ಮೈಸೂರು | ಕೆರೆ ತುಂಬಿಸುವ ಯೋಜನೆ ಮಂದಗತಿ; ಅಧಿಕಾರಿಗಳಿಗೆ ಸಚಿವರ ತರಾಟೆ

Date:

  • ಜುಲೈ ವೇಳೆಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ
  • ಮೈಸೂರು ಜಿಲ್ಲೆಯ 133 ಕೆರೆ, 17 ಕಟ್ಟೆ ತುಂಬಿಸುವ ಯೋಜನೆ

ರೈತರ ಕೃಷಿ ಚಟುವಟಿಕೆಗಳಿಗೆ ಮತ್ತು ಜನರಿಗೆ ಕುಡಿಯವ ನೀರನ್ನು ಒದಗಿಸುವ ಉದ್ದೇಶದಿಂದ 150 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಅವಧಿ ಮುಗಿದರೂ ಅಧಿಕಾರಿಗಳು ಪೂರ್ಣಗೊಳಿಸದಿರುವುದು ಬೇಸರ ತಂದಿದೆ ಎಂದು ಪಶುಪಾಲನೆ ಮತ್ತು ರೇಷ್ಮೆ ಸಚಿವ ಕೆ ವೆಂಕಟೇಶ್ ಬೇಸರ ವ್ಯಕ್ತಪಡಿಸಿದರು.

ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ಬುಧವಾರ 150 ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಕುರಿತು ಕಾವೇರಿ ನಿಗಮದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಚಿವರು ಮಾತನಾಡಿದರು.

“2017-18ನೇ ಸಾಲಿನಲ್ಲಿ ತಾಲೂಕಿನ ರೈತರು ಮತ್ತು ಸಾರ್ವಜನಿಕರಿಗೆ ಕಾವೇರಿ ನೀರನ್ನು ಒದಗಿಸಲು ಈ ಯೋಜನೆಯನ್ನು 18 ತಿಂಗಳಲ್ಲಿ ಪೂರ್ಣಗೊಳಿಸುವ ಗಡುವು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಆದರೆ, ನಂತರದಲ್ಲಿ ಗೆದ್ದು ಬಂದ ಶಾಸಕ ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ನಿರುತ್ಸಾಹದಿಂದ ಈ ಯೋಜನೆ ಹಳ್ಳ ಹಿಡಿದಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ ಈ ಯೋಜನೆಗೆ ವೇಗ ಸಿಗುವಂತಾಗಿ ರೈತರಿಗೆ ಉಪಯೋಗ ಸಿಗುವಂತಾಗಬೇಕು. ಆದ್ದರಿಂದ ಅಧಿಕಾರಿಗಳು ಇಂದಿನಿಂದಲೇ ಕೆಲಸ ಪುನರಾರಂಭಿಸಬೇಕು. ಪ್ರತಿದಿನ ನನಗೆ ಮಾಹಿತಿ ನೀಡಬೇಕು ಎಂದು ಎಚ್ಚರಿಸಿದರು.

ಹಿಂದೆ ಕರಡಿಲಕ್ಕನ ಕೆರೆ ಏತ ನೀರಾವರಿ ಯೋಜನೆಯನ್ನು ಜಾರಿಗೆ ತಂದ ಪರಿಣಾಮ ತಾಲೂಕಿನ ಅರ್ಧಭಾಗದಷ್ಟು ಹಳ್ಳಿಗಳು ಬೇಸಿಗೆಯಲ್ಲಿಯೂ ನೀರಿನ ತೊಂದರೆ ಇರಲಿಲ್ಲ. ಉಳಿದ ಅರ್ಧದಷ್ಟು ಹಳ್ಳಿಗಳು ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆ ಎದುರಿಸುತ್ತಿದ್ದವು. ಹಾಗಾಗಿ ರೂ. 300 ಕೋಟಿ ಅನುದಾನ ತಂದು 133 ಕೆರೆಗಳು 17 ಕಟ್ಟೆಗಳಿಗೆ ನೀರು ತುಂಬಿಸುವ ಕೆಲಸ ಆರಂಭಿಸಿ ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವ ಉದ್ದೇಶ ಹೊಂದಲಾಗಿತ್ತು ಎಂದರು.

