ಬೀದರ್‌ | ಈ ಊರಿನ ಮಕ್ಕಳಿಗೆ ಲಕ್ಷ್ಮಿ ದೇವಸ್ಥಾನವೇ ಶಾಲೆ!

Date:

ಹುಮನಾಬಾದ್‌ ತಾಲೂಕಿನ ಬೋತಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ವಂತ ಕಟ್ಟಡವಿಲ್ಲ. ಇರುವ ಕೊಠಡಿಗಳು ಶಿಥಿಲಾವಸ್ಥೆಗೆ ತಲುಪಿವೆ. ಹೀಗಾಗಿ ಕಳೆದೆರಡು ವರ್ಷಗಳಿಂದ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಕುಳಿತು ಪಾಠ-ಪ್ರವಚನ ಕೇಳುತ್ತಿದ್ದಾರೆ.

ಶಾಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಒಟ್ಟು 17 ಮಕ್ಕಳು ಓದುತ್ತಿದ್ದಾರೆ. ಇಬ್ಬರು ಶಿಕ್ಷಕರಿದ್ದಾರೆ. ಹಲವು ದಶಕಗಳ ಹಿಂದೆ ನಿರ್ಮಿಸಿದ್ದ ಕೊಠಡಿಗಳು ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಮಳೆಗಾಲದಲ್ಲಿ ಸೋರುತ್ತಿವೆ. ಸದ್ಯ ಒಂದೂ ಕೊಠಡಿ ಇಲ್ಲದಿದ್ದರಿಂದ ಇಲ್ಲಿನ ಮಕ್ಕಳಿಗೆ ಶಾಲೆ ಎದುರಿನ ಲಕ್ಷ್ಮಿ ದೇವಸ್ಥಾನವೇ ತರಗತಿ ಕೋಣೆಯಾಗಿ ಪರಿವರ್ತನೆಯಾಗಿದೆ.

ಒಂದೇ ಕಡೆ ನಾಲ್ಕು ತರಗತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ 1ರಿಂದ 7ನೇ ತರಗತಿವರೆಗೆ ಶಾಲೆ ಇತ್ತು. ಆದರೆ, ಶಾಲೆಗೆ ಕೊಠಡಿ, ಆಟದ ಮೈದಾನ, ಕಾಂಪೌಂಡ್‌ ಸೇರಿ ಇತರ ಮೂಲ ಸೌಕರ್ಯ ಕೊರತೆಯಿಂದಾಗಿ ದಾಖಲಾತಿ ಕುಸಿದಿತ್ತು. ಹೀಗಾಗಿ 2015ರಿಂದ ಇಲ್ಲಿ 1 ರಿಂದ 5ನೇ ತರಗತಿವರೆಗೆ ಮಾತ್ರ ಶಾಲೆ ನಡೆಯುತ್ತಿದೆ.

WhatsApp Image 2024 07 15 at 3.45.56 PM 1
ಒಂದೇ ಕಡೆ ಕುಳಿತು ಪಾಠ ಕಲಿಯುತ್ತಿರುವ ಮಕ್ಕಳು

ಶಾಲೆಯ ಎರಡು ಕೊಠಡಿಗಳ ಮೇಲ್ಛಾವಣಿ ಬಿರುಕು ಬಿಟ್ಟು ಕುಸಿಯುವ ಹಂತಕ್ಕೆ ತಲುಪಿವೆ. ಹೀಗಾಗಿ ಪಕ್ಕದ ಅಂಗನವಾಡಿ ಕೇಂದ್ರದ ಖಾಲಿ ಕೋಣೆಯೊಂದರಲ್ಲಿ ಓರ್ವ ಶಿಕ್ಷಕರು ನಾಲ್ಕು ತರಗತಿ ನಡೆಸಿದರೆ, ಇನ್ನೋರ್ವ ಶಿಕ್ಷಕರು ಉಳಿದ ತರಗತಿ ಮಕ್ಕಳಿಗೆ ಲಕ್ಷ್ಮಿದೇವಿ ದೇವಸ್ಥಾನದಲ್ಲಿ ಬೋಧಿಸಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಆಟದ ಮೈದಾನ, ಶೌಚಾಲಯ ಇಲ್ಲ:

