ಕೊಪ್ಪಳ | ಶಿಕ್ಷಕರ ಕೊರತೆ : ಒಬ್ಬ ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಂಡ 40 ವಿದ್ಯಾರ್ಥಿಗಳು!

Date:

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಿಸುತ್ತಿಲ್ಲ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಶಾಲೆಯಲ್ಲಿ 1 ರಿಂದ 5ನೇ ತರಗತಿವರೆಗೆ ಒಟ್ಟು 40 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಒಬ್ಬರೂ ಖಾಯಂ ಶಿಕ್ಷಕರಿಲ್ಲದ ಕಾರಣ ಓರ್ವ ಅತಿಥಿ ಶಿಕ್ಷಕರೇ ಐದು ತರಗತಿಗಳಿಗೆ ಪಾಠ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ರಾಂಪೂರ ಗ್ರಾಮ ಸಮೀಪದ ಮುಸ್ಲಾಪುರ ಗ್ರಾಮದ ಶಿಕ್ಷಕರೊಬ್ಬರನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದ್ದಾರೆ. ಆದರೆ ಅವರೂ ದಿನ ಬಿಟ್ಟು ದಿನ ಬರುವ ಕಾರಣ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಂಠಿತಗೊಳ್ಳುತ್ತಿದೆ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದರು.

ʼಶಾಲೆಗೆ ಕನಿಷ್ಠ ಮೂಲಸೌಕರ್ಯಗಳಾದ ಕಾಂಪೌಂಡ್, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ . ಇನ್ನು ಶಾಲಾ ಕೊಠಡಿಗಳ ಮೇಲ್ಛಾವಣಿ ಸೋರುತ್ತಿದ್ದರೂ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಹೊಸ ಕೋಣೆಗಳು ಮಂಜೂರಾಗಿ ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳಿಸದೇ ನನೆಗುದಿಗೆ ಬಿದ್ದಿದೆ. ಇದರಿಂದ ʼಮಕ್ಕಳಿಗೆ ಕೂರಲು ಜಾಗವಿಲ್ಲ, ಕಲಿಸುವ ಶಿಕ್ಷಕರಿಲ್ಲʼ ಎಂಬಂತಾಗಿದೆ. ಇಂತಹ ದುಸ್ಥಿತಿಯಲ್ಲಿ ಗುಣಮಟ್ಟ ಶಿಕ್ಷಣ ನಿರೀಕ್ಷಿಸಲು ಸಾಧ್ಯವಿಲ್ಲʼ ಎಂದು ಮಹಿಳಾ ಮುನ್ನಡೆ ಹೋರಾಟಗಾರ್ತಿ ಶೋಭಾ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 12 19 at 8.46.33 AM 1

ʼನಮ್ಮೂರಿನ ಸರ್ಕಾರಿ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲದಿರುವುದರಿಂದ ಶ್ರೀಮಂತರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುತ್ತಿದ್ದಾರೆ. ಬಡ ಕೂಲಿ ಕಾರ್ಮಿಕರ ಮಕ್ಕಳಿಗೆ ಇದೇ ಶಾಲೆ ಗತಿಯಾಗಿದೆ. ಸರ್ಕಾರಿ ಶಾಲೆಗಳಿಗೆ ಸರ್ಕಾರ ಎಲ್ಲ ಸೌಕರ್ಯಗಳು ಉಚಿತವಾಗಿ ನೀಡುತ್ತಿದೆ. ಆದರೆ ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಮಕ್ಕಳನ್ನು ಹೇಗೆ ಕಳಿಸುವುದು. ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಎಂದು ಶರಣಪ್ಪ ಪೂಜಾರ ಒತ್ತಾಯಿಸಿದರು.

ʼಶಾಲೆ ಪಕ್ಕದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಇರುವ ಕಾರಣ ವಿದ್ಯಾರ್ಥಿಗಳು ನಿತ್ಯವೂ ಭಯದಲ್ಲಿ ಒಡಾಡುವಂತಾಗಿದೆ. ಶಾಲೆಯ ಕಾಂಪೌಂಡ್ ಶಿಥಿಲಗೊಂಡ ಪರಿಣಾಮ ಸಂಜೆಯಾದರೆ ಶಾಲಾ ಆವರಣ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಪ್ರಾಥಮಿಕ ಶಿಕ್ಷಣದಿಂದ ಮಕ್ಕಳು ವಂಚಿತವಾಗಬಾರದು ಎಂಬ ಕಾರಣದಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರೂ ನಮ್ಮೂರು ಶಾಲೆಯ ಅವ್ಯವಸ್ಥೆ ತೀರಾ ಹದಗೆಟ್ಟಿದೆʼ ಎಂದು ಶಂಭು ಕಿರಣ ನಾಯಕ ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಂಬೇಡ್ಕರ್‌ರನ್ನು ಅವಮಾನಿಸಿದ ಅಮಿತ್‌ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಎನ್‌ಎಸ್‌ಯುಐ

ಈ ವಿಷಯ ಕುರಿತು ಮಾಹಿತಿಗಾಗಿ ಗಂಗಾವತಿಯ, ಕನಕಗಿರಿ ಬಿಇಒ ಅವರನ್ನು ಈದಿನ.ಕಾಮ್ ಸಂಪರ್ಕಿಸಲು ಪ್ರಯತ್ನಿಸಿತ್ತು. ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ.

IMG 20241219 WA0001
ಕೇಶವ ಕಟ್ಟಿಮನಿ
+ posts

ಕೃಷಿ, ಪುಸ್ತಕ ಓದುಗ,

ಫೀಲ್ಡ್ ಕೋರ್ಡಿನೇಟರ್,
ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಕೇಶವ ಕಟ್ಟಿಮನಿ
ಕೇಶವ ಕಟ್ಟಿಮನಿ
ಕೃಷಿ, ಪುಸ್ತಕ ಓದುಗ, ಫೀಲ್ಡ್ ಕೋರ್ಡಿನೇಟರ್, ಕೊಪ್ಪಳ ಮತ್ತು ಬಳ್ಳಾರಿ, ಮಾಸ್ ಮೀಡಿಯಾ ಫೌಂಡೇಶನ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...