ಈ ಬಾರಿ ಮುಂಗಾರು ಮಳೆ ಇನ್ನೂ ಪ್ರಾರಂಭವಾಗಿಲ್ಲ, ಈಗಾಗಲೇ ತಾಲೂಕಿನ ಹಲವಾರು ಕೆರೆಗಳು ಬತ್ತಿಹೋಗಿ ರೈತರು ಮತ್ತು ಜನಜಾನುವಾರುಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದನ್ನು ಮನಗಂಡ ಅಧಿಕಾರಿಗಳು ಶೀಘ್ರವಾಗಿ ಕೆಲಸ ಮುಗಿಸಬೇಕು. ಜುಲೈ 20ರ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನವರನ್ನು ಕರೆ ತಂದು ಅವರಿಂದಲೇ 150 ಕೆರೆಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯನ್ನು ಉದ್ಘಾಟಿಸಬೇಕು ಎಂದು ತಿಳಿಸಿದರು.

ಯೋಜನೆಯ ವಿವರ

ಮುಳುಸೊಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ. ತಾಲೂಕಿನ ಕೆಲವು ಪ್ರದೇಶ ಈ ಹಿಂದೆ ಬರಪೀಡಿತವಾಗಿದ್ದು, ಸುಮಾರು 79 ಗ್ರಾಮಗಳ ಕುಡಿಯುವ ನೀರಿನ ಕೊರತೆ ಎದುರಿಸುತ್ತಿವೆ. ತಾಲೂಕಿನ ಸ್ವಲ್ಪ ಭಾಗವು ಅರೆಮಲೆನಾಡು ಪ್ರದೇಶವಾಗಿದ್ದರೂ ಕೆಲವು ಹಳ್ಳಿಗಳಲ್ಲಿ ಮಳೆಯ ಕೊರತೆ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಾಗಿರುತ್ತದೆ. ಈ ಭಾಗದಲ್ಲಿ ಸರ್ಕಾರವು ಹಲವು ಕೊಳವೆ ಬಾವಿಗಳನ್ನು ಕೊರೆಸಿದ್ದರೂ ನೀರಿಕ್ಷಿತ ನೀರಿನ ಪ್ರಮಾಣ ದೊರಕುತ್ತಿಲ್ಲ. ಅಲ್ಲದೇ ಖಾಸಗಿ ಕೊಳವೆ ಬಾವಿಗಳು ಅಂತರ್ಜಲದ ಕೊರತೆಯಿಂದ ಬತ್ತಿಹೋಗುತ್ತಿದೆ.

ಈ ಪರಿಸ್ಥಿತಿಯನ್ನು ಅವಲೋಕಿಸಿದ ಸಚಿವ ಕೆ ವೆಂಕಟೇಶ್, ತಾಲೂಕಿನ ಒಳನಾಡು ಪ್ರದೇಶ ವ್ಯಾಪ್ತಿಯಲ್ಲಿ ಬರುವ 79 ಗ್ರಾಮಗಳ ಕೆರೆಗಳಿಗೆ ಕಾವೇರಿ ನದಿಯಿಂದ ಸುಮಾರು 133 ಕೆರೆ ಮತ್ತು 17 ಕಟ್ಟೆಗಳು ಸೇರಿ 150 ಕೆರೆಗಳಿಗೆ ನೀರು ತುಂಬಿಸಲು ಮುಂದಾಗಿದ್ದರು.