ಈ ಶಾಲೆ ಗ್ರಾಮದ ಹೃದಯಭಾಗದಲ್ಲಿದೆ. ಈ ಹಿಂದೆ ರಸ್ತೆಗೆ ಅಂಟಿಕೊಂಡೇ ಕೋಣೆಗಳು ನಿರ್ಮಿಸಿದ್ದ ಕಾರಣ ಕಾಂಪೌಂಡ್‌ ನಿರ್ಮಿಸಲೇ ಇಲ್ಲ. ಇನ್ನು ಆಟದ ಮೈದಾನ, ಪ್ರತ್ಯೇಕ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಇಲ್ಲವಾದ ಪರಿಣಾಮ ಮಕ್ಕಳು ಶೌಚಕ್ಕೆ ಮನೆಗೆ ತೆರಳಬೇಕಾದ ಅನಿವಾರ್ಯತೆ ಇದೆ.

“ಶಾಲೆಗೆ ಮೌಲ ಸೌಕರ್ಯ ಕೊರತೆ ಇರುವ ಪೋಷಕರು ಗ್ರಾಮದ ಶಾಲೆಯ ಮೇಲೆ ನಿರುತ್ಸಾಹ ತೋರಿ ಖಾಸಗಿ ಶಾಲೆಗಳ ಕಡೆ ಮುಖ ಮಾಡಿದ್ದಾರೆ. ಇದರಿಂದ ಶಾಲೆಯ ದಾಖಲಾತಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಗೆ ಕೇವಲ 3 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದಾರೆ. ಹೀಗೆ ಮುಂದುವರೆದರೆ ಶಾಲೆ ಮುಚ್ಚುಬೇಕಾದ ಪರಿಸ್ಥಿತಿ ಬರುತ್ತದೆ” ಎನ್ನುತ್ತಾರೆ ಗ್ರಾಮಸ್ಥರು.

WhatsApp Image 2024 07 15 at 3.52.47 PM
ಶಾಲಾ ಮೇಲ್ಛಾವಣಿಯ ಸಿಮೆಂಟ್‌, ಕಬ್ಬಿಣದ ಸಲಾಕೆಗಳು ಕಳಚಿ ಬೀಳುತ್ತಿದೆ.

ʼಶಾಲೆಗೆ ಒಂದೂ ಕೋಣೆಗಳಿಲ್ಲ. ಹೀಗಾಗಿ ಪಕ್ಕದ ಅಂಗನವಾಡಿ ಕೋಣೆ ಹಾಗೂ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಕೂರಿಸಿ ತರಗತಿ ನಡೆಸಬೇಕಾದ ಪರಿಸ್ಥಿತಿ ಬಂದೊದಗಿದೆ. ಹೊಸ ಕಟ್ಟಡ ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆʼ ಎಂದು ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ವಿಶೇಷ | ಅಂಬಾನಿ ಪುತ್ರನ ವಿವಾಹೋತ್ಸವವೂ ಹಸಿವಿನ ಅಣಕವೂ

‌ʼಬೋತಗಿ ಪ್ರಾಥಮಿಕ ಶಾಲೆಗೆ ಕಟ್ಟಡ ಸಮಸ್ಯೆ ಗಮನಕ್ಕೆ ಬಂದಿದೆ. ಕೆಕೆಆರ್‌ಡಿಬಿ ಯೋಜನೆಯಡಿ ಒಂದು ಹೊಸ ಕಟ್ಟಡ ಮಂಜೂರಾಗಿದೆ. ಶಿಥಿಲಗೊಂಡ ಕೊಠಡಿಗಳ ದುರಸ್ತಿ ಕಾರ್ಯ ನಡೆಸಲಾಗುವುದುʼ ಎಂದು ಹುಮನಾಬಾದ್‌ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ್ ಈ ದಿನ.ಕಾಮ್‌ ಜೊತೆ ಮಾತನಾಡಿ ಹೇಳಿದರು.

ಬೋತಗಿ 1 ಬೋತಗಿ

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...