ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯ ಕೊರತೆ; ₹24 ಲಕ್ಷ ವೆಚ್ಚದಲ್ಲಿ ವಿದೇಶಿ ಪ್ರವಾಸ ಕೈಗೊಂಡಿರುವ ಅಧಿಕಾರಿಗಳು

Date:

ಚಳ್ಳಕೆರೆ ನಗರಸಭೆಯಲ್ಲಿ ಮೂಲಸೌಕರ್ಯಗಳಿಲ್ಲದೇ ನರಳುತ್ತಿದ್ದರೂ ಅಧಿಕಾರಿವರ್ಗ ಸುಮಾರು ₹24 ಲಕ್ಷ ವೆಚ್ಚದಲ್ಲಿ ಹೊರದೇಶಗಳಿಗೆ ಪ್ರವಾಸ ಕೈಗೊಳ್ಳುತ್ತಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ, ನಗರಸಭೆ ಮಾಜಿ ಸದಸ್ಯ ಟಿ ಜಿ ವೆಂಕಟೇಶ್ ಖಂಡಿಸಿದ್ದಾರೆ.

“ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರಸಭೆಯ 31 ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳಿಲ್ಲದೆ ಸಾರ್ವಜನಿಕರು ನಗರಸಭೆಗೆ ಆಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ವಾರ್ಡ್‌ಗಳ ಮೂಲ ಸೌಕರ್ಯಗಳಿಗೆ ₹1 ಲಕ್ಷ ಅನುದಾನವನ್ನೂ ನೀಡುತ್ತಿಲ್ಲವೆಂದು ಸ್ವತಃ ನಗರಸಭೆ ಸದಸ್ಯರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಲಕ್ಷಗಟ್ಟಲೆ ಹಣ ಖರ್ಚುಮಾಡಿ ಪ್ರವಾಸ ಮಾಡುವುದು ಎಷ್ಟು ಸರಿ” ಎಂದು ಟಿ ಜಿ ವೆಂಕಟೇಶ್ ಪ್ರಶ್ನಿಸಿದ್ದಾರೆ.

ನಗರಸಭೆ ಕಾರ್ಯಾಲಯ 1

ನಗರಸಭೆ ಅಧಿಕಾರಿಗಳ ಪ್ರವಾಸ ಕಾರ್ಯಕ್ರಮಕ್ಕೆ ಈಗಾಗಲೇ ಜಿಲ್ಲಾಧಿಕಾರಿ, ಕ್ಷೇತ್ರದ ಶಾಸಕರು ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ ಎನ್ನಲಾಗಿದೆ. ಕೂಡಲೇ ಆದೇಶವನ್ನು ರದ್ದುಪಡಿಸಬೇಕು. ಕೆಲ ವಾರ್ಡ್‌ಗಳ ಗಂಭೀರ ಸಮಸ್ಯೆಗಳನ್ನು ಪರಿಹರಿಸುವ ಕೆಲಸವಾಗಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಚ್ಛತಾ ಕಾರ್ಯಕ್ಕೆ ಬಳಕೆಯಾಗದ ರೀತಿ ಜೆಸಿಬಿ ಕೆಟ್ಟು ನಿಂತಿದ್ದು, ದುರಸ್ತಿಗೆ ಹಣದ ಕೊರತೆಯಿದೆಯೆಂದು ಹೇಳುತ್ತಿರುವ ನಗರಸಭೆಯ ಅಧಿಕಾರಿಗಳ ಪ್ರವಾಸಕ್ಕೆ ಯಾವ ಅನುದಾನ ಬಳಕೆಯಾಗುತ್ತಿದೆ ಎಂಬುದನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಎನ್‌ಎಸ್‌ಯುಐ

“ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಎಂದೇಳಿ ರಂಗಮಂದಿರ ಕಟ್ಟಡಕ್ಕೆ ಹೋದ ನಗರಸಭೆ ಆಡಳಿತ ವರ್ಗ ಅಲ್ಲೇ ಠಿಕಾಣಿ ಹೂಡಿದೆ. ತನಗಾಗಿ ಒಂದು ಕಟ್ಟಡವನ್ನೂ ಸಂಪೂರ್ಣವಾಗಿ ಕಟ್ಟಿಕೊಂಡಿಲ್ಲ. ಸಾರ್ವಜನಿಕರಿಂದ ಕಂದಾಯ ವಸೂಲಿ ಮಾಡುವ ನಗರಸಭಾ ಆಡಳಿತವು ವಾರ್ಡ್‌ಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುತ್ತಿಲ್ಲ” ಎಂದು ಆರೋಪಿಸಿದರು.

ಕೆಟ್ಟುನಿಂತಿರುವ ಜೆಸಿಬಿ
ಕೆಟ್ಟುನಿಂತಿರುವ ಜೆಸಿಬಿ(ಚಳ್ಳಕೆರೆ ನಗರಸಭೆ)

“ಬಜೆಟ್‌ನಲ್ಲಿ ಘೋಷಣೆಯಾಗುವ ಕಾಮಗಾರಿಗಳು ಮತ್ತು ಅನುದಾನ ಬಳಕೆಯಲ್ಲಿ ಯಾವುದೇ ಪಾರದರ್ಶಕತೆ ಇರುವುದಿಲ್ಲವೆಂದು ಶುಕ್ರವಾರ ನಗರಸಭೆ ಅಧ್ಯಕ್ಷೆ ಜೈತುನ್‌ಬಿ ಅಧ್ಯಕ್ಷತೆಯ ಬಜೆಟ್ 2ನೇ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರೂ ಕೂಡ ಗಂಭೀರ ಆರೋಪ ಮಾಡಿದ್ದಾರೆ. ಇಂತಹ ಸಮಯದಲ್ಲಿ ಸಾರ್ವಜನಿಕರ ತೆರಿಗೆ ಹಣದಲ್ಲಿ ವಿದೇಶಿ ಪ್ರವಾಸ ಕೈಗೊಳ್ಳುವುದು ಎಷ್ಟು ಸೂಕ್ತ?” ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...