0.828 ಟಿ.ಎಂ.ಸಿ ನೀರು ಬಳಕೆ

ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪ್ರಕಾರ ಪಿರಿಯಾಪಟ್ಟಣ ತಾಲೂಕಿನ ಮುತ್ತಿನ ಮುಳುಸೊಗೆ ಗ್ರಾಮದ ಬಳಿ ಕಾವೇರಿ ನದಿಯಿಂದ ಮಳೆಗಾಲದ ಸಮಯದಲ್ಲಿ (ಸುಮಾರು ಮೂರುವರೆ ತಿಂಗಳು) ಏರು ಕೊಳವೆ ಮೂಲಕ ನೀರೆತ್ತಿ, ದೇಪೂರ ಗ್ರಾಮದ ಯೋಜಿತ ವಿತರಣಾ ತೊಟ್ಟಿ ನಂತರ ಎಡಭಾಗದ ಮತ್ತು ಬಲಭಾಗದ ಗುರುತ್ವಾಕರ್ಷಣೆಯ ಪೈಪ್‌ಲೈನ್ ಮುಖಾಂತರ 150 ಕೆರೆ ಕಟ್ಟೆಗಳಿಗೆ ನೀರು ತುಂಬಿಸಲು ಸುಮಾರು 0.828 ಟಿ.ಎಂ.ಸಿ (95 ಕ್ಯೂಸೆಕ್‌) ನೀರು ಯೋಜನೆಗೆ ಬೇಕಾಗುತ್ತದೆ. ಈ 0.828 ಟಿ.ಎಂ.ಸಿ ನೀರನ್ನು ಕಾವೇರಿ ನದಿಯಿಂದ ತೆಗೆದುಕೊಳ್ಳಲು ಅನುಮತಿ ಪಡೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಬಿರುಗಾಳಿಗೆ ಛಾವಣಿ ಸಮೇತ ತೂರಿ ಹೋದ ಮಗು; ಅಪಾಯದಿಂದ ಪಾರು

11,464 ಮೀಟರ್ ಕಾಲುವೆ
ಮುತ್ತಿನ ಮುಳ್ಳುಸೋಗೆ ಗ್ರಾಮದಿಂದ ಆರಂಭವಾಗಿ ಬಲದಂಡೆ ಮತ್ತು ಎಡದಂಡೆಗಳನ್ನು ನಿರ್ಮಿಸಿಕೊಂಡು 125 ಕೀ.ಮಿ ಉದ್ದದ ಈ ಯೋಜನೆಗಾಗಿ 11,464 ಮೀಟರ್ ನೀರಿನ ಕಾಲುವೆ ನಿರ್ಮಾಣವಾಗಲಿದೆ. 100 ಅಡಿ ಎತ್ತರದಿಂದ ಕೆರೆಗಳಿಗೆ ಕುಡಿಯುವ ನೀರು ತುಂಬಿಸಲಾಗುತ್ತದೆ. ಇದರಿಂದ ತಾಲೂಕಿನ ಕೆಲವು ಉಳಿದ ಕೆರೆಗಳಿಗೆ ಕಾವೇರಿ ನದಿ ಪಾತ್ರದಿಂದ ಪ್ರತಿ ವರ್ಷ 0.85 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಬೃಹತ್ ಯೋಜನೆಗಾಗಿ ಸರ್ವೆ ಕಾರ್ಯವನ್ನು ಜಿಯೋಸ್ಟಿಂ ಎಂಬ ಕಂಪನಿಯ ವತಿಯಿಂದ ಡಿಜಿಟಲ್ ಸರ್ವೆ ಮಾಡಲಾಗಿದ್ದು, ಆಲನಹಳ್ಳಿ, ಚೌಡೇನಹಳ್ಳಿ, ನಂದಿನಾಥಪುರ ಮಾರ್ಗವಾಗಿ ಪಿರಿಯಾಪಟ್ಟಣಕ್ಕೆ ಕೊನೆಯಾದರೆ ಮತ್ತೊಂದು ನಾಲೆ ಕಂಪಲಾಪುರದಲ್ಲಿ ಅಂತ್ಯಗೊಳ್ಳುತ್ತದೆ.

ಯೋಜನೆ ಈಡೇರುತ್ತಿರುವುದು ನನ್ನ ಭಾಗ್ಯ

“ರಾಜ್ಯದ ಅತಿದೊಡ್ಡ ಏತ ನೀರಾವರಿ ಯೋಜನೆಗಳಲ್ಲಿ ಈ ಯೋಜನೆಯೂ ಒಂದು. ಕರಡಿಲಕ್ಕನ ಕೆರೆ ಏತ ನೀರಾವರಿ ಯೋಜನೆಯನ್ನು 1986ರಲ್ಲಿ ಮಾಡಿಸಿದ್ದೆ, ಈಗ ಮತ್ತೆ 300 ಕೋಟಿ ಖರ್ಚು ಮಾಡಿ 150 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡುವ ತಾಲೂಕಿನ ಜನರ ಮತ್ತು ರೈತರ ಬಹುದಿನಗಳ ಬೇಡಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರದಿಂದ ಈಡೇರುತ್ತಿರುವುದು ನನ್ನ ಭಾಗ್ಯ” ಎಂದು ಸಚಿವ ಕೆ ವೆಂಕಟೇಶ್‌ ಹರ್ಷ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...