಮಾನ ನಿಲ್ದಾಣ, ಸುತ್ತಲಿನ ಗ್ರಾಮಗಳು ಹಾಗೂ ಮತ್ತು ಹಾಸನ ನಗರದ ನಡುವೆ ಸಂಪರ್ಕ ರಸ್ತೆಗಳನ್ನು ನಿರ್ಮಿಸಲು ಅಗತ್ಯವಿರುವ ಹೊಸ ಭೂಸ್ವಾಧೀನಕ್ಕಾಗಿ 143.67 ಕೋಟಿ ರೂ.ಗಳು ಅಗತ್ಯವಿರುವುದಾಗಿ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIIDC) ಹೇಳಿದೆ. ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದ ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲು ಇನ್ನೂ 200 ಕೋಟಿ ರೂ.ಗಳ ಅವಶ್ಯಕತೆಯಿದೆ ಎಂದು ವರದಿಯಾಗಿದೆ.

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಸದಸ್ಯರ ಪ್ರಕಾರ, ಈ ಯೋಜನೆ ಪೂರ್ಣಗೊಂಡರೆ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ರಾಜಕೀಯ ಇಚ್ಛಾಶಕ್ತಿಯಿದ್ದರೆ ಈ ವಿಮಾನ ನಿಲ್ದಾಣವು ದಶಕಗಳ ಹಿಂದೆಯೇ ಪೂರ್ಣಗೊಳ್ಳಬಹುದಿತ್ತು ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...